ಸಾಮಾನ್ಯ ಆರೋಗ್ಯದ ಬಗ್ಗೆ ಅರಿವು ಅಗತ್ಯ: ಡಾ. ಕಾವ್ಯಾ

KannadaprabhaNewsNetwork |  
Published : Apr 09, 2025, 12:31 AM IST
07ಕಾವ್ಯ | Kannada Prabha

ಸಾರಾಂಶ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಭಾರತೀಯ ರೆಡ್‌ಕ್ರಾಸ್ ಉಡುಪಿ ಜಿಲ್ಲೆ ಮತ್ತು ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರಗಳ ಸಹಯೋಗದೊಂದಿಗೆ ‘ವಿಶ್ವ ಆರೋಗ್ಯ ದಿನಾಚರಣೆ’ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿಜನರಿಗೆ ಸಾಮಾನ್ಯ ಆರೋಗ್ಯದ ಬಗ್ಗೆ ಅರಿವು ಮೂಡಿಸುವುದು ಇಂದಿನ ಅಗತ್ಯ. ಈ ಅರಿವಿನಿಂದ ಹಲವು ರೋಗಗಳು ಬರದಂತೆ ತಡೆಯಲು ಸಾಧ್ಯ. ಆಹಾರ, ನಿದ್ರೆ, ಮನೋನಿಗ್ರಹಗಳು ಸದೃಢ ಆರೋಗ್ಯಕ್ಕೆ ಅತಿ ಅಗತ್ಯ ಎಂದು ಎ.ವಿ.ಬಾಳಿಗಾ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಕಾವ್ಯಾ ಟಿ. ಹೇಳಿದರು.ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಭಾರತೀಯ ರೆಡ್‌ಕ್ರಾಸ್ ಉಡುಪಿ ಜಿಲ್ಲೆ ಮತ್ತು ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರಗಳ ಸಹಯೋಗದೊಂದಿಗೆ ನಡೆದ ‘ವಿಶ್ವ ಆರೋಗ್ಯ ದಿನಾಚರಣೆ’ಯಲ್ಲಿ ಉಪನ್ಯಾಸ ನೀಡಿದರು.ಕಾರ್ಯಕ್ರಮ ಉದ್ಘಾಟಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ., ಇಂದು ಜನರ ಬದುಕಿನ ಮೇಲೆ ತಾಂತ್ರಿಕತೆಯ ಪ್ರಭಾವ ಇರುವುದರಿಂದ ಆರೋಗ್ಯದ ಮೇಲೂ ಪರಿಣಾಮವಾಗಿದೆ ಎಂದರು.ವಿಕಲಚೇತನರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ರತ್ನಾ ಸುವರ್ಣ, ಇಲಾಖೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.ರೆಡ್‌ಕ್ರಾಸ್ ಉಪಸಭಾಪತಿ ಡಾ. ಅಶೋಕ್ ಕುಮಾರ್ ವೈ.ಜಿ. ಅಧ್ಯಕ್ಷತೆ ವಹಿಸಿದ್ದರು. ರೆಡ್‌ಕ್ರಾಸ್ ಆಡಳಿತ ಮಂಡಳಿಯ ಸದಸ್ಯ ಚಂದ್ರಶೇಖರ್, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಇಲಾಖೆಯ ಯೋಜನಾಧಿಕಾರಿ ಶಿವಾಜಿ, ವಿಕಲಚೇತನ ಪುನರ್ವಸತಿ ಕೇಂದ್ರದ ನೋಡಲ್ ಅಧಿಕಾರಿ ಜಯಶ್ರೀ ಉಪಸ್ಥಿತರಿದ್ದರು.

ರೆಡ್‌ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ರೆಡ್‌ಕ್ರಾಸ್ ಖಜಾಂಚಿ ರಮಾದೇವಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌