ದೊಡ್ಡಬಳ್ಳಾಪುರ: ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ನಗರ ಪೊಲೀಸ್ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಮಾದಕ ವಸ್ತುಗಳ ದುರುಪಯೋಗ ಹಾಗೂ ಅಕ್ರಮ ಸಾಗಾಣಿಕೆ ವಿರುದ್ಧದ ಅಂತಾರಾಷ್ಟ್ರೀಯ ದಿನದ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಬಳಕೆ ಮತ್ತು ಅದರಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಸಬ್ ಇನ್ಸ್ಪೆಕ್ಟರ್ ರೇವಣ್ಣ, ಟೌನ್ ಸಬ್ ಇನ್ಸ್ಪೆಕ್ಟರ್ ದಯಾನಂದ್ ಮತ್ತಿತರರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಸುಜಾತ ಎಸ್.ಜಂಬಗಿ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ಟಿ.ಆರ್.ಶ್ರೀರಾಮಗೌಡ, ಮಂಗಳಗೌರಿ ಮತ್ತಿತರರು ಉಪಸ್ಥಿತರಿದ್ದರು.26ಕೆಡಿಬಿಪಿ2- ದೊಡ್ಡಬಳ್ಳಾಪುರದ ಸರ್ಕಾರಿ ಪಿಯು ಕಾಲೇಜಿನಲ್ಲಿ ಮಾದಕ ವಸ್ತುಗಳ ದುಷ್ಟರಿಣಾಮ ಕುರಿತ ಅರಿವು ಕಾರ್ಯಕ್ರಮ ನಡೆಯಿತು.