ಎಸ್ಐಆರ್ ಬಗ್ಗೆ ಶಾಲಾ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ

KannadaprabhaNewsNetwork |  
Published : Jul 06, 2026, 02:00 AM IST
3ಕೆಎಂಎನ್ ಡಿ15 | Kannada Prabha

ಸಾರಾಂಶ

ಬೂತ್ ಮಟ್ಟದ ಅಧಿಕಾರಿಗಳು ಗ್ರಾಮಕ್ಕೆ ಬಂದಾಗ ನಾಗರಿಕರು ಅಗತ್ಯ ಮಾಹಿತಿಗಳನ್ನು ಒದಗಿಸಬೇಕು. ಮತದಾರರ ಪಟ್ಟಿಯಲ್ಲಿ ತಿದ್ದುಪಡಿ, ಹೊಸದಾಗಿ ಹೆಸರು ಸೇರ್ಪಡೆ ಹಾಗೂ 18 ವರ್ಷ ತುಂಬಿದ ಪ್ರತಿ ವ್ಯಕ್ತಿಯೂ ಹೊಸದಾಗಿ ನೋಂದಾಯಿಸಲು ಅಭಿಯಾನ ಸಹಕಾರಿಯಾಗಿದೆ.

ದೇವಲಾಪುರ: ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕನೂ ಮತದಾನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಮುಖ್ಯ ಶಿಕ್ಷಕ ಚಿಕ್ಕ ಬೋರಯ್ಯ ತಿಳಿಸಿದರು.

ಹರದನಹಳ್ಳಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ವಿಶೇಷ ಮತದಾರರ ಜಾಗೃತಿ ಜಾಥಾದ ವೇಳೆ ಮಾತನಾಡಿದ ಅವರು, ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಸರಿಯಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರಿ ಮಟ್ಟದಲ್ಲಿ ವಿಶೇಷ ಪರಿಷ್ಕರಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದರು.

ಬೂತ್ ಮಟ್ಟದ ಅಧಿಕಾರಿಗಳು ಗ್ರಾಮಕ್ಕೆ ಬಂದಾಗ ನಾಗರಿಕರು ಅಗತ್ಯ ಮಾಹಿತಿಗಳನ್ನು ಒದಗಿಸಬೇಕು. ಮತದಾರರ ಪಟ್ಟಿಯಲ್ಲಿ ತಿದ್ದುಪಡಿ, ಹೊಸದಾಗಿ ಹೆಸರು ಸೇರ್ಪಡೆ ಹಾಗೂ 18 ವರ್ಷ ತುಂಬಿದ ಪ್ರತಿ ವ್ಯಕ್ತಿಯೂ ಹೊಸದಾಗಿ ನೋಂದಾಯಿಸಲು ಅಭಿಯಾನ ಸಹಕಾರಿಯಾಗಿದೆ ಎಂದು ತಿಳಿಸಿದರು.

ಗ್ರಾಪಂ ಪಿಡಿಒ ಹರೀಶ್ ಗೌಡ, ವಿದ್ಯಾರ್ಥಿಗಳು ತಮ್ಮ ಗ್ರಾಮ ವ್ಯಾಪ್ತಿಯ ಬಡಾವಣೆಗಳಲ್ಲಿ ಅನಕ್ಷರಸ್ಥರಿಗೆ ಹಾಗೂ ಅಗತ್ಯವಿರುವವರಿಗೆ ಮತಪಟ್ಟಿ ಪರಿಷ್ಕರಣೆಗೆ ನೆರವು ನೀಡಬೇಕು. ಗ್ರಾಮದಿಂದ ವಲಸೆ ಹೋದವರು ಎರಡು ಕಡೆ ಮತ ಪಟ್ಟಿಯಲ್ಲಿ ಹೆಸರು ಹೊಂದಿರುವರು, ಒಂದು ಕಡೆ ಮಾತ್ರ ಮತ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಮಾರ್ಗದರ್ಶನ ನೀಡಬೇಕು. ಮತದಾನದ ಬಗ್ಗೆ ಸಾರ್ವಜನಿಕರಿಗೆ ಅಗತ್ಯ ಮಾಹಿತಿಯನ್ನು ನೀಡಬೇಕು ಎಂದು ತಿಳಿಸಿದರು.

ಇದೇ ವೇಳೆ ಶಾಲಾ ವಿದ್ಯಾರ್ಥಿಗಳು ಗ್ರಾಮದ ವಿವಿಧ ರಸ್ತೆಗಳಲ್ಲಿ ಸಂಚರಿಸಿ ಅಭಿಯಾನದ ಕುರಿತು ಜಾಗೃತಿ ಮೂಡಿಸಿದರು. ಗ್ರಾಪಂ ಸಿಬ್ಬಂದಿ, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರು, ಸದಸ್ಯರು, ಶಾಲಾ ಶಿಕ್ಷಕರು ಭಾಗವಹಿಸಿದ್ದರು.

ಇಂದು ವಿದ್ಯುತ್ ವ್ಯತ್ಯಯ

ಮಂಡ್ಯ: ೬೬/೧೧ ಕೆ.ವಿ ಮಂಡ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಫ್-೦೬ ಹೊಸಹಳ್ಳಿ ಫೀಡರ್ ಮಾರ್ಗದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು.೬ ರಂದು ಬೆಳಗ್ಗೆ ೯ ರಿಂದ ಸಂಜೆ ೬ ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಫೀಡರ್ ವ್ಯಾಪ್ತಿಯ ಪ್ರದೇಶಗಳಾದ ದ್ವಾರಕ ನಗರ, ಹೊಸಹಳ್ಳಿ, ಕಾವೇರಿನಗರ ೧ ನೇ ಹಂತ ಮತ್ತು ಸುತ್ತ ಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಸೆಸ್ಕಾಂ ಎಂಜಿನಿಯರ್ ಆರ್.ಟಿ.ಚಂದ್ರಮೌಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದು ಬೆಳಗಾವಿಗೆ ಆರ್‌ಎಸ್‌ಎಸ್‌ಸರಸಂಘಚಾಲಕ ಭಾಗವತ್‌
ಕಡೂರು ತಾಲೂಕು ಕಚೇರಿಗೆ ರಾಜೇಂದ್ರಕುಮಾರ್ ಕಠಾರಿಯಾ ಭೇಟಿ