ವಿದ್ಯಾರ್ಥಿಗಳಿಗೆ ಎಚ್‌ಐವಿ ಕುರಿತು ಜಾಗೃತಿ

KannadaprabhaNewsNetwork |  
Published : Nov 17, 2026, 01:45 AM IST
16ಎಚ್ಎಸ್ಎನ್16 :  | Kannada Prabha

ಸಾರಾಂಶ

ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಘಟಕ, ಹಾಸನ ಹಾಗೂ ಸಾರ್ವಜನಿಕ ಆಸ್ಪತ್ರೆ, ಚನ್ನರಾಯಪಟ್ಟಣದ ಐಸಿಟಿಸಿ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳಿಗಾಗಿ ಎಚ್‌ಐವಿ/ಏಡ್ಸ್ ಜಾಗೃತಿ ಕಾರ್ಯಕ್ರಮ ನಡೆಯಿತು. ಬೋಧಕ ವರ್ಗದ ಸದಸ್ಯರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಎಚ್‌ಐವಿ/ಏಡ್ಸ್ ಕುರಿತು ಜಾಗೃತಿ ಮೂಡಿಸುವುದು, ಆರೋಗ್ಯ ಶಿಕ್ಷಣವನ್ನು ಉತ್ತೇಜಿಸುವುದು ಹಾಗೂ ರೋಗದ ತಡೆಗಟ್ಟುವಿಕೆ ಮತ್ತು ಆರೈಕೆಯ ಬಗ್ಗೆ ಜವಾಬ್ದಾರಿಯುತ ಮನೋಭಾವ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿತು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಘಟಕ, ಹಾಸನ ಹಾಗೂ ಸಾರ್ವಜನಿಕ ಆಸ್ಪತ್ರೆ, ಚನ್ನರಾಯಪಟ್ಟಣದ ಐಸಿಟಿಸಿ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳಿಗಾಗಿ ಎಚ್‌ಐವಿ/ಏಡ್ಸ್ ಜಾಗೃತಿ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಘಟಕ ಜಿಲ್ಲಾ ಮೇಲ್ವಿಚಾರ ರವಿಕುಮಾರ್ ವಿದ್ಯಾರ್ಥಿಗಳಿಗೆ ಏಡ್ಸ್ ಬಗ್ಗೆ ಜಾಗೃತಿ ಮೂಡಿಸಿದರು.

ವೈದ್ಯ ಸ್ಕೂಲ್ ಆಫ್ ಇನ್ಸ್ಟಿಟ್ಯೂಟ್‌ನ ಪ್ರಾಂಶುಪಾಲರಾದ ಅರುಣ್ ಕುಮಾರ್ ಬಿ. ಎಲ್., ಬೋಧಕ ವರ್ಗದ ಸದಸ್ಯರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಎಚ್‌ಐವಿ/ಏಡ್ಸ್ ಕುರಿತು ಜಾಗೃತಿ ಮೂಡಿಸುವುದು, ಆರೋಗ್ಯ ಶಿಕ್ಷಣವನ್ನು ಉತ್ತೇಜಿಸುವುದು ಹಾಗೂ ರೋಗದ ತಡೆಗಟ್ಟುವಿಕೆ ಮತ್ತು ಆರೈಕೆಯ ಬಗ್ಗೆ ಜವಾಬ್ದಾರಿಯುತ ಮನೋಭಾವ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿತು.ಭವಿಷ್ಯದ ಆರೋಗ್ಯ ಸೇವಾ ವೃತ್ತಿಪರರಲ್ಲಿ ಸಾಮಾಜಿಕ ಜವಾಬ್ದಾರಿ ಮತ್ತು ಆರೋಗ್ಯ ಜಾಗೃತಿಯನ್ನು ಬೆಳೆಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವು ಅರ್ಥಪೂರ್ಣ ಹಾಗೂ ಸ್ಮರಣೀಯವಾಗಿತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವೃಕ್ಷಮಾತೆ ಡಾ ಸಾಲುಮರದ ತಿಮ್ಮಕ್ಕ ಸ್ಮರಣೆ ಕಾರ್ಯಕ್ರಮ
ಸಾರ್ವಜನಿಕರ ಮನವಿಗೆ ಸಕಾಲದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಸ್ಪಂದಿಸಬೇಕು: ಡಾ.ಮಂತರ್ ಗೌಡ