ಅಂತಾರಾಷ್ಟ್ರೀಯ ಮಾದಕ ದ್ರವ್ಯ ಸೇವನೆ ತಡೆ ಕುರಿತು ಜಾಗೃತಿ ಜಾಥಾ

KannadaprabhaNewsNetwork |  
Published : Jun 27, 2024, 01:07 AM IST
26ಕೆಎಂಎನ್ ಡಿ12 | Kannada Prabha

ಸಾರಾಂಶ

ಮಾದಕ ದ್ರವ್ಯಗಳ ಕಳ್ಳ ಸಾಗಣೆ ಸಮಾಜದಲ್ಲಿ ದೊಡ್ಡ ಪಿಡುಗಾಗಿದೆ. ಇವುಗಳ ದೀರ್ಘಾವಧಿ ಬಳಕೆ ಕಳಪೆ ಆರೋಗ್ಯ, ಮಾನಸಿಕ ಅಸ್ವಸ್ಥತೆ, ಸಾವಿಗೆ ಕಾರಣವಾಗುತ್ತದೆ. ಇದು ಕೇವಲ ಸೇವನೆ ಮಾಡುವವರ ಮೇಲೆ ಮಾತ್ರವಲ್ಲದೇ ಸಮಾಜನ ಮೇಲೆ ಕೂಡ ಭಾರೀ ಪರಿಣಾಮ ಹೊಂದಿದೆ. ಇದು ಸಾಮಾಜಿಕ, ದೈಹಿಕ, ಸಾಂಸ್ಕೃತಿಕ, ಭಾವನಾತ್ಮಕ ಮತ್ತು ಆರ್ಥಿಕವಾಗಿ ಹಾಳು ಮಾಡುತ್ತದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ಮಾದಕ ವಸ್ತುಗಳ ದುರುಪಯೋಗ ಹಾಗೂ ಅಕ್ರಮ ಸಾಗಣಿಕೆ ವಿರುದ್ಧ ಪೊಲೀಸ್ ಇಲಾಖೆಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಜಾಗೃತಿ ಜಾಥಾ ನಡೆಯಿತು.

ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದ ಜಾಥಾ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳು ಮಾದಕ ದ್ರವ್ಯ ಬಳಸದಂತೆ ಅರಿವು ಮೂಡಿಸಿತು. ಈ ವೇಳೆ ಎಸ್ಪಿ ಪ್ರತಿಜ್ಞಾ ವಿಧಿ ಬೋಧಿಸಿದರು.

ಮಾದಕ ದ್ರವ್ಯಗಳ ಕಳ್ಳ ಸಾಗಣೆ ಸಮಾಜದಲ್ಲಿ ದೊಡ್ಡ ಪಿಡುಗಾಗಿದೆ. ಇವುಗಳ ದೀರ್ಘಾವಧಿ ಬಳಕೆ ಕಳಪೆ ಆರೋಗ್ಯ, ಮಾನಸಿಕ ಅಸ್ವಸ್ಥತೆ, ಸಾವಿಗೆ ಕಾರಣವಾಗುತ್ತದೆ. ಇದು ಕೇವಲ ಸೇವನೆ ಮಾಡುವವರ ಮೇಲೆ ಮಾತ್ರವಲ್ಲದೇ ಸಮಾಜನ ಮೇಲೆ ಕೂಡ ಭಾರೀ ಪರಿಣಾಮ ಹೊಂದಿದೆ. ಇದು ಸಾಮಾಜಿಕ, ದೈಹಿಕ, ಸಾಂಸ್ಕೃತಿಕ, ಭಾವನಾತ್ಮಕ ಮತ್ತು ಆರ್ಥಿಕವಾಗಿ ಹಾಳು ಮಾಡುತ್ತದೆ ಎಂದು ಅರಿವು ಮೂಡಿಸಲಾಯಿತು.

ಮಾದಕ ದ್ರವ್ಯಗಳಯ ಜನರಲ್ಲಿ ಭಯ, ಆತಂಕ ಮತ್ತು ಅಭದ್ರತೆಯ ಭಾವನೆ ಉಂಟುಮಾಡುವ ಜೊತೆಗೆ ಮೆದುಳು ಮತ್ತು ನರಮಂಡಲದ ಬೂದು ದ್ರವ್ಯವನ್ನು ನೇರವಾಗಿ ಪರಿಣಾಮ ಬೀರುತ್ತದೆ ಎಂದು ಎಚ್ಚರಿಸಲಾಯಿತು.

ಮಾದಕ ವ್ಯಸನವು ಮನುಷ್ಯ ಹಸಿವು ಮತ್ತು ತೂಕದ ತೀವ್ರ ನಷ್ಟ, ಮಲಬದ್ಧತೆ, ಹೆಚ್ಚಿದ ಆತಂಕ ಮತ್ತು ಕಿರಿಕಿರಿ, ನಿದ್ರಾಹೀನತೆ ಮತ್ತು ಬೌದ್ಧಿಕ ಕಾರ್ಯಚಟುವಟಿಕೆಗಳ ಕ್ರಮೇಣ ದುರ್ಬಲತೆಗೆ ಕಾರಣವಾಗಬಹುದು. ಮಾದಕ ವಸ್ತುಗಳ ಸೇವನೆ ಅಂಟು ಜಾಡ್ಯವಾಗಿದೆ. ಕೆಟ್ಟ ಚಾಳಿಯಿಂದ ಸಂಗಡಿಗರಿಗೆಲ್ಲ ಅಂಟಿಕೊಂಡು ಸಮಾಜದ ವ್ಯವಸ್ಥೆಯೇ ಅಲ್ಲೋಲ ಕಲ್ಲೋಲವಾಗಿ, ಸಮಾಜ ಹದಗೆಡಿಸುತ್ತದೆ ಎಂದು ತಿಳಿಸಲಾಯಿತು.

ಮಾದಕ ವಸ್ತುಗಳ ಆಕ್ರಮ ಉತ್ಪಾದನೆ, ಸಾಗಾಣಿಕೆ, ಮಾರಾಟ ಅಪರಾಧವಾಗಿದೆ. ಈ ಬಗ್ಗೆ ಮಾಹಿತಿ ತಿಳಿದು ಬಂದಲ್ಲಿ ಸಾರ್ವಜನಿಕರು ಕೂಡಲೇ ಸೈಬರ್, ಆರ್ಥಿಕ ಮಾದಕ ದೃವ್ಯ ಅಪರಾಧ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಿ ನಿಮ್ಮ ಹೆಸರು ಮತ್ತು ವಿಳಾಸವನ್ನು ಗೌಪ್ಯವಾಗಿಡಲಾಗುತ್ತದೆ ಎಂದು ಜಾಥಾದಲ್ಲಿ ಅರಿವು ಮೂಡಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸ್ತೆ ಸುರಕ್ಷತೆಗೆ ಸಾರಿಗೆ ಇಲಾಖೆ ಎಐ ಆಧರಿತ ಕ್ಯಾಮೆರಾ ಅಳವಡಿಕೆ
ಮಂಡ್ಯ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಸ್ವತಂತ್ರ ಸ್ಪರ್ಧೆ - ಸುಮಲತಾ ಪರ ನಾರಾಯಣಗೌಡ ಬ್ಯಾಟಿಂಗ್‌