ಮಂಗಳೂರಿನ ಶಾರದಾ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯ ಅಂಗವಾಗಿ ಆರೋಗ್ಯಭಾರತಿ ಮಂಗಳೂರು ಸಹಯೋಗದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಮಂಗಳೂರು: ಮಂಗಳೂರಿನ ಶಾರದಾ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯ ಅಂಗವಾಗಿ ಆರೋಗ್ಯಭಾರತಿ ಮಂಗಳೂರು ಸಹಯೋಗದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಅರೋಗ್ಯ ಭಾರತೀಯ ಅಖಿಲ ಭಾರತೀಯ ಸಹ ಸಂಘಟನಾ ಕಾರ್ಯದರ್ಶಿ ಡಾ.ಮುರಳಿ ಕೃಷ್ಣ ಅವರು ಆರೋಗ್ಯಕರ ಆಹಾರ ಶೈಲಿ ಹಾಗೂ ಆರೋಗ್ಯಕರ ಜೀವನ ಶೈಲಿಯನ್ನು ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳುವ ಬಗ್ಗೆ, ಅದರ ಮಹತ್ವದ ಬಗ್ಗೆ ಮಾತನಾಡಿದರು. ಶಾರದಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ. ಎಂ. ಬಿ. ಪುರಾಣಿಕ್ ಅಧ್ಯಕ್ಷತೆ ವಹಿಸಿದ್ದರು.
ಶಾರದಾ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಪ್ರಾಂಶುಪಾಲ ಡಾ. ಸಂದೀಪ್ ಬೇಕಲ್, ಆರೋಗ್ಯ ಭಾರತೀ ರಾಜ್ಯದ ಉಪಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷ ಡಾ .ಮುರಲೀ ಮೋಹನ್ ಚುಂತಾರು, ಪುರುಷೋತ್ತಮ ದೇವಸ್ಯ, ಅರೋಗ್ಯ ಭಾರತೀ ವಿಭಾಗ ಸಂಯೋಜಕ ಉಮೇಶ್ ಪ್ರಭು ಬನ್ನೂರ್, ಆರೋಗ್ಯ ಭಾರತೀ ಜಿಲ್ಲಾ ಅಧ್ಯಕ್ಷ ದಿನೇಶ್ ಚಂದ್ರಗಿರಿ ಮತ್ತಿತರರಿದ್ದರು.
ಡಾ. ಅರ್ಜುನ್ ಸ್ವಾಗತಿಸಿದರು. ಡಾ.ಖುಷಿ ನಿರೂಪಿಸಿದರು. ಡಾ. ಆರ್ಯ ವಂದಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.