ಕನ್ನಡಪ್ರಭ ವಾರ್ತೆ ಬೀದರ್
ಕೃತಕ ಬುದ್ಧಿಮತ್ತೆ (ಎಐ) ಹಾಗೂ ರೊಬೊಟಿಕ್ಸ್ ಯುಗದಲ್ಲಿ ಜ್ಞಾನವೇ ನಿಜವಾದ ಶಕ್ತಿಯಾಗಿದೆ. ಅಂಬೇಡ್ಕರ್ ಅವರ ‘ಶಿಕ್ಷಣ, ಸಂಘಟನೆ, ಹೋರಾಟ’ ಎಂಬ ಮೂರು ಸೂತ್ರಗಳಂತೆ ಯುವಜನತೆ ಉನ್ನತ ಶಿಕ್ಷಣ ಪಡೆದು ಸ್ಪರ್ಧಾತ್ಮಕ ಜಗತ್ತಿನಲ್ಲಿ ಆತ್ಮವಿಶ್ವಾಸದಿಂದ ಮುನ್ನಡೆಯಬೇಕು ಎಂದು ಸಚಿವರು ಕರೆ ನೀಡಿದರು.12ನೇ ಶತಮಾನದಲ್ಲೇ ಬಸವಾದಿ ಶರಣರು ‘ಅನುಭವ ಮಂಟಪ’ದ ಮೂಲಕ ಪ್ರಜಾಪ್ರಭುತ್ವಕ್ಕೆ ಬಲಿಷ್ಠ ಬುನಾದಿ ಹಾಕಿದ್ದರು. ಡಾ.ಅಂಬೇಡ್ಕರ್ ಅವರು ನೀಡಿದ ಸಂವಿಧಾನ ಹಾಗೂ ಬುದ್ಧ, ಬಸವಣ್ಣನವರ ತತ್ವಗಳನ್ನು ವೈಯಕ್ತಿಕ ಜೀವನದಲ್ಲಿ ಅಳವಡಿಸಿಕೊಂಡರೆ ಎಂತಹ ಸವಾಲುಗಳನ್ನೂ ಎದುರಿಸಬಹುದು ಎಂದರು.ಜಿಲ್ಲೆಯಲ್ಲಿ ಶಿಕ್ಷಣ, ಆರೋಗ್ಯ ಹಾಗೂ ವಸತಿ ಶಾಲೆಗಳ ಮೂಲಸೌರ್ಯಗ ಹೆಚ್ಚಿಸಲು ಆದ್ಯತೆ ನೀಡಲಾಗಿದೆ. ಕೆಕೆಆರ್‌ಡಿಬಿ ಅನುದಾನದಡಿ ₹15 ಕೋಟಿ ವೆಚ್ಚದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನಾ ಕೇಂದ್ರ ಸ್ಥಾಪನೆಗೆ ಅನುಮೋದನೆ ದೊರೆತ್ತಿದ್ದು, ಶೀಘ್ರದಲ್ಲೇ ಶಂಕುಸ್ಥಾಪನೆ ನೆರವೇರಲಿದೆ ಎಂದರು.ಮಾಜಿ ಸಚಿವ ರಹೀಂ ಖಾನ್ ಮಾತನಾಡಿ, ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನ ಅವಕಾಶ ಸಿಗಲು ಸಂವಿಧಾನವೇ ಮೂಲ ಕಾರಣ, ವಿಶ್ವರತ್ನ ಡಾ.ಅಂಬೇ ಡ್ಕರ್ ಅವರು ಶಿಕ್ಷಣ ಪಡೆಯುವಾಗ ಸಾಕಷ್ಟು ಅಸಾಮಾನ್ಯತೆ, ಸಲಭ್ಯದ ಕೊರತೆ ಇತ್ತು ಆದರೂ ಅವರು ಉತ್ತಮ ಶಿಕ್ಷಣ ಪಡೆದು ವಿಶ್ವದ ಶ್ರೇಷ್ಠ ಸಂವಿಧಾನ ರಚಿಸಿದ್ದಾರೆ. ಇಂದಿನ ವಿದ್ಯಾರ್ಥಿಗಳಿಗೆ ಸಾಕಷ್ಟು ಅವಕಾಶಗಳಿವೆ ಆದ್ದರಿಂದ ಒಳ್ಳೆಯ ಶಿಕ್ಷಣ ಪಡೆದು ಉತ್ತಮ ನಾಯಕರಾಗಿ ರೂಪಗೊಳ್ಳುವಂತೆ ಕರೆ ನೀಡಿದರು.ವಿಶೇಷ ಉಪನ್ಯಾಸಕರಾಗಿ ಭಾಲ್ಕಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಸುಮನಬಾಯಿ ಶಿಂಧೆ ಪಾಲ್ಗೊಂಡು ಮಾತನಾಡಿದರು. ಕಾರ್ಯಕ್ರಮಕ್ಕೂ ಮುನ್ನ ಡಾ.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸಚಿವರಾದ ಈಶ್ವರ ಬಿ. ಖಂಡ್ರೆ ಅವರು, ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಿಗಮ ಮಂಡಳಿ ಅಧ್ಯಕ್ಷ ಬಾಬು ಹೊನ್ನಾನಾಯಕ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಸಂಜಯ ಮಠಪತಿ, ಜಿ.ಪಂ ಸಿಇಓ ಗಿಟ್ಟೆ ಮಾಧವ ವಿಠಲ್‌ರಾವ್, ಅಪರ ಜಿಲ್ಲಾಧಿಕಾರಿ ಸುರೇಖಾ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಡಾ. ಯೊಗೀಶ ಎಸ್.ಬಿ ಸೆರಿದಂತೆ ಮತ್ತಿತರರು ಉಪಸ್ಥಿತರಿದ್ದರು.