ಪ್ಲಾಸ್ಮಾ ವಿಜ್ಞಾನದ ಅರಿವು ಅಗತ್ಯ: ಡಾ. ರಾಮಸುಬ್ರಮಣ್ಯನ್

KannadaprabhaNewsNetwork |  
Published : Jul 29, 2026, 02:45 AM IST
ಪ್ಲಾಸ್ಮಾ ವಿಜ್ಞಾನದಲ್ಲಿ ಯುವಜನರು ತೊಡಗಿಸಿಕೊಳ್ಳಬೇಕು: ಡಾ. ಎನ್. ರಾಮಸುಬ್ರಮಣ್ಯನ್ | Kannada Prabha

ಸಾರಾಂಶ

ವಿಜ್ಞಾನವನ್ನು ಘನ, ದ್ರವ ಮತ್ತು ಅನಿಲ ಎಂಬ ಮೂರು ಸ್ಥಿತಿಗಳಿಗೆ ಮಾತ್ರ ಸೀಮಿತಗೊಳಿಸದೆ, ನಾಲ್ಕನೇ ಸ್ಥಿತಿಯಾದ ಪ್ಲಾಸ್ಮಾ ಕುರಿತು ವಿದ್ಯಾರ್ಥಿಗಳು ಆಸಕ್ತಿ ಮತ್ತು ಅರಿವು ಬೆಳೆಸಿಕೊಳ್ಳಬೇಕು ಎಂದು ಗಾಂಧಿ ನಗರದ ಇನ್‌ಸ್ಟಿಟ್ಯೂಟ್ ಫಾರ್ ಪ್ಲಾಸ್ಮಾ ರಿಸರ್ಚ್ (ಐಪಿಆರ್)ನ ವೈಜ್ಞಾನಿಕ ಅಧಿಕಾರಿ ಹಾಗೂ ಔಟ್‌ರೀಚ್ ವಿಭಾಗದ ಮುಖ್ಯಸ್ಥ ಡಾ. ಎನ್. ರಾಮಸುಬ್ರಮಣ್ಯನ್ ಹೇಳಿದ್ದಾರೆ.

ಮೂಡುಬಿದಿರೆ: ವಿಜ್ಞಾನವನ್ನು ಘನ, ದ್ರವ ಮತ್ತು ಅನಿಲ ಎಂಬ ಮೂರು ಸ್ಥಿತಿಗಳಿಗೆ ಮಾತ್ರ ಸೀಮಿತಗೊಳಿಸದೆ, ನಾಲ್ಕನೇ ಸ್ಥಿತಿಯಾದ ಪ್ಲಾಸ್ಮಾ ಕುರಿತು ವಿದ್ಯಾರ್ಥಿಗಳು ಆಸಕ್ತಿ ಮತ್ತು ಅರಿವು ಬೆಳೆಸಿಕೊಳ್ಳಬೇಕು ಎಂದು ಗಾಂಧಿ ನಗರದ ಇನ್‌ಸ್ಟಿಟ್ಯೂಟ್ ಫಾರ್ ಪ್ಲಾಸ್ಮಾ ರಿಸರ್ಚ್ (ಐಪಿಆರ್)ನ ವೈಜ್ಞಾನಿಕ ಅಧಿಕಾರಿ ಹಾಗೂ ಔಟ್‌ರೀಚ್ ವಿಭಾಗದ ಮುಖ್ಯಸ್ಥ ಡಾ. ಎನ್. ರಾಮಸುಬ್ರಮಣ್ಯನ್ ಹೇಳಿದ್ದಾರೆ.ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯವು ಭಾರತದ ಅಣುಶಕ್ತಿ ಇಲಾಖೆಯ (ಡಿಎಇ) ಅಧೀನದ ಇನ್‌ಸ್ಟಿಟ್ಯೂಟ್ ಫಾರ್ ಪ್ಲಾಸ್ಮಾ ರಿಸರ್ಚ್‌ (ಐಪಿಆರ್) ಸಹಯೋಗದಲ್ಲಿ ಎಐಇಟಿ ಎಂಬಿಎ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ 5 ದಿನಗಳ 4ನೇ ರಾಜ್ಯ ಮಟ್ಟದ ಪ್ಲಾಸ್ಮಾ ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.ಇನ್‌ಸ್ಟಿಟ್ಯೂಟ್ ಫಾರ್ ಪ್ಲಾಸ್ಮಾ ರಿಸರ್ಚ್ (ಐಪಿಆರ್)ನ ವೈಜ್ಞಾನಿಕ ಅಧಿಕಾರಿ ಚೇತನ್ ಜರಿವಾಲಾ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ಟ್ರಸ್ಟಿ ವಿವೇಕ್ ಆಳ್ವ, ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಪೀಟರ್ ಫರ್ನಾಂಡಿಸ್, ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಮೊಹಮ್ಮದ್ ಸದಾಕತ್, ಕಾರ‍್ಯಕ್ರಮ ಸಂಯೋಜಕ ಡಾ. ಶಶಿಕುಮಾರ್ ಇದ್ದರು. ಶಾರ್ವರಿ ಶೆಟ್ಟಿ ನಿರೂಪಿಸಿ, ಸ್ಟೆಲ್ಲಾ ಸಾಜಿ ಸ್ವಾಗತಿಸಿದರು.ಪ್ಲಾಸ್ಮಾದ ಮೂಲ ತತ್ತ್ವಗಳು, ಅದರ ವಿವಿಧ ಕೈಗಾರಿಕಾ, ವೈದ್ಯಕೀಯ ಮತ್ತು ಅಂತರಿಕ್ಷ ಕ್ಷೇತ್ರಗಳ ಅನ್ವಯಿಕೆಗಳನ್ನು ಒಳಗೊಂಡ ಪ್ರದರ್ಶನ ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳು ಹಾಗೂ ಬೋಧಕ ವೃಂದ ಪ್ರದರ್ಶನವನ್ನು ವೀಕ್ಷಿಸಿ ಮಾಹಿತಿ ಪಡೆದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದು ಕಿದಿಯೂರು ಕ್ರೆ.ಕೋ.ಆಪ್ ಸೊಸೈಟಿ ಕಿನ್ನಿಮುಲ್ಕಿ ಶಾಖೆ ಶುಭಾರಂಭ
ಹಾಸನ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂಲ್ಕಿಯ ಮಹಿಳೆ ಸಾವು