ಆರೋಗ್ಯ ಸೇವೆ ಒದಗಿಸಲು ಆಯುಷ್ಮಾನ ಭಾರತ ಯೋಜನೆ

KannadaprabhaNewsNetwork |  
Published : Mar 01, 2024, 02:20 AM IST
ಷಷ | Kannada Prabha

ಸಾರಾಂಶ

ಸಮಾಜದಲ್ಲಿ ಕಟ್ಟಕಡೆಯ ಮನುಷ್ಯನಿಗೆ ಆರೋಗ್ಯ ಸೇವೆ ಸಿಗಬೇಕು ಎಂಬ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಆಯುಷ್ಮಾನ ಭಾರತ ಯೋಜನೆ ತಂದಿದ್ದಾರೆ. ಅವರ ಯೋಜನೆಗೆ ಸಹಕಾರ ನೀಡುವ ಉದ್ದೇಶದಿಂದ ಕವಟಗಿಮಠ ಫೌಂಡೇಶನ್ ವತಿಯಿಂದ ಉಚಿತ ಆರೋಗ್ಯ ಶಿಬಿರವನ್ನು ಜಿಲ್ಲಾದ್ಯಂತ ಹಮ್ಮಿಕೊಳ್ಳಲಾಗುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಹೇಳಿದರು.

ಕನ್ನಡಪ್ರಭ ವಾರ್ತೆ ಗೋಕಾಕ

ಸಮಾಜದಲ್ಲಿ ಕಟ್ಟಕಡೆಯ ಮನುಷ್ಯನಿಗೆ ಆರೋಗ್ಯ ಸೇವೆ ಸಿಗಬೇಕು ಎಂಬ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಆಯುಷ್ಮಾನ ಭಾರತ ಯೋಜನೆ ತಂದಿದ್ದಾರೆ. ಅವರ ಯೋಜನೆಗೆ ಸಹಕಾರ ನೀಡುವ ಉದ್ದೇಶದಿಂದ ಕವಟಗಿಮಠ ಫೌಂಡೇಶನ್ ವತಿಯಿಂದ ಉಚಿತ ಆರೋಗ್ಯ ಶಿಬಿರವನ್ನು ಜಿಲ್ಲಾದ್ಯಂತ ಹಮ್ಮಿಕೊಳ್ಳಲಾಗುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಹೇಳಿದರು.

ಗುರುವಾರ ನಗರದ ಕೆಎಲ್‌ಇ ಶಾಲಾ ಆವರಣದಲ್ಲಿ ಮಹಾಂತೇಶ ಕವಟಗಿಮಠ ಫೌಂಡೇಶನ್ ವತಿಯಿಂದ ಹಾಗೂ ಕೆಎಲ್‌ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಇಲ್ಲಿಯವರಗೆ 1700 ಜನರಿಗೆ ಆಯುಷ್ಮಾನ ಕಾರ್ಡ್‌ಗಳನ್ನು ಮಾಡಿವಿತರಿಸಿದ್ದೇವೆ. ಗೋಕಾಕನಲ್ಲಿ ಹಮ್ಮಿಕೊಂಡ ಉಚಿತ ಆರೋಗ್ಯ ಶಿಬಿರದಲ್ಲಿ ಆರೋಗ್ಯ ತಪಾಸಣೆ ಮಾಡಿಕೊಳ್ಳಲು ಈಗಾಗಲೇ 8 ಸಾವಿರ ಜನ ನೋಂದಣಿ ಮಾಡಿಕೊಂಡಿದ್ದಾರೆ. ತಾಯಂದಿರ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ನೀಡಲು ಈ ಉಚಿತ ಆರೋಗ್ಯ ಶಿಬಿರವನ್ನು ಸಹಕಾರಿಯಾಗಿಲಿದ್ದು, ಅವರಿಗೆ ಶಸ್ತ್ರಚಿಕಿತ್ಸೆ ಮಾಡುವ ಕಾರ್ಯವನ್ನು ಸಹ ಮಹಾಂತೇಶ ಕವಟಗಿಮಠ ಫೌಂಡೇಶನ್ ಮಾಡುತ್ತಿದೆ. ಯಾವುದೇ ರೋಗ ಬಂದರೆ ಅದಕ್ಕೆ ಚಿಕಿತ್ಸೆ ನೀಡುವ ಸೌಲಭ್ಯಗಳು ಭಾರತದಲ್ಲಿ ಇವೆ. ಯಾರು ಹೆದರದೆ ಆಸ್ಪತ್ರೆಗಳಿಗೆ ಹೋಗಿ ಔಷಧ ಉಪಚಾರ ಮಾಡಿಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮಾತನಾಡಿದರು.

ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಶೂನ್ಯ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ಮತ್ತು ಬಟಕುರ್ಕಿಯ ಸಂಗನಬಸವ ಮಹಾಸ್ವಾಮಿಗಳು ವಹಿಸಿದ್ದರು. ಈ ಸಂದರ್ಭದಲ್ಲಿ ಕೆಎಲ್‌ಇ ನಿರ್ದೇಶಕ ಜಯಾನಂದ ಮುನ್ನವಳ್ಳಿ, ಜಿಪಂ ಮಾಜಿ ಸದಸ್ಯ ಟಿ.ಆರ್.ಕಾಗಲ್, ಮಡ್ಡೆಪ್ಪ ತೋಳಿನವರ, ಕಾಂಗ್ರೆಸ್ ಮುಖಂಡ ಅಶೋಕ್ ಪೂಜಾರಿ, ಡಾ.ಧರೆಪ್ಪ ಚೌಗಲಾ ,ಎಂ.ಡಿ.ಚುನಮರಿ, ಮಲ್ಲಿಕಾರ್ಜುನ ಈಟಿ, ರಾಮಣ್ಣ ಹುಕ್ಕೇರಿ, ನಾರಾಯಣ ಮಠಾಧೀಕಾರಿ, ಆನಂದ ಪಾಟೀಲ, ಡಾ.ಕಿರಣಕುಮಾರ ಪೂಜಾರ, ಡಾ.ನವೀನ ಅಂಗಡಿ, ಡಾ.ವಿಶ್ವನಾಥ್, ಡಾ.ಮಹಾದೇವಿ ಸವಣೂರು, ಡಾ.ಅಮೂಲ ಎಸ್.ಡಾ.ವೀಣಾ, ಡಾ.ಪ್ರೀತಿ ಶೆಟ್ಟಿ, ಡಾ.ಭಾಗ್ಯಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಮಾನತೆಯ ಅರಿವಿನ ಡಾ.ಅಂಬೇಡ್ಕರ್‌ ಹಬ್ಬ: ಡಾ.ಶಿವಾನಂದ
ಸಿದ್ದೇಶ್ವರ ಕೋಚಿಂಗ್ ಕ್ಲಾಸ್‌ ವಿದ್ಯಾರ್ಥಿಗಳ ಉತ್ತಮ ಸಾಧನೆ