ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ಆಗುವ ದುಷ್ಪರಿಣಾಮಗಳ ಕುರಿತು ಜಾನಪದ ಕಾರ್ಯಕ್ರಮಗಳ ಮೂಲಕ ತಂಬಾಕು ನಿಯಂತ್ರಣಕ್ಕೆ ಯಲಬುರ್ಗಾದ ಬಸ್ ನಿಲ್ದಾಣದಲ್ಲಿ ಇತ್ತೀಚೆಗೆ ವಿಶೇಷ ಜಾಗೃತಿ ಮೂಡಿಸಲಾಯಿತು.
ಕೊಪ್ಪಳ: ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ಆಗುವ ದುಷ್ಪರಿಣಾಮಗಳ ಕುರಿತು ಜಾನಪದ ಕಾರ್ಯಕ್ರಮಗಳ ಮೂಲಕ ತಂಬಾಕು ನಿಯಂತ್ರಣಕ್ಕೆ ಯಲಬುರ್ಗಾದ ಬಸ್ ನಿಲ್ದಾಣದಲ್ಲಿ ಇತ್ತೀಚೆಗೆ ವಿಶೇಷ ಜಾಗೃತಿ ಮೂಡಿಸಲಾಯಿತು.
ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಂಬಾಕು ನಿಯಂತ್ರಣ ಘಟಕ ಹಾಗೂ ಕಾರ್ಗಿಲ್ ಮಲ್ಲಯ್ಯ ಅಂಗವಿಕಲರ ಸಂಘ, ಅಳವಂಡಿ ಸಹಯೋಗದಲ್ಲಿ ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ಆಗುವ ದುಷ್ಪರಿಣಾಮಗಳು ಕುರಿತು ಜಾನಪದ ಸಂಗೀತ ಬೀದಿ ನಾಟಕ ಕಾರ್ಯಕ್ರಮ ನಡೆಯಿತು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಿರಿಯ ನಿರೀಕ್ಷಣಾಧಿಕಾರಿ ಚನ್ನಬಸಯ್ಯ ಎಸ್. ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು, ತಂಬಾಕು ಸೇವನೆಯಿಂದ ಅನಾರೋಗ್ಯ ಉಂಟಾಗುತ್ತದೆ.
ತಂಬಾಕಿನ ನಿಕೋಟಿನ್ ಅಂಶದಿಂದ ನಮ್ಮ ದೇಹವು ಕ್ಯಾನ್ಸರ್, ದಂತ ಕ್ಷಯ, ಗರ್ಭಪಾತ ಸೇರಿದಂತೆ ಇನ್ನು ಅನೇಕ ಸಮಸ್ಯೆಗಳಿಗೆ ತುತ್ತಾಗಿ ಸಾವು ತರುತ್ತದೆ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿತ ಕಾನೂನು ಜಾರಿಯಲ್ಲಿದೆ.
ತಂಬಾಕು ಸೇವನೆ ಆರೋಗ್ಯಕ್ಕೆ ತುಂಬಾ ಹಾನಿಕಾರಕವಾಗಿದೆ. ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.ಇದೇ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಯಲಬುರ್ಗಾ ಘಟಕದ ಸಂಚಾರ ನಿರೀಕ್ಷಕ ಪ್ರಕಾಶ ಸೇರಿದಂತೆ ಮತ್ತಿತರರಿದ್ದರು.
ಬಳಿಕ ಅಳವಂಡಿಯ ಕಾರ್ಗಿಲ್ ಮಲ್ಲಯ್ಯ ಅಂಗವಿಕಲರ ಸಂಘದ ಕಲಾವಿದರಾದ ವೀರೇಶ ಹಾಲಗುಂಡಿ, ಸಿದ್ದಲಿಂಗಯ್ಯ ಗೋಲ್ರೇಕೊಪ್ಪ, ದಾವಲಸಾಬ ಅತ್ತಾರ, ನಾಗರಾಜ ಕಂಕಿ, ಮಹಾದೇವಪ್ಪ ಐನಕ್ಕನವರ, ಸಿದ್ದಲಿಂಗಮ್ಮ ಹಾಲಗುಂಡಿ.
ಶಿವಲಿಂಗಮ್ಮ ಹಲಗಿ ಕಲಾವಿದರು ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ಆಗುವ ದುಷ್ಪರಿಣಾಮಗಳ ಕುರಿತು ಹಾಗೂ ತಂಬಾಕು ನಿಯಂತ್ರಣ ಕುರಿತು ಜಾನಪದ ಸಂಗೀತ ಬೀದಿ ನಾಟಕ ಕಲಾಭಿನಯದ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಿದರು.