ಮಕ್ಕಳಿಗೆ ಸ್ವಚ್ಛತೆ, ತ್ಯಾಜ್ಯ ವಿಂಗಡಣೆ ಕುರಿತು ಜಾಗೃತಿ

KannadaprabhaNewsNetwork |  
Published : Sep 30, 2026, 02:30 AM IST
ಪೋಟೊ29ಕೆಎಸಟಿ3ಕುಷ್ಟಗಿ ಪುರಸಭೆ ಕಾರ್ಯಾಲಯದ ವತಿಯಿಂದ ಕುಷ್ಟಗಿ ಪಟ್ಟಣದ ಸರಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಸ್ವಚ್ಛತೆಯೇ ಸೇವೆ’ ಕಾರ್ಯಕ್ರಮವನ್ನು ಆಯೋಜಿಸಿ, ಮಕ್ಕಳಿಗೆ ಸ್ವಚ್ಛತೆ ಹಾಗೂ ತ್ಯಾಜ್ಯ ನಿರ್ವಹಣೆ ಕುರಿತು ಜಾಗೃತಿ ಮೂಡಿಸಲಾಯಿತು. | Kannada Prabha

ಸಾರಾಂಶ

ಸರಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತೆಯೇ ಸೇವೆ

ಕುಷ್ಟಗಿ: ಕುಷ್ಟಗಿ ಪುರಸಭೆ ಕಾರ್ಯಾಲಯದ ವತಿಯಿಂದ ಪಟ್ಟಣದ ಸರಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಸ್ವಚ್ಛತೆಯೇ ಸೇವೆ’ ಕಾರ್ಯಕ್ರಮ ಆಯೋಜಿಸಿ, ಮಕ್ಕಳಿಗೆ ಸ್ವಚ್ಛತೆ ಹಾಗೂ ತ್ಯಾಜ್ಯ ನಿರ್ವಹಣೆ ಕುರಿತು ಜಾಗೃತಿ ಮೂಡಿಸಲಾಯಿತು.

ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ಬೀಳಗಿ ಹಾಗೂ ಆರೋಗ್ಯ ವಿಭಾಗದ ಅಧಿಕಾರಿಗಳಾದ ಪ್ರಾಣೇಶ ಬಳ್ಳಾರಿ, ಹುಲ್ಲಪ್ಪ ಗಾಂಜಿ ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಕಮ್ಯುನಿಟಿ ಮೊಬಿಲೈಜರ್‌ಗಳಾದ ಶ್ರೀದೇವಿ ತೆಗ್ಗಿನಮನಿ, ಶಂಕ್ರಮ್ಮ ಹಿರೇಮಠ, ಮಾಲನ್ ಬಾನು, ಸಂಗೀತಾ ಕಟ್ಟಿಮನಿ ಹಾಗೂ ದೀಪಾ ಕಾರ್ಯಕ್ರಮ ನಿರ್ವಹಿಸಿದರು.

ಶಾಲೆಯ ಮುಖ್ಯಗುರು ಶರಣಮ್ಮ ಪೆದ್ದಿ, ಶಿಕ್ಷಕರು, ಪುರಸಭೆ ಸಿಬ್ಬಂದಿ, ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಡಿಯುವ ನೀರಿಗೆ ಅಭಾವ ಆಗದಿರಲಿ: ಜಿಲ್ಲಾಧಿಕಾರಿ ಸೂಚನೆ
ಪರೀಕ್ಷಾ ಪ್ರಾಧಿಕಾರ ನಿಯಮದಂತೆ ಪರೀಕ್ಷೆ ನಡೆಸಿ: ಡಿಸಿ