ವಿಭಾಗೀಯ ಮಟ್ಟದ ಅಂಚೆ ಸಾಧಕರಿಗೆ ಪ್ರಶಸ್ತಿ ಪ್ರದಾನ

KannadaprabhaNewsNetwork |  
Published : Feb 04, 2026, 01:15 AM IST
ಸಸದಸಸ | Kannada Prabha

ಸಾರಾಂಶ

ಚಿಕ್ಕಮಗಳೂರುಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಪರಿಣಾಮಕಾರಿ ಸೇವೆ ಮೂಲಕ ಅಂಚೆ ಇಲಾಖೆ ಜನರ ಮನೆ-ಮನಗಳನ್ನು ತಲುಪುತ್ತಿದೆ ಎಂದು ಚಿಕ್ಕಮಗಳೂರು ವಿಭಾಗದ ಅಂಚೆ ಅಧೀಕ್ಷಕ ಎನ್.ಬಿ.ಶ್ರೀನಾಥ್ ಹೇಳಿದರು.

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಪರಿಣಾಮಕಾರಿ ಸೇವೆ ಮೂಲಕ ಅಂಚೆ ಇಲಾಖೆ ಜನರ ಮನೆ-ಮನಗಳನ್ನು ತಲುಪುತ್ತಿದೆ ಎಂದು ಚಿಕ್ಕಮಗಳೂರು ವಿಭಾಗದ ಅಂಚೆ ಅಧೀಕ್ಷಕ ಎನ್.ಬಿ.ಶ್ರೀನಾಥ್ ಹೇಳಿದರು.

2023-24ನೇ ಸಾಲಿನ ಆರ್ಥಿಕ ವರ್ಷದಲ್ಲಿ ಅಂಚೆ ಉಳಿತಾಯ ಖಾತೆಗಳು, ಅಂಚೆ ಜೀವ ವಿಮೆ, ಗ್ರಾಮೀಣ ಅಂಚೆ ಜೀವ ವಿಮೆ, ಸ್ಪೀಡ್ ಪೋಸ್ಟ್, ಪಾರ್ಸೆಲ್, ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಸೇವೆಗಳು ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದ ಅಂಚೆ ನೌಕರರಿಗೆ ಪ್ರಶಸ್ತಿ ವಿತರಿಸಿ ಮಾತನಾಡಿದ ಅವರು, ಉನ್ನತ ತಂತ್ರಜ್ಞಾನ ಅಳವಡಿಸಿಕೊಳ್ಳುವ ಮೂಲಕ ಅಂಚೆ ಇಲಾಖೆಯಲ್ಲಿ ಗ್ರಾಹಕ ಸ್ನೇಹಿ ಸೌಲಭ್ಯ ದೊರೆಯುತ್ತಿವೆ. ಅಂಚೆ ಕಚೇರಿಗಳ ಸೌಲಭ್ಯ ಜನರ ಜೀವನ ಇನ್ನಷ್ಟು ಉತ್ತಮ ಪಡಿಸಲಿವೆ. ಈ ನಿಟ್ಟಿನಲ್ಲಿ ಅಂಚೆ ನೌಕರರು ನಿರಂತರ ಶ್ರಮಿಸುತ್ತಿದ್ದಾರೆ ಎಂದರು.ಕಳಸಾಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಎಚ್.ಎಂ.ನಾಗರಾಜ್ ರಾವ್ ಕಲ್ಕಟ್ಟೆ ವಿಶೇಷ ಉಪನ್ಯಾಸ ನೀಡಿದರು. ಇದೇ ವೇಳೆ ಚಿಕ್ಕಮಗಳೂರು ಅಂಚೆ ವಿಭಾಗದ ವ್ಯಾಪ್ತಿಯಲ್ಲಿರುವ ಎಲ್ಲಾ ಅಂಚೆ ಕಚೇರಿಗಳ ಪಿನ್ ಕೋಡ್ ಹಾಗೂ ಪಿನ್ ಕೋಡ್‌ಗೆ ಸಂಬಂಧಿಸಿದ ಮಾಹಿತಿ ಹೊಂದಿರುವ ಕೈಪಿಡಿ ಬಿಡುಗಡೆ ಮಾಡಲಾಗಿದೆ. ಸಹಾಯಕ ಅಂಚೆ ಅಧೀಕ್ಷಕ ಬಿ.ಜಯಕುಮಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಿ.ಎನ್.ಪ್ರದೀಪ್, ಅನುಷ ಹಾಗೂ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ದೊಡ್ಡೇಶ್ ಇದ್ದರು.

ಫೋಟೋ

ಚಿಕ್ಕಮಗಳೂರು ವಿಭಾಗ ಮಟ್ಟದ ಅಂಚೆ ಕಚೇರಿಗಳ ಪಿನ್‌ ಕೋಟ್‌ ಕೈಪಿಡಿಯನ್ನು ಅಂಚೆ ಅಧೀಕ್ಷಕ ಎನ್.ಬಿ.ಶ್ರೀನಾಥ್ ಬಿಡುಗಡೆ ಮಾಡಿದರು. ಸಹಾಯಕ ಅಂಚೆ ಅಧೀಕ್ಷಕ ಬಿ.ಜಯಕುಮಾರ, ಎಚ್.ಎಂ.ನಾಗರಾಜ್ ರಾವ್ ಕಲ್ಕಟ್ಟೆ ಮೊದಲಾದವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗಾಂಧಿ ಬಗ್ಗೆ ನಿರಂತರ ಅಪಪ್ರಚಾರ ಸಲ್ಲ
33 ಅಂಕ ನೀಡಿಕೆ ಬಗ್ಗೆ ಬರಗೂರು ಅಸಮಾಧಾನ