ಮಾದಕ ವಸ್ತು ಸೇವನೆ ವಿರುದ್ಧ ಜಾಗೃತಿ ಅಭಿಯಾನ

KannadaprabhaNewsNetwork |  
Published : Nov 16, 2026, 01:15 AM IST
ಮಾದಕ ವಸ್ತು ಸೇವನ ನಿಷೇಧ ಅಂಗವಾಗಿ ಅಭಿಯಾನ | Kannada Prabha

ಸಾರಾಂಶ

ಕಾರ್ಯಕ್ರಮದ ಅಂಗವಾಗಿ ಬಾಲಕರ ಸರ್ಕಾರಿ ಪ್ರೌಢಶಾಲೆಯಿಂದ ಐ.ಬಿ. ವೃತ್ತದ ವರೆಗೆ ಜಾಥಾ ಹಮ್ಮಿಕೊಳ್ಳಲಾಗಿತ್ತು. ಹಸಿರು ನಿಶಾನೆ ತೋರಿಸುವ ಮೂಲಕ ತಿಪಟೂರು ತಾಲೂಕಿನ ಐದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಹೇಮಂತ್ ಕುಮಾರ್ ಸಿ.ಆರ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ತಿಪಟೂರು: ತಿಪಟೂರು ತಾಲೂಕು ಕಾನೂನು ಸೇವಾ ಸಮಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಬಾಲಕರ ಸರ್ಕಾರಿ ಪ್ರೌಢಶಾಲೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಇವರ ಸಹಯೋಗದಲ್ಲಿ ತಿಪಟೂರು ನಗರದ ಬಾಲಕರ ಪ್ರೌಢಶಾಲೆಯಲ್ಲಿ ನಶೆ ಮುಕ್ತ ಭಾರತ ಅಥವಾ ಮಾದಕ ವಸ್ತು ಸೇವನೆ ನಿಷೇಧ ಅಂಗವಾಗಿ ಅಭಿಯಾನ ಕಾರ್ಯಕ್ರಮವನ್ನು ನಗರದ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಅಂಗವಾಗಿ ಬಾಲಕರ ಸರ್ಕಾರಿ ಪ್ರೌಢಶಾಲೆಯಿಂದ ಐ.ಬಿ. ವೃತ್ತದ ವರೆಗೆ ಜಾಥಾ ಹಮ್ಮಿಕೊಳ್ಳಲಾಗಿತ್ತು. ಹಸಿರು ನಿಶಾನೆ ತೋರಿಸುವ ಮೂಲಕ ತಿಪಟೂರು ತಾಲೂಕಿನ ಐದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಹೇಮಂತ್ ಕುಮಾರ್ ಸಿ.ಆರ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಾಲಕರ ಸರ್ಕಾರಿ ಪ್ರೌಢಶಾಲೆ, ಪ್ರಾಂಶುಪಾಲರಾದ ಶಿವಕುಮಾರ ಎಂ.ಡಿ., ಉಪ ಪ್ರಾಂಶುಪಾಲ ಉಮೇಶ್ ಗೌಡ, ತಾಲೂಕು ಆರೋಗ್ಯ ಅಧಿಕಾರಿಗಳಾದ ಚನ್ನಕೇಶವ, ಸಿಡಿಪಿಓ ದೀಪಾ, ಆರಕ್ಷಕ ವೃಂದದವರು ಹಾಗೂ ಸರ್ಕಾರಿ ಬಾಲಕರ ಪ್ರೌಢಶಾಲೆ ಮಕ್ಕಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೀದಿ ನಾಯಿಗಳ ರೌದ್ರಾವತಾರ: ದನವನ್ನು ಕಚ್ಚಿ ಕೊಂದ ಶ್ವಾನಗಳ ಹಿಂಡು!
ಜನರ ಸಮಸ್ಯೆಗೆ ಸೂಕ್ತ, ತ್ವರಿತ ಪರಿಹಾರ ಕಲ್ಪಿಸಿ: ಶಾಸಕ ಎಚ್.ವಿ. ವೆಂಕಟೇಶ್