ಶಬರಿಮಲೆಯಲ್ಲಿ ಅಯ್ಯಪ್ಪ ಭಕ್ತ ಆತ್ಮಹತ್ಯೆ

KannadaprabhaNewsNetwork |  
Published : Dec 18, 2024, 12:48 AM IST
ಕೆ ಕೆ ಪಿ ಸುದ್ದಿ 04:ಶಬರಿಮಲೆಗೆ ತೆರಳಿದ್ದ ನಗರದ ನಿವಾಸಿ ಕುಮಾರ್ ಎಂಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡು ಸಾವಿಗೆ ಶರಣಾಗಿದ್ದಾರೆ.  | Kannada Prabha

ಸಾರಾಂಶ

ಕನಕಪುರ: ನಗರದ ಅಯ್ಯಪ್ಪ ಭಕ್ತರೊಬ್ಬರು ಶಬರಿಮಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರದ ಮದ್ದೂರಮ್ಮ ಬೀದಿಯ ನಿವಾಸಿ ಕುಮಾರ್(40) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ.

ಕನಕಪುರ: ನಗರದ ಅಯ್ಯಪ್ಪ ಭಕ್ತರೊಬ್ಬರು ಶಬರಿಮಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರದ ಮದ್ದೂರಮ್ಮ ಬೀದಿಯ ನಿವಾಸಿ ಕುಮಾರ್(40) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಕಳೆದ ಎರಡು ದಿನಗಳ ಹಿಂದೆ ಕೇರಳದ ಶಬರಿಮಲೆಯ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಆರು ಜನ ಗೆಳೆಯರೊಂದಿಗೆ ಹೋಗಿದ್ದರು ಎನ್ನಲಾಗಿದೆ. ಅಯ್ಯಪ್ಪಸ್ವಾಮಿ ದರ್ಶನ ಪಡೆದ ಬಳಿಕ ದೇವಾಲಯದ ಪಕ್ಕದಲ್ಲಿ ಅಭಿಷೇಕದ ತುಪ್ಪ ಪಡೆಯಲು ಭಕ್ತರು ಸರದಿಯಲ್ಲಿ ಬರಲು ಅಳವಡಿಸಿರುವ ಶೆಲ್ಟರ್ ಮೇಲಿಂದ ಜಿಗಿಯುತ್ತಿರುವ ವಿಡಿಯೋ ದೃಶ್ಯ ಡಿ.16ರಂದು ಸೋಮವಾರ ಭಕ್ತರೊಬ್ಬರ ಮೊಬೈಲ್‌ನಲ್ಲಿ ಕಂಡು ಬಂದಿದೆ. ಕೆಳಗೆ ಬಿದ್ದು ಭಕ್ತ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಶಬರಿಮಲೆ ಸನ್ನಿದಾನದ ಆಸ್ಪತ್ರೆ ಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಕೊಟ್ಟಾಯಂ ಮೆಡಿಕಲ್ ಕಾಲೇಜಿಗೆ ರವಾನಿಸುವ ಮಾರ್ಗಮಧ್ಯೆ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಕುಮಾರ್ ಖಿನ್ನತೆಯಿಂದ ಈ ರೀತಿ ಆಗಿರಬಹುದು ಎಂಬ ಶಂಕೆ ವ್ಯಕ್ತಪಡಿಸಲಾಗಿದೆ. ಶಬರಿಮಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಷಯ ತಿಳಿದ ಕೂಡಲೆ ಮೃತ ಕುಮಾರ್ ಕುಟುಂಬಸ್ಥರು ಶಬರಿಮಲೆಗೆ ತೆರಳಿದ್ದಾರೆ ಎನ್ನಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌