ಕನ್ನಡಪ್ರಭ ವಾರ್ತೆ ವಿಜಯಪುರ: ಆಧುನಿಕ ಯುಗದ ಒತ್ತಡದ ಬದುಕಿಗೆ ಪುರಾತನ ವೈದ್ಯಕೀಯ ಪದ್ಧತಿ ಆಯುರ್ವೇದ ಉತ್ತರವಾಗಿದೆ. ಇತ್ತೀಚೆಗೆ ಯುವಕರಲ್ಲಿ ಹೃದಯ ಸಂಬಂಧಿ ರೋಗಗಳು ಉಲ್ಬಣಿಸುತ್ತಿದ್ದು, ಆಯುರ್ವೇದ, ಯೋಗ ಹಾಗೂ ಪ್ರಾಣಾಯಾಮಗಳನ್ನು ಅಳವಡಿಸಿಕೊಂಡರೆ ಈ ಸಮಸ್ಯೆಗಳಿಂದ ದೂರವಿರಬಹುದೆಂದು ಆರ್.ಕೆ.ಎಮ್ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶಂಭುಲಿಂಗಯ್ಯ ಕರ್ಪೂರಮಠ ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೇಂದ್ರ ಕಾರಾಗೃಹದ ಅಧೀಕ್ಷಕ ಐ.ಜೆ.ಮ್ಯಾಗೇರಿ, ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ವೈದ್ಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಅಂಥಹ ವೈದ್ಯರಿಗೆ ರಾಷ್ಟ್ರೀಯ ವೈದ್ಯರ ದಿನಾಚರಣೆಯ ಶುಭಾಶಯಗಳನ್ನು ಕೋರಿ, ವೈದ್ಯಕೀಯ ಕ್ಷೇತ್ರದಲ್ಲಿ ಆರ್.ಕೆ.ಎಂ ಸಂಸ್ಥೆಯ ಸೇವೆಯನ್ನು ಶ್ಲಾಘಿಸಿದರು.
ಉಪ ಅಧೀಕ್ಷಕ ಎಸ್.ಜಿ.ಮಂಜುನಾಥ, ಜೈಲರ್ ಗೋಪಾಲಕೃಷ್ಣ ಕುಲಕರ್ಣಿ, ಎಸ್.ಎಂ.ಬಿರಾದಾರ, ಆಸ್ಪತ್ರೆಯ ಸಿಇಒ ಡಾ.ಬಸವಂತರಾವ್ ಮೋಹಿತೆ, ವೈದ್ಯಕೀಯ ಅಧೀಕ್ಷಕಿ ಡಾ.ರಾಜೇಶ್ವರಿ ಬಿರಾದಾರ, ಡಾ.ಲೋಕೇಶ ಅಹಿರಸಂಗ, ಡಾ.ರಜನಿ ಅಂಗಡಿ ಪಾಲ್ಗೊಂಡಿದ್ದರು. ಶಿಬಿರದಲ್ಲಿ ಕಾರಾಗೃಹದ ಸಿಬ್ಬಂದಿ ಹಾಗೂ 200ಕ್ಕೂ ಹೆಚ್ಚು ಖೈದಿಗಳ ಆರೋಗ್ಯ ತಪಾಸಣೆಯನ್ನು ನಡೆಸಲಾಯಿತು.