ಅಜೀಂ ಪ್ರೇಮ್‌ ಜಿ ಫೌಂಡೇಶನ್ ಕಾರ್ಯ ಪ್ರಪಂಚಕ್ಕೆ ಮಾದರಿ : ಸಂಸದ ರಾಜಶೇಖರ ಹಿಟ್ನಾಳ

KannadaprabhaNewsNetwork |  
Published : Sep 29, 2024, 01:58 AM ISTUpdated : Sep 29, 2024, 12:04 PM IST
28ಕೆಪಿಎಲ್25 ನಗರದ ಸಿ.ಪಿ.ಎಸ್.ಶಾಲೆಯಲ್ಲಿ ಅಜೀಂ ಪ್ರೇಮ್‌ಜಿ ಫೌಂಡೇಶನ್ ವತಿಯಿಂದ ಶಾಲಾ ಮಕ್ಕಳಿಗೆ ವಾರದಲ್ಲಿ ೪ ದಿನಗಳ ಮೊಟ್ಟೆ ವಿತರಣೆಯ ಕಾರ್ಯಕ್ರಮ | Kannada Prabha

ಸಾರಾಂಶ

ಅಜೀಂ ಪ್ರೇಮ್‌ಜಿ ಫೌಂಡೇಶನ್ ಮಾಡುತ್ತಿರುವ ಸೇವಾ ಕಾರ್ಯ ಪ್ರಪಂಚಕ್ಕೆ ಮಾದರಿಯಾಗಿದೆ ಎಂದು ಸಂಸದ ಕೆ. ರಾಜಶೇಖರ ಹಿಟ್ನಾಳ ಹೇಳಿದರು.

  ಕೊಪ್ಪಳ : ಅಜೀಂ ಪ್ರೇಮ್‌ಜಿ ಫೌಂಡೇಶನ್ ಮಾಡುತ್ತಿರುವ ಸೇವಾ ಕಾರ್ಯ ಪ್ರಪಂಚಕ್ಕೆ ಮಾದರಿಯಾಗಿದೆ ಎಂದು ಸಂಸದ ಕೆ. ರಾಜಶೇಖರ ಹಿಟ್ನಾಳ ಹೇಳಿದರು.

ನಗರದ ಸಿ.ಪಿ.ಎಸ್. ಶಾಲೆಯಲ್ಲಿ ಅಜೀಂ ಪ್ರೇಮ್‌ಜಿ ಫೌಂಡೇಶನ್ ವತಿಯಿಂದ ಶಾಲಾ ಮಕ್ಕಳಿಗೆ ವಾರದಲ್ಲಿ 4 ದಿನ ಮೊಟ್ಟೆ ವಿತರಣೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಸರಕಾರ ಶಾಲಾ ಮಕ್ಕಳಲ್ಲಿ ಇರುವ ಅಪೌಷ್ಟಿಕತೆ ಹೋಗಲಾಡಿಸುವ ನಿಟ್ಟಿನಲ್ಲಿ ಕ್ಷೀರಭಾಗ್ಯ, ಮಧ್ಯಾಹ್ನದ ಬಿಸಿಯೂಟ ಸೇರಿದಂತೆ ವಾರದಲ್ಲಿ 2 ದಿನ ಮೊಟ್ಟೆ ನೀಡುವಂತೆ ಅನೇಕ ಯೋಜನೆಗಳನ್ನು ಜಾರಿಗೆ ಮಾಡಿದೆ. 

ಸರಕಾರದ ಇಂತಹ ಮಹತ್ವದ ಯೋಜನೆಗಳಿಗೆ ಕೈ ಜೋಡಿಸುವ ನಿಟ್ಟಿನಲ್ಲಿ ಅಜೀಂ ಪ್ರೇಮ್‌ಜಿ ಫೌಂಡೇಶನ್ ವತಿಯಿಂದ ವಾರದಲ್ಲಿ 4  ದಿನಗಳ ಮೊಟ್ಟೆ ಕೊಡುವ ಕಾರ್ಯಕ್ಕೆ ₹1500 ಕೋಟಿ ನೀಡಿರುವುದು ಶ್ಲಾಘನೀಯ ಕಾರ್ಯವಾಗಿದೆ. ದೇಶದಲ್ಲಿ ಶ್ರೀಮಂತರು ಅನೇಕರಿದ್ದಾರೆ. ಆದರೆ ದಾನ ಮಾಡಬೇಕು ಎಂಬ ಮನೋಭಾವ ಇರುವವರು ಕೆಲವರು ಮಾತ್ರ. ಅಜೀಂ ಪ್ರೇಮ್‌ಜಿಯ ಫೌಂಡೇಶನ್ ಕೇವಲ ಮೊಟ್ಟೆ ಕೊಡುವ ಕೆಲಸಕ್ಕೆ ಮಾತ್ರ ಸಿಮಿತವಾಗಿಲ್ಲ, ಇದರ ಜೊತೆಯಲ್ಲಿ ವಿವಿಧ ಶೈಕ್ಷಣಿಕ ಚಟುವಟಿಕೆ ಮಾಡುವ ಮೂಲಕ ಪ್ರಪಂಚಕ್ಕೆ ಮಾದರಿಯಾಗಿದ್ದಾರೆ. ಅಲ್ಲದೇ ಶಾಲೆಗೆ ಶೌಚಾಲಯದ ಅಗತ್ಯವಿರುವುದಾಗಿ ತಿಳಿಸಿದ್ದಾರೆ. ಅದನ್ನು ಶೀಘ್ರವೇ ಒದಗಿಸುವ ಕಾರ್ಯ ಮಾಡಲಾಗುತ್ತದೆ ಎಂದು ಹೇಳಿದರು.

ಶಿಕ್ಷಕರಾದ ಬೀರಪ್ಪ ಅಂಡಗಿ ಮಾತನಾಡಿ, ಶಿಕ್ಷಕರು ಹಾಗೂ ದಾನಿಗಳ ಸಹಾಯದಿಂದ ಶಾಲೆಯನ್ನು ಅಭಿವೃದ್ಧಿ ಪಡಿಸಲಾಗಿದೆ. ಹಸಿರು ಶಾಲೆಯನ್ನಾಗಿ ಮಾಡಲಾಗಿದೆ. ನಗರ ಪ್ರದೇಶದಲ್ಲಿ ಅತಿ ಹೆಚ್ಚು ದಾಖಲಾತಿ ಹೊಂದಿರುವ ಶಾಲೆಯಾಗಿದೆ. ಆದರೆ, ಶೌಚಾಲಯ ಇಲ್ಲದ ಕಾರಣ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದ್ದು, ಅದನ್ನು ನಿರ್ಮಿಸಿ ಕೊಡುವಂತೆ ಸಂಸದರಿಗೆ ಮನವಿ ಮಾಡಿದರು.

ನಗರಸಭೆಯ ಅಧ್ಯಕ್ಷರಾದ ಅಮ್ಜದ್‌ ಪಟೇಲ ಮಾತನಾಡಿ, ಶಾಲಾ ಮಕ್ಕಳಿಗಾಗಿ ಸರಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಸಮರ್ಪಕವಾದ ರೀತಿಯಲ್ಲಿ ವಿದ್ಯಾರ್ಥಿಗಳು ಬಳಸಿಕೊಳ್ಳುವ ಕಾರ್ಯವಾಗಬೇಕಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನಗರಸಭೆಯ ಸದಸ್ಯರಾದ ಅಜೀಂ ಅತ್ತಾರ, ಅಕ್ಷರ ದಾಸೋಹದ ಜಿಲ್ಲಾ ಅಧಿಕಾರಿ ಅನಿತಾ, ತಾಲೂಕು ಅಧಿಕಾರಿ ಮಲ್ಲಿಕಾರ್ಜುನ ಗುಡಿ, ನಿಕಟಪೂರ್ವ ಅಧಿಕಾರಿ ಹನುಮಂತಪ್ಪ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ವಿರೂಪಾಕ್ಷಪ್ಪ ಬಾಗೋಡಿ, ಕಾಶಿನಾಥ ಸಿರಿಗೇರಿ ಮುಂತಾದವರು ಹಾಜರಿದ್ದರು.

ಕಾರ್ಯಕ್ರಮವನ್ನು ಶಿಕ್ಷಕರಾದ ಮಲ್ಲಿಕಾರ್ಜುನ ಹ್ಯಾಟಿ ನಿರೂಪಿಸಿದರು. ಶಿಕ್ಷಕರಾದ ಮಹಮ್ಮದ ಆಬೀದ ಹುಸೇನ ಅತ್ತಾರ ಸ್ವಾಗತಿಸಿದರು. ನಾಗಪ್ಪ ನರಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!