ಕನ್ನಡಪ್ರಭ ವಾರ್ತೆ ಬೀದರ್
ನಗರದ ಜಿ.ಪಂ. ಸಂಪನ್ಮೂಲ ಮೈಲೂರ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿ.ಪಂ., ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಗುರುವಾರ ಆಯೋಜಿಸಲಾಗಿದ್ದ ಮಾನವ ಕಳ್ಳಸಾಗಣೆ ತಡೆ ದಿನಾಚರಣೆ ಹಾಗೂ ತರಬೇತಿ ಕಾರ್ಯ ಕ್ರಮ ಉದ್ಘಾಟಿಸಿ ಮಾತನಾಡಿ, ಭಾರತ ಸೇರಿದಂತೆ ಜಗತ್ತಿನಾದ್ಯಂತ ಮಾನವ ಕಳ್ಳಸಾಗಣೆ ಹೆಚ್ಚುತ್ತಿದ್ದು, ಮಾನಸಿಕ, ಶಾರೀರಿಕ ಹಾಗೂ ಆರ್ಥಿಕ ಶೋಷಣೆ ಗಳು ಇದಕ್ಕೆ ಮುಖ್ಯ ಕಾರಣಗಳಾಗಿವೆ.
ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧಗಳನ್ನು ತಡೆಯಲು ಸಾರ್ವಜನಿಕರಲ್ಲಿ ಸಮಗ್ರ ಜಾಗೃತಿ ಮೂಡಿಸುವುದು ಅತ್ಯಗತ್ಯ. ಈ ಸಾಮಾಜಿಕ ಪಿಡುಗನ್ನು ನಿರ್ಮೂಲನೆ ಮಾಡಲು ಪೊಲೀಸ್ ಇಲಾಖೆ, ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳು ಪರಸ್ಪರ ಸಹಯೋಗ ದಿಂದ ಕಾರ್ಯ ನಿರ್ವಹಿಸಬೇಕು. ಸಂತ್ರಸ್ತರಿಗೆ ತ್ವರಿತ ಕಾನೂನು ನೆರವು ಹಾಗೂ ಸೂಕ್ತ ರಕ್ಷಣೆ ಒದಗಿಸುವ ಮೂಲಕ ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಅವರು ಅಧಿಕಾರಿಗಳಿಗೆ ಕರೆ ನೀಡಿದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನವೀನ್‌ಕುಮಾರ್ ವೈ.ಯು. ಪ್ರಾಸ್ತಾವಿಕ ಮಾತನಾಡಿ, ಮಾನವರನ್ನು ದುರುದ್ದೇಶಕ್ಕಾಗಿ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಅಕ್ರಮವಾಗಿ ಸಾಗಿಸುವುದೇ ಮಾನವ ಕಳ್ಳಸಾಗಣೆ. ಇದು ಜಗತ್ತಿನಲ್ಲೇ ಎರಡನೇ ಅತಿ ದೊಡ್ಡ ಲಾಭದಾಯಕ ಅಕ್ರಮ ವ್ಯವಹಾರವಾಗಿದೆ. ದುರದೃಷ್ಟವಶಾತ್, ನಿಕಟ ಸಂಬಂಧಿಗಳು ಅಥವಾ ಕುಟುಂಬದವರಿಂದಲೇ ಹೆಚ್ಚಿನ ಮಾನವ ಕಳ್ಳಸಾಗಣೆ ಪ್ರಕರಣಗಳು ನಡೆಯುತ್ತಿರುವುದು ಕಳವಳಕಾರಿ ಸಂಗತಿ ಎಂದರು.
-