ಕನ್ನಡಪ್ರಭ ವಾರ್ತೆ ಅಥಣಿ
ಆಧುನಿಕ ಜೀವನಶೈಲಿಯ ಪ್ರಭಾವಕ್ಕೆ ಒಳಗಾಗಿರುವ ಯುವ ಜನತೆ ಏಡ್ಸ್‌ನಂತಹ ಮಹಾಮಾರಿಗೆ ಬಲಿಯಾಗುತ್ತಿರುವುದು ಕಳವಳಕಾರಿ. ಇದನ್ನು ತಡೆಗಟ್ಟಲು ಯುವ ಜನಾಂಗಕ್ಕೆ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು 11ನೇ ಹೆಚ್ಚುವರಿ ಜಿಲ್ಲಾ ಪ್ರಧಾನ ಸಿವಿಲ್ ನ್ಯಾಯಾಧೀಶ ಈರಣ್ಣ.ಇ.ಎಸ್ ಹೇಳಿದರು.ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ತಾಲೂಕ ಆರೋಗ್ಯ ಇಲಾಖೆ, ತಾಲೂಕಾ ಕಾನೂನು ಸೇವಾ ಸಮಿತಿ, ರೋಟರಿ ಸಂಸ್ಥೆ ಸೇರಿ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಏಡ್ಸ್ ಕುರಿತು ಜನ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು. ಏಡ್ಸ್ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆ, ಸರ್ಕಾರ ಮತ್ತು ಸಂಘ-ಸಂಸ್ಥೆಗಳು ಪ್ರಯತ್ನದಲ್ಲಿ ತೊಡಗಿವೆ. ಇದು ಯಶಸ್ವಿಯಾಗಲು ಸಾರ್ವಜನಿಕರು ಮತ್ತು ಯುವಕರಲ್ಲಿ ಜಾಗೃತಿ ಮೂಡಿಸುವದು ಅಗತ್ಯವಾಗಿದೆ ಎಂದು ಹೇಳಿದರು.ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ನಾಮದೇವ ಸಾಲಮಂಟಪಿ, ತಾಲೂಕಾ ವೈದ್ಯಾಧಿಕಾರಿ ಡಾ.ಬಸಗೌಡ ಕಾಗೆ ಮಾತನಾಡಿ, ಏಡ್ಸ್ ಮಾರಕ ಕಾಯಿಲೆಯಾಗಿದ್ದು, ಸಾರ್ವಜನಿಕರು ಸುರಕ್ಷಿತ ಕ್ರಮಗಳನ್ನು ಅನುಸರಿಸುವ ಮೂಲಕ ರೋಗ ತಡೆಗಟ್ಟಲು ಸಾಧ್ಯವಿದೆ. ರೋಗ ಬರದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ ಎಂದರು. ಈ ಸಂದರ್ಭದಲ್ಲಿ ನ್ಯಾಯಾಧೀಶರಾದ ರವಿ ಕುಮಾರ, ಓಂಕಾರ ಮೂರ್ತಿ, ರವೀಂದ್ರ ಹಾವರಗಿ, ಸುನಿತಾ ಪ್ರಬಣ್ಣವರ, ರೋಟರಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಗಜಾನನ ಮಂಗಸುಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಮಂಜುನಾಥ ಸೌಂದಲಗೇಕರ, ಡಾ.ಹನುಮಂತ ಕಲಮಡಿ, ಡಾ.ಕೀರ್ತಿ ಶೆಡಬಾಳೆ,ಡಾ.ಸಿ.ಎಸ್.ಪಾಟೀಲ, ಡಾ.ಆಶಾ ಗವಾಡೆ, ಆರೋಗ್ಯ ಪರಿವೀಕ್ಷಕಿ ಎ.ಬಿ.ಗೂಳಿಧರ, ರೋಟರಿ ಅಧ್ಯಕ್ಷ ಸಚಿನ್ ದೇಸಾಯಿ, ದೈಹಿಕ ಶಿಕ್ಷಣ ಅಧಿಕಾರಿ ಎಸ್.ಬಿ.ಕರೋಶಿ ಸೇರಿ ವಿದ್ಯಾರ್ಥಿಗಳು, ಎನ್‌ಸಿಸಿ ಘಟಕದ ಶಿಬಿರಾರ್ಥಿಗಳು ಜಾಥಾದಲ್ಲಿ ಭಾಗವಹಿಸಿದ್ದರು.