ಜಯಚಂದ್ರ ಸಹ ಭಗೀರಥರಿದ್ದಂತೆ

KannadaprabhaNewsNetwork |  
Published : May 06, 2025, 12:18 AM IST
೪ಶಿರಾ೨: ಶಿರಾ ತಾಲೂಕು ಆಡಳಿತದ ವತಿಯಿಂದ ನಗರದ ಮಿನಿ ವಿಧಾನಸೌಧದಲ್ಲಿ ಮಹರ್ಷಿ ಭಗೀರಥರ ಜಯಂತೋತ್ಸವ ಆಚರಿಸಲಾಯಿತು. ತಹಶೀಲ್ದಾರ್ ಸಚ್ಚಿದಾನಂದ ಕುಚನೂರ, ಮುಖಂಡರಾದ ಜೆ.ಎನ್.ರಾಜಸಿಂಹ, ರಾಮಚಂದ್ರಪ್ಪ ಸೇರಿದಂತೆ ಹಲವರು ಹಾಜರಿದ್ದರು. | Kannada Prabha

ಸಾರಾಂಶ

ಭಗೀರಥ ಮಹರ್ಷಿಗಳು ತಪಸ್ಸು ಮಾಡಿ ಗಂಗೆಯನ್ನು ಭೂಮಿಗೆ ತಂದ ಮಹಾಪುರುಷ. ಅವರ ಸಾಧನೆ, ಜೀವನಗಾಥೆಯನ್ನು ಪ್ರತಿಯೊಬ್ಬರಿಗೂ ಸ್ಪೂರ್ತಿಯಾಗಿದ್ದು, ಅದನ್ನು ಅರಿತು ತಮ್ಮ ಜೀವನದಲ್ಲಿ ಅವರ ಆದರ್ಶಗಳನ್ನು ರೂಢಿಸಿಕೊಳ್ಳಬೇಕು ಎಂದು ತಹಸೀಲ್ದಾರ್ ಸಚ್ಚಿದಾನಂದ ಕುಚನೂರ ಹೇಳಿದರು.

ಕನ್ನಡಪ್ರಭ ವಾತೆ ಶಿರಾ ಭಗೀರಥ ಮಹರ್ಷಿಗಳು ತಪಸ್ಸು ಮಾಡಿ ಗಂಗೆಯನ್ನು ಭೂಮಿಗೆ ತಂದ ಮಹಾಪುರುಷ. ಅವರ ಸಾಧನೆ, ಜೀವನಗಾಥೆಯನ್ನು ಪ್ರತಿಯೊಬ್ಬರಿಗೂ ಸ್ಪೂರ್ತಿಯಾಗಿದ್ದು, ಅದನ್ನು ಅರಿತು ತಮ್ಮ ಜೀವನದಲ್ಲಿ ಅವರ ಆದರ್ಶಗಳನ್ನು ರೂಢಿಸಿಕೊಳ್ಳಬೇಕು ಎಂದು ತಹಸೀಲ್ದಾರ್ ಸಚ್ಚಿದಾನಂದ ಕುಚನೂರ ಹೇಳಿದರು. ಅವರು ತಾಲೂಕು ಆಡಳಿತದ ವತಿಯಿಂದ ನಗರದ ಮಿನಿ ವಿಧಾನಸೌಧದಲ್ಲಿ ಹಮ್ಮಿಕೊಂಡಿದ್ದ ಮಹರ್ಷಿ ಭಗೀರಥರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಭಗೀರಥ ಮಹರ್ಷಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಭಗೀರಥರು ತಪ್ಪಸ್ಸು ಮಾಡಿ ಗಂಗೆಯನ್ನು ಧರೆಗಿಳಿಸಿದಂತೆ ಶಿರಾ ಕ್ಷೇತ್ರದ ಶಾಸಕರಾದ ಟಿ.ಬಿ.ಜಯಚಂದ್ರ ಅವರೂ ಸಹ ತಪಸ್ಸಿನಂತೆ ಹೋರಾಡಿ ಹೇಮಾವತಿ ನೀರನ್ನು ತಾಲೂಕಿಗೆ ಹರಿಸಿದ್ದಾರೆ. ಬಯಲು ಸೀಮೆ ಪ್ರದೇಶಕ್ಕೆ ಹೇಮಾವತಿ ನೀರು ಹರಿಯುತ್ತಿದ್ದು, ಕುಡಿಯುವ ನೀರಿನ ಬವಣೆ ತೀರಿದೆ ಎಂದರು. ಭಗೀರಥ ಉಪ್ಪಾರ ಸಂಘದ ಉಪಾಧ್ಯಕ್ಷ ರಾಮಚಂದ್ರಪ್ಪ ಮಾತನಾಡಿ ನಮ್ಮ ಸಮುದಾಯದ ಬಹು ದಿನಗಳ ಬೇಡಿಕೆಯಾದ ಭಗೀರಥ ಜಯಂತಿಯನ್ನು ಆಚರಿಸಬೇಕೆಂದು ಮನವಿ ಮಾಡಿದ ಫಲವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೨೦೧೫ರಲ್ಲಿ ಆದೇಶ ನೀಡಿದರು. ಸಾಧನೆಯ ಛಲ ಇದ್ದರೆ ಏನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಭಗೀರಥ ಮಹರ್ಷಿಯ ಆದರ್ಶವಾಗಿದ್ದಾರೆ. ಎಲ್ಲರೂ ಭಗೀರಥ ಮಹರ್ಷಿಗಳ ಆದರ್ಶಗಳನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದರು. ದಲಿತ ಮುಖಂಡ ಜೆ.ಎನ್.ರಾಜಸಿಂಹ ಮಾತನಾಡಿ ಭಗೀರಥರು ಪೌರಾಣಿಕ ಪುರುಷರು. ಸಮಾಜದಲ್ಲಿ ಇಂದಿಗೂ ಕಠಿಣ ಪರಿಶ್ರಮಕ್ಕೆ ಭಗೀರಥ ಯತ್ನ ಎಂದೇ ಉದಾಹರಣೆ ನೀಡಲಾಗುತ್ತದೆ. ಭಗೀರಥರು ಎಂದರೆ ಸಾಧನೆಯ ಧ್ಯೋತಕ ಎಂದರು. ಕಾರ್ಯಕ್ರಮದಲ್ಲಿ ಪೌರಾಯುಕ್ತ ರುದ್ರೇಶ್, ಭಗೀರಥ ಉಪ್ಪಾರ ಸಂಘದ ಅಧ್ಯಕ್ಷ ಪಾಂಡುರಂಗಪ್ಪ, ಖಜಾಂಚಿ ಗುರುನಾಥ, ಮಲ್ಲಮ್ಮ ಕಾಂತರಾಜು, ಸಂಘಟನ ಕಾರ್ಯದರ್ಶಿ ದೊಡ್ಡವಬಾಣಗೆರೆ ನಟರಾಜ್, ಹುಲಿಕುಂಟೆ ರಘು ಸೇರಿದಂತೆ ಹಲವರು ಹಾಜರಿದ್ದರು.

PREV

Recommended Stories

ದೇಶದ ನಾಯಕರಾಗಲು ಶಾಲೆಯಲ್ಲಿ ನಾಯಕತ್ವ ವಹಿಸಿಕೊಳ್ಳಿ
ಪರಿಷ್ಕೃತ ಜಿಎಸ್‌ಟಿ ಬಡ ಜನತೆಗೆ ಅನುಕೂಲ