ಆಯುಷ್ ಇಲಾಖೆ ಆರೋಗ್ಯ ಶಿಬಿರ: 452 ಜನರಿಗೆ ಚಿಕಿತ್ಸೆ

KannadaprabhaNewsNetwork |  
Published : Mar 28, 2025, 12:33 AM IST
ಕ್ಯಾಪ್ಷನ26ಕೆಡಿವಿಜಿ38 ದಾವಣಗೆರೆಯಲ್ಲಿ ಜಿಲ್ಲಾ ವಕೀಲರ ಸಂಘದಿಂದ ನಡೆದ ಆರೋಗ್ಯ ಶಿಬಿರವನ್ನು ಜಿಲ್ಲಾ ಸತ್ರ ಮತ್ತು ಪ್ರಧಾನ ನ್ಯಾಯಾಧೀಶರಾದ ಡಿ.ಕೆ.ವೇಲಾ ಉದ್ಘಾಟಿಸಿದರು. | Kannada Prabha

ಸಾರಾಂಶ

ಜಿಲ್ಲಾ ವಕೀಲರ ಭವನದಲ್ಲಿ ಬುಧವಾರ ಆಯುಷ್ ಇಲಾಖೆ, ಜಿಲ್ಲಾ ವಕೀಲರ ಸಂಘದಿಂದ ಆಯೋಜಿಸಲಾಗಿದ್ದ ಉಚಿತ ತಪಾಸಣೆ ಮತ್ತು ಔಷಧ ವಿತರಣೆ ಶಿಬಿರ ಯಶಸ್ವಿಯಾಗಿ ನಡೆಯಿತು. ವಕೀಲರು, ನ್ಯಾಯಾಧೀಶರು, ನ್ಯಾಯಾಲಯ ಸಿಬ್ಬಂದಿ, ಕಕ್ಷಿದಾರರು, ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆದಿದ್ದಾರೆ.

- ಜಿಲ್ಲಾ ವಕೀಲರ ಸಂಘ ಆಯೋಜಿಸಿದ್ದ ಉಚಿತ ತಪಾಸಣೆ-ಔಷಧ ವಿತರಣೆ ಶಿಬಿರ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ ಜಿಲ್ಲಾ ವಕೀಲರ ಭವನದಲ್ಲಿ ಬುಧವಾರ ಆಯುಷ್ ಇಲಾಖೆ, ಜಿಲ್ಲಾ ವಕೀಲರ ಸಂಘದಿಂದ ಆಯೋಜಿಸಲಾಗಿದ್ದ ಉಚಿತ ತಪಾಸಣೆ ಮತ್ತು ಔಷಧ ವಿತರಣೆ ಶಿಬಿರ ಯಶಸ್ವಿಯಾಗಿ ನಡೆಯಿತು. ವಕೀಲರು, ನ್ಯಾಯಾಧೀಶರು, ನ್ಯಾಯಾಲಯ ಸಿಬ್ಬಂದಿ, ಕಕ್ಷಿದಾರರು, ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆದರು.

ಎರಡೂ ಶಿಬಿರದಲ್ಲಿ ಸುಮಾರು 1 ಸಾವಿರ ಜನ ಪಾಲ್ಗೊಂಡಿದ್ದಾರೆ. ಈ ಹಿಂದೆ ನಡೆಸಿದ್ದ ಶಿಬಿರದಲ್ಲಿ ತಪಾಸಣೆ ಮಾಡಿಸಿಕೊಂಡು ಔಷಧ ಪಡೆದ ವಕೀಲರ ಅಭಿಪ್ರಾಯ ತಿಳಿಯುವ ಉದ್ದೇಶದಿಂದ ಹಮ್ಮಿಕೊಂಡ ಈ ಶಿಬಿರ ಅದ್ಭುತ ಯಶಸ್ಸು ಕಂಡಿತು.

ಜಿಲ್ಲಾ ಆಯುಷ್ ಅಧಿಕಾರಿ ಡಾ.ಯೋಗೇಂದ್ರ ಕುಮಾರ ಮಾತನಾಡಿ, ಕೊನೆಯ ಕ್ಯಾಂಪ್‌ನಲ್ಲಿ 452 ಜನ ಪರೀಕ್ಷೆ ಮಾಡಿಕೊಂಡಿದ್ದು, ಎಲ್ಲರೂ ಚಿಕಿತ್ಸೆ, ಔಷಧ ಪಡೆದಿದ್ದಾರೆ. ಉತ್ತಮ ಫಲಿತಾಂಶ ಸಿಕ್ಕಿದೆ ಎಂದು ವಕೀಲರು, ನ್ಯಾಯಾಲಯದ ಸಿಬ್ಬಂದಿ ತಿಳಿಸಿದ್ದಾರೆ. ಉತ್ತಮ ಪರಿಣಾಮ ಬೀರಿದೆ ಎಂದಿದ್ದಾರೆ. ವಕೀಲರು ಮಾತ್ರವಲ್ಲ ಕಕ್ಷಿದಾರರು, ಸಾರ್ವಜನಿಕರು ಸಹ ಉಪಯೋಗ ಪಡೆದುಕೊಂಡಿದ್ದಾರೆ. ಇದು ಉತ್ತಮ ಬೆಳವಣಿಗೆ. ಸಾವಿರಾರು ಜನ ಇದರ ಲಾಭ ಪಡೆದಿದ್ದಾರೆ. ವಕೀಲರ ಸಂಘ ಮತ್ತು ವಕೀಲರಿಂದ ಉತ್ತಮ ಸ್ಪಂದನೆ ದೊರೆತಿದೆ. ನಿಜಕ್ಕೂ ಇದು ನಮಗೆ ಉತ್ತಮ ಫಲಿತಾಂಶ ನೀಡಿದ ಶಿಬಿರ ಎನ್ನಿಸುತ್ತದೆ ಎಂದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್. ಅರುಣ್ ಕುಮಾರ್ ಶಿಬಿರ ಯಶಸ್ಸಿಗೆ ಸಂತಸ ವ್ಯಕ್ತಪಡಿಸಿ, ಆಯುಷ್ ಇಲಾಖೆ ಜಿಲ್ಲಾ ಅಧಿಕಾರಿ ಡಾ.ಯೋಗೇಂದ್ರ ಕುಮಾರ್ ಇಲಾಖೆ ಸವಲತ್ತುಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುತ್ತಿದ್ದಾರೆ. ಇಂಥ ಜನಪರ ಅಧಿಕಾರಿಗಳಿಂದ ಇಲಾಖೆಗೆ ಉತ್ತಮ ಹೆಸರು ಬರುತ್ತದೆ. ಜೊತೆಗೆ ಇಲಾಖೆ ಸದುದ್ದೇಶ ಈಡೇರಿದಂತೆ ಆಗುತ್ತದೆ. ನಮ್ಮ ಭವನದಲ್ಲಿ ಹಮ್ಮಿಕೊಂಡ ಶಿಬಿರದಲ್ಲಿ ಎಲ್ಲರಿಗೂ ಉಚಿತ ಔಷಧ ನೀಡಿದ್ದಾರೆ ಎಂದು ತಿಳಿಸಿದರು.

ಶಿಬಿರದ ಉದ್ಘಾಟನಾ ಸಂದರ್ಭದಲ್ಲಿ ಜಿಲ್ಲಾ ಸತ್ರ ಮತ್ತು ಪ್ರಧಾನ ನ್ಯಾಯಾಧೀಶರಾದ ಡಿ.ಕೆ.ವೇಲಾ ಮಾತನಾಡಿ, ಆಯುಷ್ ವೈದ್ಯಕೀಯ ವ್ಯವಸ್ಥೆ ಅತ್ಯುತ್ತಮ ವ್ಯವಸ್ಥೆ. ಇಲ್ಲಿ ಯಾವುದೇ ಅಡ್ಡ ಪರಿಣಾಮ ಇಲ್ಲದ ಈ ವೈದ್ಯಕೀಯ ಪದ್ಧತಿಯನ್ನು ಎಲ್ಲರೂ ಅಳಡಿಸಿಕೊಳ್ಳುವಂತೆ ಸಲಹೆ ನೀಡಿದರು.

ಸಂಘದ ಕಾರ್ಯದರ್ಶಿ ಬಸವರಾಜ, ಸಹ ಕಾರ್ಯದರ್ಶಿ ಎ.ಎಸ್. ಮಂಜುನಾಥ್, ಉಪಾಧ್ಯಕ್ಷ ಬಸವರಾಜ ಗೋಪನಾಳು, ಜಿಲ್ಲಾಮಟ್ಟದ ನ್ಯಾಯಾಧೀಶರು ಶಿಬಿರದ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದರು.

- - - -26ಕೆಡಿವಿಜಿ38.ಜೆಪಿಜಿ:

ದಾವಣಗೆರೆಯಲ್ಲಿ ಜಿಲ್ಲಾ ವಕೀಲರ ಸಂಘದಿಂದ ನಡೆದ ಆರೋಗ್ಯ ಶಿಬಿರವನ್ನು ಜಿಲ್ಲಾ ಸತ್ರ ಮತ್ತು ಪ್ರಧಾನ ನ್ಯಾಯಾಧೀಶರಾದ ಡಿ.ಕೆ.ವೇಲಾ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!