ಸರ್ಕಾರಿ ಯೋಜನೆಗಳ ಜಾಗೃತಿ ಅಗತ್ಯ: ನ್ಯಾ. ಚಂದ್ರಶೇಖರ್

KannadaprabhaNewsNetwork |  
Published : Oct 23, 2024, 12:48 AM IST
ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮದ ದೇವಾಂಗ ಮಠದ ಕಲ್ಯಾಣ ಮಂಟಪದಲ್ಲಿ ಆಯುಷ್ಮಾನ್ ಭಾರತ, ಕರ್ನಾಟಕ ಆರೋಗ್ಯ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು. | Kannada Prabha

ಸಾರಾಂಶ

ಸಾರ್ವಜನಿಕರ ಅನುಕೂಲಗಳಿಗಾಗಿ ರೂಪಿಸಿರುವ ಸರ್ಕಾರದ ಯೋಜನೆಗಳ ಸಮರ್ಪಕ ಅನುಷ್ಠಾನ ಮಾಡಿ, ಇದರ ಸದುಪಯೋಗ ಮಾಡಿಕೊಳ್ಳಲು ಜನರಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ.

ಆಯುಷ್ಮಾನ್ ಭಾರತ, ಕರ್ನಾಟಕ ಆರೋಗ್ಯ ಅರಿವು ಕಾರ್ಯಕ್ರಮ ಉದ್ಘಾಟನೆ

ಕನ್ನಡಪ್ರಭ ವಾರ್ತೆ ಕೊಪ್ಪಳ

ಸಾರ್ವಜನಿಕರ ಅನುಕೂಲಗಳಿಗಾಗಿ ರೂಪಿಸಿರುವ ಸರ್ಕಾರದ ಯೋಜನೆಗಳ ಸಮರ್ಪಕ ಅನುಷ್ಠಾನ ಮಾಡಿ, ಇದರ ಸದುಪಯೋಗ ಮಾಡಿಕೊಳ್ಳಲು ಜನರಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಕೊಪ್ಪಳ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಿ. ಚಂದ್ರಶೇಖರ್ ಹೇಳಿದರು.

ತಾಲೂಕಿನ ಕಿನ್ನಾಳ ಗ್ರಾಮದ ದೇವಾಂಗ ಮಠದ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಏರ್ಪಡಿಸಿದ ಆಯುಷ್ಮಾನ್ ಭಾರತ, ಕರ್ನಾಟಕ ಆರೋಗ್ಯ ಅರಿವು ಮೂಡಿಸುವ ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದರು. ಜನರ ಆರೋಗ್ಯದ ಹಿತದೃಷ್ಟಿಯಿಂದ ಅನುಕೂಲ ದೊರಕಿಸಿಕೊಡಲು ಸರ್ಕಾರದ ಆಯುಷ್ಮಾನ್ ಭಾರತ ಮತ್ತು ಕರ್ನಾಟಕದ ಆರೋಗ್ಯ ಕಾರ್ಯಕ್ರಮಗಳು ಜಾರಿಗೊಂಡಿದ್ದು, ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು. ವಿವಿಧ ಸಂಘಟನೆಗಳು ಇಂಥ ಕಾರ್ಯಕ್ರಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶ ಮಹಾಂತೇಶ್ ಎಸ್. ದರ್ಗದ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಆಯುಷ್ಮಾನ್ ಭಾರತ ಹಾಗೂ ಕರ್ನಾಟಕ ಆರೋಗ್ಯ ಸಂಯೋಜಕಿ ಡಾ. ಶ್ರುತಿ ಮಾತನಾಡಿದರು, ಕಿನ್ನಾಳ ಗ್ರಾಪಂ ಅಧ್ಯಕ್ಷೆ ಕರಿಯಮ್ಮ ಉಪ್ಪಾರ್ ಅಧ್ಯಕ್ಷತೆ ವಹಿಸಿದ್ದರು.

ಉಪಾಧ್ಯಕ್ಷ ದುರ್ಗಪ್ಪ ರಾಮಪ್ಪ ಡoಬರ್, ಕಿನ್ನಾಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪರಮೇಶ್ವರಯ್ಯ ತೆಳಗಡೆ ಮಠ, ಆಧಾರ್ ಕಾರ್ಡ್ ಸಂಯೋಜಕ ಜಾಫರ್, ಗ್ರಾಪಂ ಸದಸ್ಯರಾದ ಹನುಮೇಶ್ ಕೊವಿ, ಕಾಳಪ್ಪ ಬಿದನೂರ್, ಮಂಜುನಾಥ ಕುರುಬರ, ಮೈಲಾರಪ್ಪ ಉದ್ದರಾ, ಸಣ್ಣಪ್ಪ ಕಾರ ಬ್ಯಾಳಿ, ಪ್ರಶಾಂತ ಕುಲಕರ್ಣಿ ಉಪಸ್ಥಿತರಿದ್ದು, ಸೌಲಭ್ಯದ ಬಗ್ಗೆ, ನೋಂದಣಿ, ತಿದ್ದುಪಡಿ ಇತ್ಯಾದಿ ವಿಷಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದರು. ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ