ಕುಷ್ಟಗಿ: ಕಾನೂನು ಅರಿತುಕೊಂಡು ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಆರ್. ಮಂಜುನಾಥ ಹೇಳಿದರು.
ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಎಂ.ಎಲ್. ಪೂಜೇರಿ ಮಾತನಾಡಿ, ಮಾನವ ಕಳ್ಳ ಸಾಗಾಣಿಕೆ ಒಂದು ದೊಡ್ಡ ಜಾಲವಾಗಿದೆ. ಸಾರ್ವಜನಿಕರು ಕಾನೂನಿನ ಬಗ್ಗೆ ಅರಿವು ಪಡೆದುಕೊಂಡು ನಿಯಂತ್ರಣಕ್ಕಾಗಿ ಸಾರ್ವಜನಿಕರು ಇಲಾಖೆಗಳ ಜೊತೆಗೆ ಕೈಜೋಡಿಸಬೇಕು ಎಂದರು.
ಸಿಡಿಪಿಒ ಯಲ್ಲಮ್ಮ ಹಂಡಿ ಮಾತನಾಡಿ, ಮಹಿಳೆಯರ ಮೇಲೆ ದೌರ್ಜನ್ಯದಂತಹ ಪ್ರಕರಣಗಳು ಕಂಡುಬಂದರೆ ತಕ್ಷಣವೇ ಸಮೀಪದ ಪೊಲೀಸ್ ಠಾಣೆ ಅಥವಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರುವ ಮೂಲಕ ದೌರ್ಜನ್ಯಗಳನ್ನು ತಡೆಗಟ್ಟಲು ಮುಂದಾಗಬೇಕು ಎಂದರು.ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ಎಸ್.ಜಿ. ಪಾಟೀಲ, ಸಹಾಯಕ ಸರಕಾರಿ ಅಭಿಯೋಜಕ ರಾಯನಗೌಡ ಎಲ್., ಇಂದಿರಾ ಸುಹಾಸಿನಿ, ತಾಪಂ ಸಹಾಯಕ ನಿರ್ದೇಶಕಿ ಗೀತಾ ಅಯ್ಯಪ್ಪನವರು, ಪರಸಪ್ಪ ಗುಜಮಾಗಡಿ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು, ಇಲಾಖೆಯ ಮೇಲ್ವಿಚಾರಕರು ಇದ್ದರು. ಕಾರ್ಯಕ್ರಮದ ಮೇಲ್ವಿಚಾರಕಿ ಅನ್ನಪೂರ್ಣಾ ಪಾಟೀಲ ನಿರೂಪಿಸಿದರು.