ಮಾದಕ ವಸ್ತುಗಳ ದುರ್ಬಳಕೆ ತಡೆಗೆ ಜಾಗೃತಿ ಅಗತ್ಯ : ಮಹೇಶ್ ಪ್ರಸಾದ್

KannadaprabhaNewsNetwork |  
Published : Oct 09, 2026, 02:45 AM IST
08ವೈಕುಂಠ | Kannada Prabha

ಸಾರಾಂಶ

ಉಡುಪಿ: ಯುವಜನರು ಮಾದಕ ವಸ್ತುಗಳ ದುರ್ಬಳಕೆಯಿಂದ ದೂರವಿದ್ದು, ಆರೋಗ್ಯಕರ ಹಾಗೂ ಜವಾಬ್ದಾರಿಯುತ ಜೀವನಶೈಲಿ ರೂಢಿಸಿಕೊಳ್ಳಬೇಕು ಎಂದು ಉಡುಪಿ ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ಹೇಳಿದರು.

ಉಡುಪಿ: ಯುವಜನರು ಮಾದಕ ವಸ್ತುಗಳ ದುರ್ಬಳಕೆಯಿಂದ ದೂರವಿದ್ದು, ಆರೋಗ್ಯಕರ ಹಾಗೂ ಜವಾಬ್ದಾರಿಯುತ ಜೀವನಶೈಲಿ ರೂಢಿಸಿಕೊಳ್ಳಬೇಕು ಎಂದು ಉಡುಪಿ ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ಹೇಳಿದರು.

ಅವರು ನಗರದ ವೈಕುಂಠ ಬಾಳಿಗ ಕಾನೂನು ಮಹಾವಿದ್ಯಾಲಯದಲ್ಲಿ ಮಾದಕ ವಸ್ತುಗಳ ನಿಯಂತ್ರಣ ಸಮಿತಿ, ತಂಬಾಕು ನಿಯಂತ್ರಣ ಸಮಿತಿ ವತಿಯಿಂದ ಆಯೋಜಿಸಿದ್ದ ಮಾದಕ ವಸ್ತುಗಳ ದುರ್ಬಳಕೆ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಸುರೇಖಾ ಕೆ. ಮಾತನಾಡಿ, ವಿದ್ಯಾರ್ಥಿಗಳು ಮಾದಕ ವಸ್ತುಗಳು, ತಂಬಾಕಿನಿಂದ ದೂರವಿದ್ದು, ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳಬೇಕು ಎಂದರು.

ದ್ವಿತೀಯ ವರ್ಷದ ಬಿ.ಎ. ಎಲ್‌ಎಲ್‌.ಬಿ ವಿದ್ಯಾರ್ಥಿನಿ ರಶ್ಮಿತಾ ನಿರೂಪಿಸಿದರು. ಪ್ರಥಮ ವರ್ಷದ ಬಿ.ಎ. ಎಲ್‌ಎಲ್‌.ಬಿ ವಿದ್ಯಾರ್ಥಿನಿ ಶ್ರೇಯಾ ಕಾಮತ್ ಸ್ವಾಗತಿಸಿದರು. ದ್ವಿತೀಯ ವರ್ಷದ ಬಿ.ಎ. ಎಲ್‌ಎಲ್‌.ಬಿ ವಿದ್ಯಾರ್ಥಿ ತೇಜಸ್ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶ್ರೀಶಾ ಸೌಹಾರ್ದ ಸೊಸೈಟಿ ನಿವ್ವಳ ಲಾಭದಲ್ಲಿ ಶೇ.35ರಷ್ಟು ಏರಿಕೆ
10ರಂದು ಮಾ ‘ರನ್ ಆ್ಯಂಡ್ ರೈಡ್ ಫಾರ್ ಡಿಗ್ನಿಟಿ’