ಸ್ವಾತಂತ್ರ್ಯ ಹೋರಾಟಕ್ಕೆ ಕೊಡುಗೆ ನೀಡಿದವರ ಅರಿವು ಅತ್ಯಗತ್ಯ: ಬಿಇಒ ರಮೇಶ್‌

KannadaprabhaNewsNetwork |  
Published : Aug 09, 2024, 12:32 AM IST
ಪೊಟೊ: 8ಎಸ್ಎಂಜಿಕೆಪಿ01ಶಿವಮೊಗ್ಗದ ಕಸ್ತೂರಬಾ ಬಾಲಿಕಾ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಗುರುವಾರ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಸ್ವಾತಂತ್ರ್ಯ ಹೋರಾಟಕ್ಕೆ ಶಿವಮೊಗ್ಗ ಜಿಲ್ಲೆಯ ಕೊಡುಗೆ ಕುರಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮವನ್ನು ತಹಶೀಲ್ದಾರ್ ಎಂ.ಲಿಂಗರಾಜ್ ಉದ್ಘಾಟಿಸಿದರು. | Kannada Prabha

ಸಾರಾಂಶ

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸ್ವಾತಂತ್ರ್ಯ ಹೋರಾಟಕ್ಕೆ ಶಿವಮೊಗ್ಗ ಜಿಲ್ಲೆಯ ಕೊಡುಗೆ ಕುರಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮವನ್ನು ನಗರದಲ್ಲಿ ಆಯೋಜಿಸಲಾಗಿತ್ತು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಸ್ವಾತಂತ್ರ್ಯ ಹೋರಾಟಕ್ಕೆ ಶಿವಮೊಗ್ಗ ಜಿಲ್ಲೆಯ ಕೊಡುಗೆ ಅಪಾರವಾಗಿದ್ದು, ಅಂತಹ ಕೊಡುಗೆ ನೀಡಿದವರ ಅರಿವು ಯುವ ಸಮೂಹಕ್ಕೆ ಅತ್ಯಗತ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಅಭಿಪ್ರಾಯಪಟ್ಟರು.

ನಗರದ ಕಸ್ತೂರ ಬಾ ಬಾಲಿಕಾ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಶಿವಮೊಗ್ಗ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಕಸ್ತೂರ ಬಾ ಬಾಲಿಕಾ ಪ್ರೌಢಶಾಲೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಗುರುವಾರ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸ್ವಾತಂತ್ರ್ಯ ಹೋರಾಟಕ್ಕೆ ಶಿವಮೊಗ್ಗ ಜಿಲ್ಲೆಯ ಕೊಡುಗೆ ಕುರಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಸ್ವಾತಂತ್ರ್ಯಕ್ಕೆ ಕೊಡುಗೆ ನೀಡಿದವರ ಕುರಿತು ಅಧ್ಯಯನ ನಡೆಸಿ. ಅದರಿಂದ ಪಡೆದ ಜ್ಞಾನ, ಸ್ಪರ್ಧಾತ್ಮಕ ಪರೀಕ್ಷೆಗಳು ಸೇರಿದಂತೆ ಜೀವನಕ್ಕೆ ಜೀವ ನೀಡುವ ಅಂಶವಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಈಸೂರು ಧಂಗೆಯಂತಹ ಇತಿಹಾಸದ ಪುಟಗಳನ್ನು ಇಂತಹ ವೇದಿಕೆಗಳ ಮೂಲಕ ಮೆಲುಕು ಹಾಕಲು ಪ್ರಯತ್ನಸುತ್ತಿರಿ ಎಂದು ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ.ಮಂಜುನಾಥ ಮಾತನಾಡಿ, ಕ್ವಿಟ್ ಇಂಡಿಯಾ ಚಳವಳಿ ನಡೆದು ಆಗಸ್ಟ್ 08 ಕ್ಕೆ 82 ವರ್ಷಗಳು ಸಂದಿವೆ.‌ ಸ್ವಾತಂತ್ರ್ಯ ಚಳವಳಿ ಅಹಿಂಸೆಯ ಮೂಲಕ ನಡೆದರೆ, ಸ್ವಾತಂತ್ರ್ಯ ನಂತರ ಧರ್ಮದ ಕಾರಣಕ್ಕೆ ಘರ್ಷಣೆಯ ವಿಭಜನೆ ನಡೆಯುತ್ತದೆ. ಇಂದಿಗೂ ಅಂತಹ ಘರ್ಷಣೆಗಳು ನಡೆಯುತ್ತಿರುವುದು ಬೇಸರದ ಸಂಗತಿ ಎಂದರು.

ನಮ್ಮನ್ನು ಆಳುವವರಿಗೆ ಹಿರಿಯರ ತ್ಯಾಗ ಬಲಿದಾನಗಳ ಅರಿವಿನ ಅವಶ್ಯಕತೆಯೇ ಇಲ್ಲದಂತೆ ವರ್ತಿಸುತ್ತಿದ್ದಾರೆ. ಅಂತಹ ಅರಿವನ್ನು ಪಡೆಯುವ ಮತ್ತು ಆಳುವವರಿಗೆ ಅರಿವು ನೀಡುವ ಪ್ರಯತ್ನ ಯುವ ಸಮೂಹ ಮಾಡಬೇಕಿದೆ ಎಂದರು.

ತಹಶಿಲ್ದಾರ ಎಂ.ಲಿಂಗರಾಜ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ತಾಲೂಕು ಕಸಾಪ ಅಧ್ಯಕ್ಷರಾದ ಮಹಾದೇವಿ ಆಶಯ ನುಡಿಗಳನ್ನಾಡಿದರು. ಕಸ್ತೂರಬಾ ಪ್ರೌಢಶಾಲೆಯ ಉಪ ಪ್ರಾಂಶುಪಾಲ ಸಿ. ತಿಪ್ಪೇಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ ಸತೀಶ್, ಪದಾಧಿಕಾರಿಗಳಾದ ನಳಿನಾಕ್ಷಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌