ಕುಮಟಾ: ಇತ್ತೀಚಿನ ದಿನಗಳಲ್ಲಿ ಮಾದಕ ವ್ಯಸನಗಳಿಗೆ ಅತಿ ಸಣ್ಣ ವಯಸ್ಸಿನಲ್ಲಿ ದಾಸರಾಗುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆ ಎಂದು ತಾಲೂಕು ಆಸ್ಪತ್ರೆ ಆಪ್ತ ಸಮಾಲೋಚಕ ಪ್ರದೀಪ ನಾಯ್ಕ ಹೇಳಿದರು.ಇಲ್ಲಿನ ಡಾ.ಎ.ವಿ. ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಯೂನಿಯನ್ ವಿಭಾಗ ಹಾಗೂ ಎನ್‌ಎಸ್‌ಎಸ್ ಘಟಕದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮದಲ್ಲಿ ಉಪನ್ಯಾಸ ಮಾಡಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ.ಎನ್.ಡಿ.ನಾಯ್ಕ ಮಾತನಾಡಿ, ನಮ್ಮ ಮಹಾವಿದ್ಯಾಲಯದ ಆವರಣವನ್ನು ತಂಬಾಕು ನಿಷೇಧ ವಲಯವನ್ನಾಗಿ ಘೋಷಿಸಿದ್ದು ಮಾತ್ರವಲ್ಲದೆ ಕಾಲಕಾಲಕ್ಕೆ ಈ ಕುರಿತು ವಿದ್ಯಾರ್ಥಿಗಳಲ್ಲಿ ದುಶ್ಚಟಗಳ ಕುರಿತು ಅರಿವು ಮೂಡಿಸುವ ಉಪನ್ಯಾಸ ಕಾರ್ಯಕ್ರಮಗಳು ಜಾಗೃತಿ ಕಾರ್ಯಕ್ರಮಗಳು ಜಾಗೃತಿ ಜಾಥಾ ಮೊದಲಾದವುಗಳನ್ನು ಹಮ್ಮಿಕೊಳ್ಳುತ್ತಾ ಬಂದಿದ್ದೇವೆ. ವಿದ್ಯಾರ್ಥಿಗಳು ಜಾಗೃತರಾಗಿ ದುಶ್ಚಟಗಳಿಂದ ದೂರವಾಗುವುದರ ಮೂಲಕ ಸ್ವಸ್ಥ ಸಮಾಜದ ನಿರ್ಮಾಣಕ್ಕೆ ಮುನ್ನುಡಿ ಬರೆಯಬೇಕು ಎಂದರು.
ಯೂನಿಯನ್ ಕಾರ್ಯಾಧ್ಯಕ್ಷ ಡಾ ಅರವಿಂದ ನಾಯಕ ವೇದಿಕೆಯಲ್ಲಿದ್ದರು. ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಡಾ.ಮಂಜುನಾಥ ವೆರ್ಣೇಕರ್ ಪ್ರಾಸ್ತಾವಿಕವಾಗಿ ಮಾತನಾಡಿ ಪರಿಚಯಿಸಿ, ಸ್ವಾಗತಿಸಿದರು. ಪ್ರಜ್ಞಾ ಭಟ್ ವಂದಿಸಿದರು. ನಶಾ ಮುಕ್ತ ಸಮಾಜದ ನಿರ್ಮಾಣಕ್ಕೆ ಪ್ರತಿಜ್ಞಾವಿಧಿಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲಾಯಿತು.