ಕನ್ನಡಪ್ರಭ ವಾರ್ತೆ ಚಾಮರಾಜನಗರ
ಜಿಲ್ಲೆಯು ಹೆಚ್ಚಾಗಿ ಗ್ರಾಮೀಣ ಪ್ರದೇಶಗಳಿಂದ ಕೂಡಿದ್ದು, ಜನರಿಗೆ ನೀರನ್ನು ಕುದಿಸಿ ಆರಿಸಿ ಕುಡಿಯುವ ಅಭ್ಯಾಸದ ಕುರಿತು ಹೆಚ್ಚಿನ ಅರಿವು ಮೂಡಿಸಬೇಕು. ಈ ನಿಟ್ಟಿನಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ಪಂಚಾಯಿತಿ ವ್ಯಾಪ್ತಿಯ ಶಾಲಾ ಮಕ್ಕಳ ಮೂಲಕ ಜನರಿಗೆ ಕುಡಿಯುವ ನೀರನ್ನು ಕುದಿಸಿ ಆರಿಸಿ ಶುದ್ಧವಾದ ನೀರನ್ನು ಕುಡಿಯುವಂತೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಬೇಕು ಎಂದರು.
ಹನೂರು ಮತ್ತು ಯಳಂದರು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ್ ಮಾತನಾಡಿ, ನೀರಿನ ಸ್ಥಾವರಗಳು ಹಾಗೂ ನೀರಿನ ಸರಬರಾಜು ಪೈಪ್‌ಲೈನ್ ಸೋರಿಕೆ ಆಗುವುದನ್ನು ತಡೆಗಟ್ಟಬೇಕು. ವಾರದಲ್ಲಿ ಒಂದು ದಿನ ನೀರಗಂಟಿಗಳನ್ನೊಳಗೊಂಡ ಸಭೆ ನಡೆಸಿ ನೀರಿನ ಮೂಲಗಳ ಬಗ್ಗೆ ಮಾಹಿತಿ ಪಡೆಯಬೇಕಾಗಿದೆ ಎಂದರು.ಕೊಳ್ಳೇಗಾಲ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಿವಾಸ ಮಾತನಾಡಿ, ಸ್ಥಾವರಗಳಲ್ಲಿ ಹೆಚ್ಚುವರಿ ನೀರು ತುಂಬಿದಾಗ ತಕ್ಷಣ ನಿಲ್ಲಿಸುವಂತಹ ನೂತನ ತಂತ್ರಜ್ಞಾನ ಈಗಾಗಲೇ ಜಾರಿಗೆ ಬಂದಿವೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಈ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕು. ಇದರಿಂದ ನೀರು ಅನಾವಶ್ಯಕವಾಗಿ ಪೋಲಾಗುವುದನ್ನು ತಡೆಗಟ್ಟಬಹುದು ಎಂದು ಹೇಳಿದರು.
ಜೆ.ಜೆ.ಎಂ ಜಿಲ್ಲಾ ಯೋಜನಾ ವ್ಯವಸ್ಥಾಪಕ ಆಶಾ ರಮೇಶ್ ಮಾತನಾಡಿದರು. ಚಾಮರಾಜನಗರ ತಾಲೂಕು ಪ್ರಯೋಗಾಲಯದ ಹಿರಿಯ ವಿಶ್ಲೇಷಕರಾದ ಕೌಶಿಕ್, ಕೊಳ್ಳೇಗಾಲ ತಾಲೂಕು ಪ್ರಯೋಗಾಲಯದ ವಿಶ್ಲೇಷಕರಾದ ಅನಿಲ್‌ಕುಮಾರ್, ಕಿರಿಯ ವಿಶ್ಲೇಷಕರಾದ ರವಿಕುಮಾರ್ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು, ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.