ಫಿಲೋಮಿನಾ ಕಾಲೇಜು ಮಾದಕ ವ್ಯಸನದ ವಿರುದ್ಧ ಜಾಗೃತಿ

KannadaprabhaNewsNetwork |  
Published : Sep 29, 2026, 02:45 AM IST
ಫೋಟೋ: ೨೭ಪಿಟಿಆರ್-ಫಿಲೋಮಿನಾ ಸಂತ ಫಿಲೋಮಿನಾ ಕಾಲೇಜಿನಲ್ಲಿ ಮಾದಕ ವ್ಯಸನದ ವಿರುದ್ಧ ಜಾಗೃತಿ ಕಾರ್ಯಕ್ರಮ ನಡೆಯಿತು. | Kannada Prabha

ಸಾರಾಂಶ

ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವತಿಯಿಂದ ಪರ್ಲಡ್ಕದ ಫಾ. ಪತ್ರಾವೋ ಡಿ-ಅಡಿಕ್ಷನ್ ಸೆಂಟರ್ ಸಹಯೋಗದಲ್ಲಿ ಮಾದಕ ವ್ಯಸನದ ಕುರಿತು ಜಾಗೃತಿ ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ಇತ್ತೀಚೆಗೆ ಆಯೋಜಿಸಲಾಯಿತು.

ಪುತ್ತೂರು : ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವತಿಯಿಂದ ಪರ್ಲಡ್ಕದ ಫಾ. ಪತ್ರಾವೋ ಡಿ-ಅಡಿಕ್ಷನ್ ಸೆಂಟರ್ ಸಹಯೋಗದಲ್ಲಿ ಮಾದಕ ವ್ಯಸನದ ಕುರಿತು ಜಾಗೃತಿ ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ಇತ್ತೀಚೆಗೆ ಆಯೋಜಿಸಲಾಯಿತು.

ಸಂಪನ್ಮೂಲ ವ್ಯಕ್ತಿ ಫಾ. ಪತ್ರಾವೋ ಡಿ-ಅಡಿಕ್ಷನ್ ಸೆಂಟರ್‌ನ ಆಪ್ತ ಸಮಾಲೋಚಕಿ ಜೀಟಾ ಮಾತನಾಡಿ ಮಾದಕ ವಸ್ತುಗಳ ದುರ್ಬಳಕೆಯ ಅಪಾಯಗಳು, ಅದರ ತಡೆಗಟ್ಟುವಿಕೆಯ ಮಹತ್ವ ಕುರಿತು ಮಾಹಿತಿ ನೀಡಿದರು. ಫಾ. ಪತ್ರಾವೋ ಡಿ-ಅಡಿಕ್ಷನ್ ಸೆಂಟರ್‌ನ ಸಿಐಪಿ ಯೋಜನೆಯ ಸಂಯೋಜಕಿ ಸಿಸ್ಟರ್ ಜಾನೆಟ್ ಪ್ರತಿಜ್ಞಾವಿಧಿ ಬೋಧಿಸಿದರು.

ಉಪ ಪ್ರಾಂಶುಪಾಲ ಡಾ ವಿಜಯಕುಮಾರ್ ಮೊಳೆಯಾರ್ ಅಧ್ಯಕ್ಷತೆ ವಹಿಸಿದ್ದರು. ಎಂಎಸ್‌ಡಬ್ಲ್ಯು ಸಂಯೋಜಕಿ ಶ್ರೀಮಣಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಸೌಪರ್ಣಿಕಾ ಮತ್ತು ತಂಡ ಪ್ರಾರ್ಥಿಸಿದರು. ವಿದ್ಯಾರ್ಥಿನಿ ಕನೀಝ್ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮತ ಚೋರಿ ಮಾಡಿ ಚುನಾವಣೆ ಗೆಲ್ಲುವ ಹುನ್ನಾರ: ಸಚಿವ ಎಂ.ಬಿ.ಪಾಟೀಲ
ಕೂಲಿ ಮಾಡಿ ಸಿಎಂಗೆ ₹3000 ಕಳಿಸಿದ ರೈತರು