ಎಚ್ಐವಿ ತಡೆಯುವ ಕುರಿತು ಜಾಗೃತಿ ಅಗತ್ಯ: ನ್ಯಾ.ಸಾತ್ವಿಕ್

KannadaprabhaNewsNetwork | Published : Dec 3, 2024 12:30 AM

ಸಾರಾಂಶ

ರಾಯಚೂರು ನಗರದಲ್ಲಿ ವಿಶ್ವ ಏಡ್ಸ್‌ ದಿನಾಚರಣೆ ನಿಮಿತ್ತ ಜಾಗೃತಿ ಜಾಥಾವನ್ನು ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ರಾಯಚೂರುಜಿಲ್ಲೆಯಲ್ಲಿ ಎಚ್ಐವಿ ಸೋಂಕಿತರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಎಚ್ಐವಿ ಸೋಂಕು ತಡೆಯುವ ಕುರಿತು ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್.ಎ.ಸಾತ್ವಿಕ್ ಅವರು ಹೇಳಿದರು. ಸ್ಥಳೀಯ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆ ಮತ್ತು ನಿಯಂತ್ರಣ ಘಟಕ ರಾಯಚೂರು, ರಿಮ್ಸ್ ಬೋಧಕ ಆಸ್ಪತ್ರೆ, ಲಯನ್ಸ್ ಕ್ಲಬ್, ಐಎಂಎ, ರೋಟರಿ ಕ್ಲಬ್, ರೆಡ್ ಕ್ರಾಸ್ ಸಂಸ್ಥೆ, ಹೊಸ ಬೆಳಕು, ರೆಡ್ ರಿಬ್ಬನ್ ಕ್ಲಬ್, ಎನ್ಎಸ್ಎಸ್ ಘಟಕಗಳು ಹಾಗೂ ವಿವಿಧ ಸಂಘ,ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ನಿಕೊಳ್ಳಲಾಗಿದ್ದ ವಿಶ್ವ ಏಡ್ಸ್ ದಿನ-2024ರ ಅಂಗವಾಗಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸೋಮವಾರ ಮಾತನಾಡಿದರು.

ಸಮಾಜದಲ್ಲಿ ಎಚ್ಐವಿ ಸೋಂಕಿತರಿಗೂ ಎಲ್ಲರಂತೆ ಬದುಕುವ ಹಕ್ಕಿದೆ. ಸೋಂಕಿತರನ್ನು ಸಮಾನತೆಯಿಂದ ನೊಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ. ಮುಂದಿನ ದಿನಗಳಲ್ಲಿ ಏಡ್ಸ್ ಇತರರಿಗೆ ಹರಡದಂತೆ ತಡೆಯುವುದು ಅತ್ಯಾವಶ್ಯಕ. ಈ ನಿಟ್ಟಿನಲ್ಲಿ ಸಂಘ, ಸಂಸ್ಥೆಯ ವರೊಂದಿಗೆ ಸಮನ್ವಯ ಸಾಧಿಸಿ ಎಲ್ಲರ ಸಹಕಾರ ಪಡೆದು ಸೋಂಕು ತಡೆಗೆ ಮುಂದಾಗಬೇಕು ಎಂದರು.ಜಿಪಂ ಸಿಇಒ ಪಾಂಡ್ವೆ ರಾಹುಲ್ ತುಕಾರಂ ಅವರು ಮಾತನಾಡಿ, ದಿನಾಚರಣೆಯ ಈ ವರ್ಷದ ಘೋಷವಾಕ್ಯ ಹಕ್ಕುಗಳನ್ನು ಪಡೆಯಲು ಸರಿಯಾದ ಮಾರ್ಗ ಅನುಸರಿಸೋಣ ನನ್ನ ಆರೋಗ್ಯ ನನ್ನ ಹಕ್ಕು ಎಂಬುದಾಗಿದ್ದು, ಜಿಲ್ಲೆಯಲ್ಲಿ ಪ್ರಸ್ತುತ ವರ್ಷದಲ್ಲಿ 3,700 ಸೋಂಕಿತ ರನ್ನು ಪತ್ತೆ ಹಚ್ಚಲಾಗಿದೆ. ಎಚ್ಐವಿ ಸೋಂಕಿನ ಪ್ರಮಾಣ ಗಣನೀಯವಾಗಿ ಇಳಿಮುಖವಾಗಿದ್ದು, ರಾಯಚೂರು ಜಿಲ್ಲೆಯು 0.47% ಇದೆ. ಇದನ್ನು ಇನ್ನೂ ಕಡಿಮೆ ಮಾಡಲು ಆರೋಗ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ತಮ್ಮು ಜವಾಬ್ದಾರಿ, ಕರ್ತವ್ಯಗಳನ್ನು ಅರಿತು ಕಾರ್ಯನಿರ್ವನಿಹಿಸಬೇಕೆಂದರು.ಈ ವೇಳೆ ಎಡಿಸಿ ಶಿವಾನಂದ, ಡಿಎಚ್ಒ ಡಾ.ಸುರೇಂದ್ರ ಬಾಬು, ಆರೋಗ್ಯ ಇಲಾಖೆ ಅಧಿಖಾರಿಗಳಾದ ಡಾ.ಮಹ್ಮದ್ ಶಾಕೀರ, ಡಾ.ಗಣೇಶ, ರಿಮ್ಸ್ ಮೆಡಿಕಲ್ ಕಾಲೇಜು ಪ್ರಾಂಶುಪಾಲ ಡಾ.ರಾಹುಲ್ ಕೀರ್ತೆ, ಲಕ್ಷ್ಮೀ ಮಂಡಾಸ್, ಆಶ್ರಿತ ರೋಗಗಳ ನಿಯಂತ್ರಣಾಧಿ ಕಾರಿ ಸಂಧ್ಯಾ ನಾಯಕ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸರೋಜ.ಕೆ ಸೇರಿದಂತೆ ವಿವಿಧ ಅಧಿಕಾರಿ ಸಿಬ್ಬಂದಿಗಳು ಹಾಗೂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಇದ್ದರು.ಸೋಂಕಿನಿಂದ ನಿಧನರಾದವರಿಗೆ ಶ್ರದ್ಧಾಂಜಲಿವಿಶ್ವ ಏಡ್ಸ್‌ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯ ಆವರಣದಲ್ಲಿ ಆರೋಗ್ಯ ಇಲಾಖೆಯ ಹಾಗೂ ವಿವಿಧ ಸಂಘ, ಸಂಸ್ಥೆಗಳಯೊಂದಿಗೆ ರವಿವಾರ ಸಂಜೆ ಮೇಣದ ಬತ್ತಿ ಮೆರವಣಿಗೆ ನಡೆಸಲಾಯಿತು. ಇದೇ ಮೊಂಬತ್ತಿ ಹಚ್ಚಿ ಬಣ್ಣಗಳಿಂದ ಬಿಡಿಸಿದ ಏಡ್ಸ್ ಲಾಂಛನದ ಆಕಾರದಲ್ಲಿ ಮೇಣದ ಬತ್ತಿಗಳನ್ನು ಇಟ್ಟು ಸೋಂಕಿನಿಂದಾಗಿ ನಿಧನರಾದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

Share this article