ಹಾವೇರಿ: ಪ್ಲಾಸ್ಟಿಕ್ ಬಳಕೆಯಿಂದ ಪರಿಸರ ಮಾಲಿನ್ಯವಾಗುತ್ತಿದ್ದು, ಪ್ಲಾಸ್ಟಿಕ್ ಬಳಕೆ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಪ್ರಭಾರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಭಾರ ಅಧ್ಯಕ್ಷ ಎಂ.ಜಿ. ಶಿವಳ್ಳಿ ತಿಳಿಸಿದರು.
ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಬ್ದುಲ ಅಜೀಜ್ ಶೇಖ್ ಅಧ್ಯಕ್ಷತೆ ವಹಿಸಿದ್ದರು. ಹೆಚ್ಚುವರಿ ದಿವಾಣಿ ನ್ಯಾಯಾಧೀಶರು ಹಾಗೂ ಜೆಎಂಎಫ್‌ಸಿ ಬಿಪಿನ್ ಎಚ್.ಎಂ., ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಎಚ್. ಜತ್ತಿ, ಕಾರ್ಯದರ್ಶಿ ಪಿ.ಎಸ್. ಹೆಬ್ಬಾಳ, ಉಪ ಪರಿಸರ ಅಧಿಕಾರಿ ಲೋಹಿತಕುಮಾರ ಪಿ.ಜೆ., ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಹಾಗೂ ಉಪ ವಿಜ್ಞಾನ ಕೇಂದ್ರದ ಕಾರ್ಯದರ್ಶಿ ಸುರೇಶ ಹುಗ್ಗಿ, ವನ್ಯಜೀವಿ ಪರಿಪಾಲಕರಾದ ಮಾಧುರಿ ದೇವಧರ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀನಾಥ ಮನೋಹರ ಕಡೋಲ್ಕರ್, ನೋಡಲ್ ಅಧಿಕಾರಿ ಬಸನಗೌಡ ಎಸ್. ಪಾಟೀಲ, ವಲಯ ಅರಣ್ಯಾಧಿಕಾರಿ ಶ್ರೀನಿವಾಸ ಆರ್., ಉಪ ವಿಜ್ಞಾನ ಕೇಂದ್ರದ ಮೇಲ್ವಿಚಾರಕ ಕಿರಣ ಆರ್. ಗರಡಿಮನಿ ಇತರರು ಇದ್ದರು.ಪರಿಸರ ಪ್ರಜ್ಞೆ ರೂಢಿಸಿಕೊಳ್ಳಿ
ಹಾವೇರಿ: ಪರಿಸರ ಜೂ. 5ಕ್ಕೆ ಮಾತ್ರ ನೆನಪಾಗಬಾರದು. ಪರಿಸರ ಪ್ರಜ್ಞೆಯನ್ನು ವರ್ಷಪೂರ್ತಿ ಜೀವನದಲ್ಲಿ ರೂಢಿಸಿಕೊಳ್ಳಬೇಕು ಎಂದು ಹಾವೇರಿ ವಿವಿಯ ಕುಲಸಚಿವ ಪ್ರೊ. ಎಸ್.ಟಿ. ಬಾಗಲಕೋಟಿ ತಿಳಿಸಿದರು.ನಗರದ ಹೊರವಲಯದಲ್ಲಿರುವ ಕೇರಿಮತ್ತಿಹಳ್ಳಿಯ ಹಾವೇರಿ ವಿಶ್ವವಿದ್ಯಾಲಯದ ಆವರಣದಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಸಸಿಯನ್ನು ನೆಟ್ಟು ಮಾತನಾಡಿದರು.ಪ್ರಕೃತಿಯಲ್ಲಿ ಸಿಗುವ ಸಂಪನ್ಮೂಲವನ್ನು ಜೀವನದಲ್ಲಿ ಉಪಯೋಗಿಸಿಕೊಳ್ಳಿ. ಮುಂದಿನ ಪೀಳಿಗೆಗೆ ಸ್ವಚ್ಛ- ಸಮೃದ್ಧ- ಸುಸ್ಥಿರ ಪರಿಸರವನ್ನು ಕೊಡುಗೆಯಾಗಿ ನೀಡಬೇಕು. ಆದ್ದರಿಂದ ಯುವಪೀಳಿಗೆ ಪ್ರತಿಯೊಬ್ಬರೂ ಸಸಿ ನೆಟ್ಟು ಹಸಿರು ಕ್ರಾಂತಿಗೆ ಮುನ್ನುಡಿ ಬರೆಯಬೇಕು ಎಂದರು.ಕಾರ್ಯಕ್ರಮದಲ್ಲಿ ವಿವಿಯ ಕುಲಪತಿ ಪ್ರೊ. ಸುರೇಶ ಜಂಗಮಶೆಟ್ಟಿ, ಕುಲಸಚಿವರಾದ (ಮೌಲ್ಯಮಾಪನ) ಪ್ರೊ. ರೇಣುಕಾ ಮೇಟಿ, ಉಪಕುಲಸಚಿವ ಡಾ. ಮನೋಹರ ಕೋಳಿ, ಕಾರ್ಯಕ್ರಮದ ಸಂಚಾಲಕಿ ಡಾ. ರೇಖಾ ಬಾಲೋಜಿ ಸೇರಿದಂತೆ ವಿವಿಧ ವಿಭಾಗದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಇದ್ದರು.ವಿದ್ಯಾರ್ಥಿನಿ ನಾಗರತ್ನಾ ಪ್ರಾರ್ಥಿಸಿದರು. ವಿದ್ಯಾರ್ಥಿನಿ ಚೈತ್ರಾ ಸಂದಿಮನಿ ಸ್ವಾಗತಿಸಿದರು. ಉಪನ್ಯಾಸಕ ರವಿ ಸಣಕಂಬಿ ಕಾರ್ಯಕ್ರಮ ನಿರೂಪಿಸಿದರು. ಶ್ರುತಿ ಹೊಲಬಿಕೊಂಡ ವಂದಿಸಿದರು.