ಕನ್ನಡಪ್ರಭ ವಾರ್ತೆ ಯಾದಗಿರಿ
ಪತ್ರಿಕೆಯೊಂದಿಗೆ ಮಾತನಾಡಿದ ಡಾ. ಕುಲಕರ್ಣಿ, ಪ್ರಶಸ್ತಿ ದೊರೆತಿರುವುದರಿಂದ ನನ್ನ ಜವಾಬ್ದಾರಿ ಹೆಚ್ಚಾಗಿದೆ. ನಾನು ಮೊದಲು ಗಡಿಭಾಗದ ಮಾದ್ವಾರ ಆಯುರ್ವೇದಿಕ್ ಆಸ್ಪತ್ರೆಯಲ್ಲಿ ಸುಧೀರ್ಘಕಾಲ ಸರ್ಕಾರಿ ವೈದ್ಯನಾಗಿ ಕೆಲಸ ಮಾಡಿದ್ದೇನೆ. ಜತೆಗೆ ನಗರದ ಆಯುರ್ವೇದ ಜಿಲ್ಲಾಸ್ಪತ್ರೆಯಲ್ಲಿ ಕಳೆದ 1 ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದು, ಈ ಭರತ ಭೂಮಿಯ ಮೂಲ ಚಿಕಿತ್ಸಾ ಪದ್ದತಿಯಾದ ಆಯುರ್ವೇದ ಚಿಕಿತ್ಸೆ ಹಾಗೂ ಲಾಭದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ಅವರು ಎದುರಿಸುತ್ತಿರುವ ಹಲವಾರು ರೋಗಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಿ, ಪರಿಹಾರ ಒದಗಿಸಿದ ಆತ್ಮತೃಪ್ತಿ ನನಗಿದೆ ಎಂದು ತಿಳಿಸಿದರು.
ಈ ಭಾಗದಲ್ಲಿ ಅನೇಕ ರೋಗಿಗಳು ಆಯುರ್ವೇದ ಚಿಕಿತ್ಸೆ ಪಡೆಯಲು ದೂರದ ಕಾರವಾರ, ಉಡುಪಿ, ಹಾಸನ, ಧರ್ಮಸ್ಥಳ, ನೆರೆಯ ಮಹಾರಾಷ್ಟ್ರದ ಮೀರಜ್, ಸಾಂಗ್ಲಿಗೆ ಹೋಗುತ್ತಾರೆ. ಸರ್ಕಾರ ಕಲ್ಯಾಣ ಕರ್ನಾಟಕದಲ್ಲಿ ಆಯುರ್ವೇದಿಕ್ ಚಿಕಿತ್ಸೆ ಪರಿಣಾಮಕಾರಿಯಾಗಿ ಜಾರಿಯಾಗಲು ಗಮನ ನೀಡಬೇಕು, ಜಿಲ್ಲಾ ಕೇಂದ್ರದಲ್ಲಿ 50 ಬೆಡ್‌ಗಳ ಜಿಲ್ಲಾಸ್ಪತ್ರೆ ನಿರ್ಮಾಣಕ್ಕೆ ಸರ್ಕಾರ ಮುಂದಾಗಬೇಕು. ಹಾಗಾದಾಗ ಮಾತ್ರ ಆಯುರ್ವೇದ ಚಿಕಿತ್ಸೆಗಳ ಚಟುವಟಿಕೆಗಳಿಗೆ ವೇಗ ಹೆಚ್ಚಾಗುತ್ತದೆ. ಜತೆಗೆ ಇಲ್ಲಿಯೇ ಕಡಿಮೆ ವೆಚ್ಚದಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ದೊರೆಯುತ್ತದೆ ಎಂದು ಡಾ. ಕುಲಕರ್ಣಿ ಹೇಳಿದರು.