ಕನ್ನಡಪ್ರಭ ವಾರ್ತೆ ಯಾದಗಿರಿ
ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ನಡೆದ ಲೋಕಸಭಾ ಚುನಾವಣೆಗಾಗಿ ರಚಿಸಲಾದ ವಿವಿಧ ಅಧಿಕಾರಿಗಳ ತಂಡಗಳ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮುಂಬರುವ ಲೋಕಸಭಾ ಚುನಾವಣೆ ಪಾರದರ್ಶಕವಾಗಿ ನಡೆಯಲು ಅನುಕೂಲವಾಗುವಂತೆ ಮುಂಚಿತವಾಗಿ ಚುನಾವಣಾ ಮಾರ್ಗಸೂಚಿಗಳ ಬಗ್ಗೆ ಅರಿವು ಹೊಂದಬೇಕು. ಮಾದರಿ ನೀತಿ ಸಂಹಿತೆ ಕುರಿತು ಸಂಪೂರ್ಣ ಜ್ಞಾನ ಹೊಂದಬೇಕು. ಚುನಾವಣಾ ಕಾಯ್ದೆ ಬಗ್ಗೆ ಜ್ಞಾನ ಹೊಂದಬೇಕು. ಈ ದಿಸೆಯಲ್ಲಿ ಇಂತಹ ತರಬೇತಿ ಸಹಕಾರಿಯಾಗಲಿವೆ ಎಂದು ಹೇಳಿದರು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗರಿಮಾ ಪನ್ವಾರ ಮಾತನಾಡಿ, ಮಾದರಿ ನೀತಿ ಸಂಹಿತೆ ಸಂದರ್ಭದಲ್ಲಿ ವಿವಿಧ ತಂಡಗಳು ತಮ್ಮ ಕರ್ತವ್ಯವನ್ನು ಜವಾಬ್ದಾರಿಯಿಂದ ನಿಭಾಯಿಸಬೇಕು. ತಮ್ಮ ಆರೋಗ್ಯದ ಬಗ್ಗೆ ಗಮನ ನೀಡಬೇಕು. ನೀತಿ ಸಂಹಿತೆಯು ಜಾರಿಯಾದ ತಕ್ಷಣ ಕ್ಷೇತ್ರ ಮಟ್ಟದ ತಮ್ಮ ಚಟುವಟಿಕೆ ಚುರುಕುಗೊಳ್ಳಲಿವೆ ಎಂದು ಹೇಳಿದರು.
ಈ ವೇಳೆ ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್ ಸೇರಿದಂತೆ ಎ.ಆರ್.ಓ. ಗಳು ಇದ್ದರು.