ಮಾದಕ ವಸ್ತುಗಳ ಕುರಿತು ಯುವಜನರಲ್ಲಿ ಜಾಗೃತಿ ಅಗತ್ಯ

KannadaprabhaNewsNetwork |  
Published : May 28, 2026, 01:45 AM IST
ಬೆಂ.ಗ್ರಾ ಜಿಲ್ಲಾಡಳಿತ ಭವನದಲ್ಲಿ ಮಾದಕ ವಸ್ತುಗಳ ಬಳಕೆ, ದುಷ್ಪರಿಣಾಮ, ನಿಷೇಧ ಕುರಿತು ಹಾಸ್ಟೆಲ್ ವಾರ್ಡನ್ ಗಳಿಗೆ ತರಬೇತಿ ಕಾರ್ಯಾಗಾರ ನಡೆಯಿತು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ಯುವ ಪೀಳಿಗೆಯನ್ನು ಗುರಿಯಾಗಿಸಿ ಡ್ರಗ್ ಮಾಫಿಯಾಗಳ ಜಾಲ ವ್ಯಾಪಕವಾಗಿ ಹರಡುತ್ತಿದ್ದು ಯುವ ಸಮೂಹ ಮಾಯಾಜಾಲಕ್ಕೆ ಸಿಲುಕದೆ ಜಾಗೃತರಾಗಿರಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಿವಕುಮಾರ್ ಹೇಳಿದರು

ದೊಡ್ಡಬಳ್ಳಾಪುರ: ಯುವ ಪೀಳಿಗೆಯನ್ನು ಗುರಿಯಾಗಿಸಿ ಡ್ರಗ್ ಮಾಫಿಯಾಗಳ ಜಾಲ ವ್ಯಾಪಕವಾಗಿ ಹರಡುತ್ತಿದ್ದು ಯುವ ಸಮೂಹ ಮಾಯಾಜಾಲಕ್ಕೆ ಸಿಲುಕದೆ ಜಾಗೃತರಾಗಿರಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಿವಕುಮಾರ್ ಹೇಳಿದರು.

ಬೆಂ.ಗ್ರಾ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾದಕ ವಸ್ತುಗಳ ಬಳಕೆ, ದುಷ್ಪರಿಣಾಮ, ನಿಷೇಧ ಕುರಿತು ಹಾಸ್ಟೆಲ್ ವಾರ್ಡನ್ ಗಳಿಗೆ ನಡೆದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಡ್ರಗ್ಸ್ ಹಾವಳಿ ಜಾಸ್ತಿ ಆಗಿದೆ. ಯುವ ಸಮೂಹ ಈ ದೇಶದ ಆಸ್ತಿ, ಅವರನ್ನು ಗುರಿಯಾಗಿಸಿ ಡ್ರಗ್ಸ್ ಪೆಡ್ಲರ್‌ಗಳು ತಮ್ಮ ಮಾಯಾ ಜಾಲ ವ್ಯಾಪಕವಾಗಿ ಹರಡುತ್ತಿದ್ದಾರೆ. ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ ವಿದ್ಯಾರ್ಥಿಗಳೇ ಅವರ ಟಾರ್ಗೆಟ್. ಮಾದಕ ವಸ್ತುಗಳು ಎಲ್ಲಿಂದ ಸರಬರಾಜು ಆಗುತ್ತವೆ, ಯಾರು, ಹೇಗೆ ಮಾರಾಟ ಮಾಡುತ್ತಾರೆ. ಅದು ಯುವ ಸಮೂಹಕ್ಕೆ ಹೇಗೆ ಸಿಗುತ್ತದೆ ಎಂಬುದು ನಿಗೂಡ. ಈ ಮಾಯಾ ಜಾಲದಲ್ಲಿ ಯುವ ಸಮೂಹ ಸಿಕ್ಕಿಕೊಳ್ಳಬಾರದು. ಮದ್ಯಪಾನ, ಧೂಮಪಾನ, ಮಾದಕ ವಸ್ತುಗಳ ಸೇವನೆ ಅದು ಆರೋಗ್ಯಕ್ಕೆ ಹಾನಿಕಾರಕ ಜೊತೆಗೆ ನೀವು, ನಿಮ್ಮ ಕುಟುಂಬ ಹಾಳಾಗುತ್ತದೆ. ಇದರ ಬಗ್ಗೆ ಜಾಗೃತರಾಗಿರಿ ಎಂದರು.

ಪೋಷಕರು ಕೂಡ ತಮ್ಮ ಮಕ್ಕಳ ಭವಿಷ್ಯದ ಬಗ್ಗೆ ಯೋಚನೆ ಮಾಡಬೇಕು. ಅವರ ಪ್ರತಿದಿನದ ಚಲನವಲನ ಗಮನಿಸಬೇಕು, ನಡವಳಿಕೆಯಲ್ಲಿ ಬದಲಾವಣೆ ಕಂಡು ಬಂದಲ್ಲಿ ವಿಚಾರಿಸಬೇಕು. ಹಾಸ್ಟೆಲ್, ಶಾಲಾ-ಕಾಲೇಜುಗಳಲ್ಲಿ ವಾರ್ಡನ್‌ಗಳು, ಶಿಕ್ಷಕರು, ಪ್ರಾಂಶುಪಾಲರು ವಿದ್ಯಾರ್ಥಿಗಳ ಚಲನವಲನ ಗಮನಿಸಿ ಮಾದಕ ವಸ್ತುಗಳ ವ್ಯಸನಿಗಳಾಗಂತೆ ಅವರನ್ನು ಜಾಗೃತಿಗೊಳಿಸಿ ಎಂದರು.

ಮನೋರೋಗ ತಜ್ಞ ಡಾ. ಗಿರೀಶ್ ಕುಮಾರ್ ಮಾತನಾಡಿ, ದೇಶದಲ್ಲಿ ಅಂದಾಜು 14 ಕೋಟಿ ಜನ ಮದ್ಯ ಸೇವನೆ ಮಾಡುತ್ತಾರೆ. ಮದ್ಯಪಾನ, ಧೂಮಪಾನ ಜೊತೆಗೆ ಮಾದಕ ವಸ್ತುಗಳ ಸೇವನೆ ದೇಶಾದ್ಯಂತ ಹರಡಿದೆ. ಗಾಂಜಾ, ಅಫೀಮು, ಹೆರಾಯಿನ್, ಬ್ರೌನ್ ಶುಗರ್, ಕೊಕೇನ್ ಮುಂತಾದ ಅನೇಕ ವಿಧದ ಮಾದಕ ವಸ್ತುಗಳಿವೆ. ಅವುಗಳ ಸೇವನೆ ಮನುಷ್ಯನನ್ನೇ ನಾಶ ಮಾಡುತ್ತದೆ. ಅನೇಕರು ಈ ವ್ಯಸನಕ್ಕೆ ಸಿಲುಕಿ ಜೀವನ ಹಾಳು ಮಾಡಿಕೊಂಡಿದ್ದಾರೆ ಎಂದರು.

ಮಾದಕ ವಸ್ತುಗಳ ಮಾರಾಟ, ಬಳಕೆ ಸೇವನೆ ಇವೆಲ್ಲವೂ ಕೂಡ ಕಾನೂನು ಬಾಹಿರವಾಗಿದ್ದು, ಯಾವುದೇ ವ್ಯಕ್ತಿ ಇಂತಹ ಪ್ರಕರಣದಲ್ಲಿ ಸಿಲುಕಿದರೆ ಆರೋಪಿಗೆ ಜೈಲು ಶಿಕ್ಷೆ ಜೊತೆಗೆ, ದಂಡ ವಿಧಿಸಲಾಗುತ್ತದೆ. ಸಾರ್ವಜನಿಕರು ಕೂಡ ಮಾದಕ ವಸ್ತುಗಳ ಜಾಲ ಪತ್ತೆ ಆದಲ್ಲಿ ಹತ್ತಿರದ ಪೋಲೀಸ್ ಠಾಣೆಗೆ ಮಾಹಿತಿ ನೀಡಬಹುದು ಎಂದು ಹೇಳಿದರು.

ಕಾರ್ಯಾಗಾರದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಪ್ರೇಮ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಯಶ್ರೀ ಹೆಂಡೇಗಾರ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವಿನಾಶ್, ಪರಿಶಿಷ್ಟ ಪಂಗಡಗಳ ಕಲ್ಯಾಣಾಧಿಕಾರಿ ಪಾಂಡುರಂಗ ಸೇರಿದಂತೆ ತಾಲೂಕು ಸಹಾಯಕ ನಿರ್ದೇಶಕರು, ವಸತಿ ಶಾಲೆಗಳ ಪ್ರಾಂಶುಪಾಲರು, ವಾರ್ಡನ್ ಗಳು ಉಪಸ್ಥಿತರಿದ್ದರು.

ಫೋಟೋ-

25ಕೆಡಿಬಿಪಿ2- ಬೆಂ.ಗ್ರಾ ಜಿಲ್ಲಾಡಳಿತ ಭವನದಲ್ಲಿ ಮಾದಕ ವಸ್ತುಗಳ ಬಳಕೆ, ದುಷ್ಪರಿಣಾಮ, ನಿಷೇಧ ಕುರಿತು ಹಾಸ್ಟೆಲ್ ವಾರ್ಡನ್ ಗಳಿಗೆ ತರಬೇತಿ ಕಾರ್ಯಾಗಾರ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತೈಲ, ಗೊಬ್ಬರ, ಬಿತ್ತನೆ ಬೀಜ ಬೆಲೆ ಏರಿಕೆಗೆ ರೈತರ ಆಕ್ರೋಶ
ಅರಣ್ಯ ಇಲಾಖೆ ಜಾಗದಲ್ಲಿರುವ ಶಾಲೆಗಳ ಬಗ್ಗೆ ಮಾಹಿತಿ ನೀಡಲು ತಾಪಂ ಆಡಳಿತಾಧಿಕಾರಿ ಸೂಚನೆ