ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ

KannadaprabhaNewsNetwork |  
Published : Sep 14, 2026, 03:00 AM IST
ಪರಿಸರ ಸ್ನೇಹಿ ಗಣೇಶೋತ್ಸವದ ಜಾಗೃತಿ ಕಾರ್ಯಕ್ರಮ | Kannada Prabha

ಸಾರಾಂಶ

ಗಣೇಶ ಹಬ್ಬದ ಸಂದರ್ಭದಲ್ಲಿ ಮಾಲಿನ್ಯಕಾರಿ ಪಿ.ಒ.ಪಿ.ಮತ್ತು ರಾಸಾಯನಿಕ ಬಣ್ಣದ ಗಣೇಶ ಮೂರ್ತಿ ತಯಾರಿ ಬಿಟ್ಟು ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳನ್ನು ಮಾತ್ರ ಬಳಕೆ ಮಾಡಬೇಕು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆ ಪಿಆರ್‌ಒ, ಪರಿಸರ ಜಾಗೃತಿ ಆಂದೋಲನದ ಜಿಲ್ಲಾ ಸಂಚಾಲಕ ಟಿ.ಜಿ.ಪ್ರೇಮಕುಮಾರ್ ಹೇಳಿದರು.

ಕನ್ನಡಪ್ರಭವಾರ್ತೆ ಕುಶಾಲನಗರ

ಕುಶಾಲನಗರ ಪಟ್ಟಣದ ಪಿ.ಎಂ.ಶ್ರೀ.ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಪ್ರಕೃತಿ ಇಕೋ ಕ್ಲಬ್ ವತಿಯಿಂದ ನಡೆದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಶಾಲಾ ಮೈದಾನದಲ್ಲಿ ಶಾಲೆಯ ನೂರಕ್ಕೂ ಹೆಚ್ಚು ಮಕ್ಕಳು ಮಣ್ಣಿನಿಂದ ವಿವಿಧ ಮಾದರಿ ಗಣೇಶ ಮೂರ್ತಿ ತಯಾರಿಸಿ ಪರಿಸರ ಜಾಗೃತಿ ಸಂದೇಶ ನೀಡಿದರು.

ಮುಖ್ಯೋಪಾಧ್ಯಾಯ ಕೆ.ಎಸ್.ಸಣ್ಣಸ್ವಾಮಿ ಇಕೋ ಕ್ಲಬ್ ನ ಉಸ್ತುವಾರಿ ಶಿಕ್ಷಕಿ ಕೆ.ಆರ್.ಶಿಲ್ಪ, ಶಾಲೆಯ ಗೈಡ್ಸ್ ಕ್ಯಾಪ್ಟನ್ ಪಿ.ಪಿ.ಭವ್ಯ ಮಾತನಾಡಿದರು. ಉತ್ತಮವಾಗಿ ಮಣ್ಣಿನ ಗಣೇಶ ಮೂರ್ತಿಗಳನ್ನು ತಯಾರಿಸಿದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಂಗಳೂರು ಸಚಿವ ಸಂಪುಟ ಸಭೆಗೆ ಬಿಜೆಪಿ ದ.ಕ.ದ 44 ಬೇಡಿಕೆಗಳ ಪಟ್ಟಿ ಸಲ್ಲಿಕೆ
ಜನತೆಗೆ ಪ್ರಜಾ ಸೇವೆಯಡಿ ನ್ಯಾಯ ದೊರೆಯಲು ಅವಕಾಶ: ಅಶೋಕ್ ರೈ