ಮೂರ್ನಾಡು ಪದವಿಪೂರ್ವ ಕಾಲೇಜಿನ ಎನ್ಎಸ್ಎಸ್ ಘಟಕ ಮತ್ತು ಗ್ರಾಮಾಂತರ ಪೊಲೀಸ್ ಠಾಣೆಯ ವತಿಯಿಂದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುವಿನ ಬಳಕೆಯ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಕನ್ನಡಪ್ರಭವಾರ್ತೆ ನಾಪೋಕ್ಲು
ಇಲ್ಲಿಗೆ ಸಮೀಪದ ಮೂರ್ನಾಡು ಪದವಿಪೂರ್ವ ಕಾಲೇಜಿನ ಎನ್ಎಸ್ಎಸ್ ಘಟಕ ಮತ್ತು ಗ್ರಾಮಾಂತರ ಪೊಲೀಸ್ ಠಾಣೆಯ ವತಿಯಿಂದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುವಿನ ಬಳಕೆಯ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಗ್ರಾಮಾಂತರ ಠಾಣೆಯ ಠಾಣಾಧಿಕಾರಿ ಗೋಪಾಲ್ ಮಕ್ಕಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಸಹಾಯಕ ಠಾಣೆ ಅಧಿಕಾರಿ ದಿನೇಶ್ ಮಾದಕ ವಸ್ತುವಿನ ದುಷ್ಪರಿಣಾಮ ಮತ್ತು ಅಪ್ರಾಪ್ತರು ವಾಹನ ಚಲಾಯಿಸುವುದರಿಂದ ಆಗುವ ಅನಾಹುತಗಳ ಬಗ್ಗೆ ಅರಿವು ಮೂಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿದ್ಯಾಸಂಸ್ಥೆ ಕಾರ್ಯದರ್ಶಿ ವೇಣು ಅಪ್ಪಣ್ಣ, ಪಿಎಸ್ಐ ಪುಟ್ಟಮ್ಮ ಮತ್ತು ಪ್ರಾಂಶುಪಾಲರಾದ ದೇವಕಿ ಮಾತನಾಡಿದರು. ಈ ಸಂದರ್ಭ ಬೋಧಕ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮಡಿಕೇರಿ: ಕೊಡಗು ಜಿಲ್ಲೆಯ ಹಿಂದುಳಿದ ವರ್ಗಗಳಿಗೆ ಸೇರಿದ ಅರ್ಹ ಕಾನೂನು ಪದವೀಧರರಿಗೆ 2026-27ನೇ ಸಾಲಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಬಂಧನೆಗೊಳಪಟ್ಟಿರಬೇಕು.
ಅರ್ಹತೆ, ನಿಬಂಧನೆ:
ಸರ್ಕಾರದ ಆದೇಶದಂತೆ ಅಭ್ಯರ್ಥಿಗಳು ವರ್ಗ- 1 ಮತ್ತು ಪ್ರವರ್ಗ-2ಎ, 3ಎ, 3ಬಿ ಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ಮಿತಿ ಪ್ರವರ್ಗ-1ರ ಅಭ್ಯರ್ಥಿಗಳಿಗೆ 3.50 ಲಕ್ಷ ರು. ಹಾಗೂ ಪ್ರವರ್ಗ-2ಎ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ 2.50 ಲಕ್ಷ ರು. ಒಳಗಿರಬೇಕು. ಪ್ರವರ್ಗ-1ರ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಪ್ರವರ್ಗ-1ರ ಅಭ್ಯರ್ಥಿಗಳ ಕೊರತೆ ಇದ್ದರೆ ಸರ್ಕಾರದ ಆದೇಶದನ್ವಯ ನಿಯಮಾನುಸಾರ ಇತರೆ ವರ್ಗಗಳಲ್ಲಿ ಆಯ್ಕೆ ಮಾಡಲಾಗುವುದು. ಅರ್ಜಿಯನ್ನು ಸ್ವೀಕರಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು ಕಾನೂನು ಪದವಿ ಪಡೆದು 02 ವರ್ಷದೊಳಗಿರಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅರ್ಜಿದಾರರ ವಯಸ್ಸು ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷದೊಳಗಿರಬೇಕು. ಪ್ರವರ್ಗ 2ಎ, 3ಎ, 3ಬಿ ರ ಅಭ್ಯರ್ಥಿಗಳಿಗೆ 38 ವರ್ಷದೊಳಗಿರಬೇಕು.
ಅಭ್ಯರ್ಥಿಯು ತನ್ನ ಹೆಸರನ್ನು ಬಾರ್ ಕೌನ್ಸಿಲ್‌ನಲ್ಲಿ ನೋಂದಾಯಿಸಿರಬೇಕು. ಕಾನೂನು ತರಬೇತಿಯು 4 ವರ್ಷಗಳ ಅವಧಿಯಾಗಿದ್ದು, ಮಾಸಿಕ 4 ಸಾವಿರ ರು. ಶಿಷ್ಯವೇತನ ನೀಡಲಾಗುತ್ತದೆ. ಕಾನೂನು ತರಬೇತಿಯನ್ನು ಕೊಡಗು ಜಿಲ್ಲೆಯಿಂದ ಹಿಂದುಳಿದ ವರ್ಗಗಳ 10 ಅಭ್ಯರ್ಥಿಗಳಿಗೆ ನೀಡಲು ಅವಕಾಶವಿದೆ.
ಆಯ್ಕೆಯಾದ ಅಭ್ಯರ್ಥಿಯು ವಕೀಲ ತರಬೇತಿಗೆ ಹೋಗುವ ಮುನ್ನ, ತರಬೇತಿಯನ್ನು ಮಧ್ಯದಲ್ಲಿ ಬಿಟ್ಟರೆ ತರಬೇತಿ ವೆಚ್ಚಕ್ಕೆ ಶೇ. 10ರಂತೆ ಬಡ್ಡಿ ಸೇರಿಸಿ ಸರ್ಕಾರಕ್ಕೆ ಪಾವತಿ ಮಾಡುತ್ತೇನೆಂದು 100 ರು. ಮೌಲ್ಯದ ಛಾಪಾಕಾಗದದಲ್ಲಿ ಬರೆದುಕೊಡಬೇಕು.
ಅರ್ಜಿ ನಮೂನೆಯನ್ನು ಸಹಿದಾರರ ಕಚೇರಿಯಿಂದ ಪಡೆದು ಜು. 21ರೊಳಗೆ ಕಚೇರಿ ವೇಳೆಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ದೇವರಾಜ ಅರಸು ಭವನ, ಜನರಲ್ ತಿಮ್ಮಯ್ಯ ಕ್ರೀಡಾಂಗಣ, ಮ್ಯಾನ್ಸ್ ಕಾಂಪೌಂಡ್ ಹತ್ತಿರ, ಮಡಿಕೇರಿ ಅವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ: 08272-295628 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ದೀಪಕ್ ತಿಳಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.