ಧಾರವಾಡ:
ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆಯುಷ್ ಇಲಾಖೆ ಸಹಯೋಗದೊಂದಿಗೆ ವಿಶೇಷ ಆರೋಗ್ಯ ತಪಾಸಣೆ, ಚಿಕಿತ್ಸೆ, ಫಥ್ಯ, ಯೋಗಾಸನ ಮತ್ತು ಜೀವನ ಶೈಲಿ ಮಾಹಿತಿ ಶಿಬಿರ ಉದ್ಘಾಟಿಸಿದ ಅವರು, ಯೋಗವನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಂಡರೆ, ಸರ್ಕಾರಿ ನೌಕರರು ತಮ್ಮ ಕರ್ತವ್ಯಗಳ ಜತೆಗೆ ತಮ್ಮ ವೈಯಕ್ತಿಕ ಆರೋಗ್ಯ ಕಾಪಾಡಿಕೊಳ್ಳಬಹುದು. ನಮ್ಮ ವೈಯಕ್ತಿಕ ಆರೋಗ್ಯಕ್ಕೆ ನೀಡುವ ಸಮಯವು ಮುಂದೆ ನಮ್ಮ ಭವಿಷ್ಯದ ಜೀವನವನ್ನು ನೆಮ್ಮದಿಯಿಂದ ಕಳೆಯಲು ಸಾಧ್ಯವಾಗಲಿದೆ ಎಂದರು.
ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಫ್. ಸಿದ್ಧನಗೌಡರ ಮಾತನಾಡಿ, ಸಂಘದ ಪರವಾಗಿ ಇಂತಹ ರಚನಾತ್ಮಕ ಕಾರ್ಯಕ್ರಮ ಮಾಡುವುದಾಗಿ ತಿಳಿಸಿದರು. ಆಯುಷ್ ಪಂಚಕರ್ಮ ವಿಭಾಗದ ತಜ್ಞ ವೈದ್ಯಾಧಿಕಾರಿಗಳಾದ ಡಾ. ಸಂತೋಷ ತಾಡಪತ್ರಿ, ಡಾ. ಶಶಿಧರ ತಳಕಲ್, ಡಿಎಚ್‌ಒ ಡಾ. ಪರಶುರಾಮ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಗಣೇಶ ಕಬಾಡೆ ಇದ್ದರು. ಶಿಬಿರದಲ್ಲಿ 260 ಫಲಾನುಭವಿಗಳು ಆಯುಷ್ ಆರೋಗ್ಯ ಸೇವೆ ಪಡೆದರು. 46 ಫಲಾನುಭವಿಗಳಿಗೆ ಹೆಚ್ಚಿನ ಆಯುರ್ವೇದ ಚಿಕಿತ್ಸೆಗಾಗಿ ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆ ಮತ್ತು ಆಯುಷ್ ಪಂಚಕರ್ಮ ವಿಭಾಗದಲ್ಲಿ ಚಿಕಿತ್ಸೆ ಪಡೆಯಲು ತಿಳಿಸಿದರು.