ಉಳ್ಳಾಲ: ಅಯೋಧ್ಯೆ ರಾಮ ಮಂದಿರ ಟ್ರಸ್ಟ್‌ನಲ್ಲಿ ನಡೆದಿರುವ ಹಣಕಾಸು ಅವ್ಯವಹಾರ ಆರೋಪಗಳ ಕುರಿತು ಸಮಗ್ರ ಮತ್ತು ಪಾರದರ್ಶಕ ತನಿಖೆ ನಡೆಸಬೇಕು ಎಂದು ರಾಜ್ಯ ಯುವ ಕಾಂಗ್ರೆಸ್ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಉಳ್ಳಾಲ್ ಒತ್ತಾಯಿಸಿದರು.
ಮಂದಿರವನ್ನೇ ರಕ್ಷಿಸಲು ಸಾಧ್ಯವಾಗದವರು ದೇಶವನ್ನು ಹೇಗೆ ರಕ್ಷಿಸುತ್ತಾರೆ?” ಎಂದು ಪ್ರಶ್ನಿಸಿದ ಅವರು, ಆರ್‌ಎಸ್‌ಎಸ್, ವಿಹಿಂಪ ಸೇರಿದಂತೆ ಹಿಂದೂ ಸಂಘಟನೆಗಳು ಈ ವಿಚಾರದಲ್ಲಿ ಮೌನ ವಹಿಸಿರುವುದೇಕೆ ಎಂದು ಪ್ರಶ್ನಿಸಿದರು.ಉಳ್ಳಾಲ ನಗರಸಭೆ ಮಾಜಿ ಉಪಾಧ್ಯಕ್ಷ ದಿನೇಶ್ ರೈ, ಅಯೋಧ್ಯೆ ಹಗರಣದ ಬಗ್ಗೆ ಹಿಂದೂ ಪರ ಸಂಘಟನೆಗಳು ಮತ್ತು ಬಿಜೆಪಿ ನಾಯಕರು ಮೌನವಾಗಿರುವುದನ್ನು ಪ್ರಶ್ನಿಸಿದರು.
ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರ್ ಹಾಗೂ ಉಳ್ಳಾಲ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಚಂದ್ರಿಕಾ ರೈ ಉಪಸ್ಥಿತರಿದ್ದರು.