ಕನ್ನಡಪ್ರಭ ವಾರ್ತೆ ಸಕಲೇಶಪುರ
ತಾಲೂಕು ಪಂಚಾಯಿತಿ ಆವರಣದಲ್ಲಿ ಕರ್ನಾಟಕ ಸರ್ಕಾರ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಂಗಳವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಸೇರಿ ಸಂವಿಧಾನ ರಚನಾ ಸಭೆಯ ಮಹನೀಯರು ನಮಗೆ ನೀಡಿರುವ ಶ್ರೇಷ್ಠ ಸಂವಿಧಾನದ ಅಡಿಯಲ್ಲಿ ಬದುಕುತ್ತಿರುವುದು ಹೆಮ್ಮೆಯ ಸಂಗತಿ. ಜನರಿಂದ, ಜನರಿಗಾಗಿ ಮತ್ತು ಜನರ ಮೂಲಕ ನಡೆಯುವ ಆಡಳಿತ ವ್ಯವಸ್ಥೆಯೇ ಪ್ರಜಾಪ್ರಭುತ್ವ. ದೇಶದ ಆಡಳಿತ ನಡೆಸುವ ನಾಯಕರನ್ನು ಮತದಾನದ ಮೂಲಕ ಜನರೇ ಆಯ್ಕೆ ಮಾಡಿಕೊಳ್ಳುವ ಹಕ್ಕು ನಮ್ಮ ಸಂವಿಧಾನ ನೀಡಿದೆ ಎಂದರು.ಕೆಲವು ದೇಶಗಳಲ್ಲಿ ರಾಜಮನೆತನದ ವಂಶಪಾರಂಪರ್ಯವಾಗಿ ಅಧಿಕಾರ ಹಸ್ತಾಂತರವಾಗುತ್ತದೆ. ಆದರೆ ಭಾರತದಲ್ಲಿ ಜನರಿಗೆ ತಮಗೆ ಸೂಕ್ತವೆನಿಸುವ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಅವಕಾಶವಿದೆ. ಈ ವ್ಯವಸ್ಥೆಯ ಮೂಲಕ ದೇಶದ ಕಟ್ಟಕಡೆಯ ಪ್ರಜೆಗೂ ತನ್ನ ನಾಯಕನನ್ನು ಆಯ್ಕೆ ಮಾಡುವ ಹಕ್ಕು ದೊರೆತಿದೆ ಎಂದು ಹೇಳಿದರು.
ಮತದಾನದ ಸಂದರ್ಭದಲ್ಲಿ ಪ್ರತಿಯೊಬ್ಬರ ಮತಕ್ಕೂ ಒಂದೇ ಮೌಲ್ಯ ಇರುವುದು ಪ್ರಜಾಪ್ರಭುತ್ವದ ನಿಜವಾದ ಶಕ್ತಿ. ಜನಪ್ರತಿನಿಧಿಗಳು ಅಧಿಕಾರದಲ್ಲಿರುವವರು ಎಂಬ ಭಾವನೆಗಿಂತ, ಜನರು ನೀಡಿರುವ ಜವಾಬ್ದಾರಿಯನ್ನು ನಿರ್ವಹಿಸುವ ಸೇವಕರು ಎಂಬ ಮನೋಭಾವ ಹೊಂದಬೇಕು ಎಂದು ಹೇಳಿದರು.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮೋಹನ್ ಕುಮಾರ್ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ಪ್ರತಿಯೊಬ್ಬ ಪ್ರಜೆಗೂ ಸಂವಿಧಾನ ಹಾಗೂ ಅದರ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಗಂಗಾಧರ್, ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪ, ತಾಲೂಕು ಸರ್ಕಾರಿ ನೌಕರ ಸಂಘದ ಅಧ್ಯಕ್ಷರಾದ ಶಾಂತ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.