ಎಚ್ಐವಿ ಮತ್ತು ಏಡ್ಸ್ ಬಗ್ಗೆ ಜಾಗೃತಿ ಬೀದಿ ನಾಟಕ

KannadaprabhaNewsNetwork |  
Published : Sep 02, 2024, 02:04 AM IST
1ಕೆಎಂಎನ್ ಡಿ19 | Kannada Prabha

ಸಾರಾಂಶ

ಸೌಹಾರ್ದ ಸಾಂಸ್ಕೃತಿಕ ಕಲಾ ಸಂಘ ಹನಿಯಂಬಾಡಿ ವತಿಯಿಂದ ಹಾಡುಗಳು, ನೃತ್ಯ, ಬೀದಿ ನಾಟಕದ ಮೂಲಕ ಎಚ್ಐವಿ ಏಡ್ಸ್ ಹೇಗೆ ಹರಡುತ್ತದೆ, ತಡೆಗಟ್ಟವ ಬಗ್ಗೆ ಅರಿವು ಮೂಡಿಸಲಾಯಿತು.

ಕನ್ನಡಪ್ರಭ ವಾರ್ತೆ ಮದ್ದೂರು

ತಾಲೂಕಿನ ಬೆಸಗರಹಳ್ಳಿಯಲ್ಲಿ ಎಚ್ಐವಿ ಮತ್ತು ಏಡ್ಸ್ ಬಗ್ಗೆ ಕಲಾವಿದರಿಂದ ಜಾಗೃತಿ ಬೀದಿ ನಾಟಕ ಪ್ರದರ್ಶನ ನಡೆಯಿತು.

ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಜ್ಯ ಏಡ್ಸ್ ಪ್ರಿವೆನ್ಸೆನ್ಸ್ ಸೊಸೈಟಿ, ಏಡ್ಸ್ ಪ್ರತಿಬಂಧಕ ಹಾಗೂ ನಿಯಂತ್ರಣ ಘಟಕ ಮಂಡ್ಯ, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಸಗರಹಳ್ಳಿ ಆಶ್ರಯದಲ್ಲಿ ನಡೆದ ಕಾರ್ಯಕ್ರಮವನ್ನು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಕಿರಣ್ ಕುಮಾರ್ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಎಚ್ಐವಿ- ಏಡ್ಸ್ ತಡೆಗಟ್ಟಲು ಪ್ರತಿಯೊಬ್ಬರು ಮುಂದಾಗಬೇಕು. ಎಚ್ಐವಿ ಏಡ್ಸ್ ಬಗ್ಗೆ ಯುವ ಪೀಳಿಗೆಗೆ ತಿಳಿಸಬೇಕು ಎಂದರು.

ಆರೋಗ್ಯ ನಿರೀಕ್ಷಣಾಧಿಕಾರಿ ಜನಾರ್ಧನ್ ಮೂರ್ತಿ ಮಾತನಾಡಿದರು. ನಂತರ ಸೌಹಾರ್ದ ಸಾಂಸ್ಕೃತಿಕ ಕಲಾ ಸಂಘ ಹನಿಯಂಬಾಡಿ ವತಿಯಿಂದ ಹಾಡುಗಳು, ನೃತ್ಯ, ಬೀದಿ ನಾಟಕದ ಮೂಲಕ ಎಚ್ಐವಿ ಏಡ್ಸ್ ಹೇಗೆ ಹರಡುತ್ತದೆ, ತಡೆಗಟ್ಟವ ಬಗ್ಗೆ ಅರಿವು ಮೂಡಿಸಲಾಯಿತು.

ವೇದಿಕೆಯಲ್ಲಿ ಸಮುದಾಯ ಆರೋಗ್ಯ ಅಧಿಕಾರಿ ಎಚ್ ವಿ ಮೋನಿಕಾ, ಸೌಹಾರ್ದ ಸಾಂಸ್ಕೃತಿಕ ಕಲಾಸಂಘದ ನಾಯಕ ಎನ್ ಶೇಖರ್, ಯರಳ್ಳಿ ಹೊನ್ನೇಶ್, ಎಚ್.ಬಿ.ರಾಮಕೃಷ್ಣ, ದೇವೇಗೌಡ, ವೈ.ಸಿ.ಕುಮಾರ್, ಬನ್ನೂರು ಅನುಸೂಯ ಸೇರಿದಂತೆ ಆಶಾ ಕಾರ್ಯಕರ್ತರು ಇದ್ದರು.ಎಚ್‌ಐವಿ ಜಾಗೃತಿಗೆ ಸೆ.11 ರಂದು ಮ್ಯಾರಥಾನ್

ಕನ್ನಡಪ್ರಭ ವಾರ್ತೆ ಮಂಡ್ಯಮಾರಕ ರೋಗ ಎಚ್‌ಐವಿ ಹರಡದಂತೆ ತಡೆಗಟ್ಟಲು ಮತ್ತು ಯುವಜನರಲ್ಲಿ ಜಾಗೃತಿ ಮೂಡಿಸಲು ಜಿಲ್ಲೆಯಲ್ಲಿ ಸೆ.11 ರಂದು ಯುವಜನೋತ್ಸವ ಅಂಗವಾಗಿ ಮ್ಯಾರಥಾನ್ ಓಟ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಎಂ.ಎನ್ ಆಶಾಲತಾ ಹೇಳಿದರು.

ಜಿಲ್ಲಾ ಪಂಚಾಯ್ತಿನಲ್ಲಿ ನಡೆದ ಎಚ್‌ಐವಿ ತಡೆಗಟ್ಟಲು ತೀವ್ರಗೊಳಿಸದ ಐಇಸಿ ಪ್ರಚಾಂದೋಲನ ಸಭೆ ನಡೆಸಿ ಮಾತನಾಡಿ, ಮ್ಯಾರಥಾನ್ ಸ್ಪರ್ಧೆಗೆ 17 ರಿಂದ 25 ವರ್ಷದವರು ಒಟ್ಟು 250 ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ನಗರದ ಸರ್.ಎಂ.ವಿ.ಕ್ರೀಡಾಂಗಣದಿಂದ ಮ್ಯಾರಥಾನ್ ಪ್ರಾರಂಭವಾಗಿ ನಗರದ ಮುಖ್ಯ ರಸ್ತೆಗಳಲ್ಲಿ ಒಟ್ಟು 5 ಕಿ.ಮೀ. ಸಂಚರಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಿದೆ ಎಂದರು.ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ ಮೋಹನ್, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಓಂ ಪ್ರಕಾಶ್, ವೈದ್ಯಕೀಯ ಶಿಕ್ಷಣ ಸಂಸ್ಥೆಯ ಅಧೀಕ್ಷಕ ಡಾ.ಶಿವಕುಮಾರ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಿ.ಚೆಲುವಯ್ಯ ಸೇರಿದಂತೆ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರಲ್ಲಿ ಬಸವಣ್ಣ ಜೀವ ವೈವಿಧ್ಯ ಉದ್ಯಾನವನ
ಕೆಎಂಎಫ್‌ನಲ್ಲಿ ಉದ್ಯೋಗದ ನೆಪದಲ್ಲಿ50 ಲಕ್ಷ ವಂಚನೆ:ಇಬ್ಬರ ವಿರುದ್ಧ ಕೇಸ್‌