ದೊಡ್ಡಬಳ್ಳಾಪುರ: ಡಿಕ್ರಾಸ್ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮಂಡಲ ಪೂಜಾ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ದೇವಾಲಯದಲ್ಲಿ ವಿಶೇಷ ಪೂಜಾಲಂಕಾರಗಳು ಜರುಗಿದವು. ಅಯ್ಯಪ್ಪ ಮಾಲಾಧಾರಿಗಳಿಂದ ವ್ರತಾಚರಣೆ, ಅನ್ನಸಂತರ್ಪಣೆ ನಡೆಯಿತು. ಶ್ರೀ ಅಯ್ಯಪ್ಪ ಸ್ವಾಮಿ ರಾಜಬೀದಿ ಉತ್ಸವ, ಜ್ಯೋತಿ ಮೆರವಣಿಗೆ ದೇವಾಲಯದಿಂದ ಹೊರಟು ಮಹಾತ್ಮಗಾಂಧಿ ವೃತ್ತ, ಸೌಂದರ್ಯಮಹಲ್ ವೃತ್ತ, ಬಸ್‌ನಿಲ್ದಾಣ, ಟಿ.ಸಿದ್ದಲಿಂಗಯ್ಯ ವೃತ್ತ, ಮಾರುಕಟ್ಟೆ, ಸಿನಿಮಾ ರಸ್ತೆ, ತೂಬಗೆರೆಪೇಟೆ, ರಂಗಪ್ಪ ವೃತ್ತ, ತೇರಿನಬೀದಿ, ಮುಖ್ಯರಸ್ತೆಗಳಲ್ಲಿ ಸಂಚರಿಸಿತು. ಮಕ್ಕಳು, ಮಹಿಳೆಯರು ಕೈಯಲ್ಲಿ ದೀಪ ಹಿಡಿದು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.