ಆನೆಗೊಳ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಬಿ.ಎಂ.ಕಿರಣ್ ಅಧ್ಯಕ್ಷ

KannadaprabhaNewsNetwork |  
Published : Mar 16, 2025, 01:49 AM IST
15ಕೆಎಂಎನ್ ಡಿ13 | Kannada Prabha

ಸಾರಾಂಶ

ನನ್ನನ್ನು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಲು ಸಂಘದ ಎಲ್ಲ ನಿರ್ದೇಶಕರು, ಜೆಡಿಎಸ್ ಹಾಗೂ ಕಾಂಗ್ರೆಸ್ ಮುಖಂಡರ ಸಹಕಾರ ಕಾರಣವಾಗಿದೆ. ಸಂಘವೂ ಸ್ವಂತ ಕಟ್ಟಡ ಹೊಂದಿದೆ. ವಾಣಿಜ್ಯ ಮಳಿಗೆಗಳಿವೆ. ಗೊಬ್ಬರ ಮಾರಾಟ ವಿಭಾಗ ಶಾಖೆ ಇದೆ. ಸಂಘದ ಆರ್ಥಿಕ ಪ್ರಗತಿಗೆ ಮತ್ತಷ್ಟು ಯೋಜನೆ ಹಮ್ಮಿಕೊಳ್ಳಲಾಗುವುದು.

ಕನ್ನಡಪ್ರಭ ವಾರ್ತೆ ಕಿಕ್ಕೇರಿ

ಆನೆಗೊಳ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಬಿ.ಎಂ.ಕಿರಣ್, ಉಪಾಧ್ಯಕ್ಷರಾಗಿ ತಿಮ್ಮೇಗೌಡ ಅವಿರೋಧವಾಗಿ ಆಯ್ಕೆಯಾದರು.

ಸಂಘದ ಅಧ್ಯಕ್ಷ ಸ್ಥಾನಕ್ಕೆ ಬಿ.ಎಂ.ಕಿರಣ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ತಿಮ್ಮೇಗೌಡ ಹೊರತು ಪಡಿಸಿ ಬೇರೆ ಯಾವ ನಿರ್ದೇಶಕರು ನಾಮಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಭರತ್‌ಕುಮಾರ್‌ ಕಾರ್ಯನಿರ್ವಹಿಸಿದರು.

ನೂತನ ಅಧ್ಯಕ್ಷ ಬಿ.ಎಂ.ಕಿರಣ್ ಮಾತನಾಡಿ, ನನ್ನನ್ನು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಲು ಸಂಘದ ಎಲ್ಲ ನಿರ್ದೇಶಕರು, ಜೆಡಿಎಸ್ ಹಾಗೂ ಕಾಂಗ್ರೆಸ್ ಮುಖಂಡರ ಸಹಕಾರ ಕಾರಣವಾಗಿದೆ. ಸಂಘವೂ ಸ್ವಂತ ಕಟ್ಟಡ ಹೊಂದಿದೆ. ವಾಣಿಜ್ಯ ಮಳಿಗೆಗಳಿವೆ. ಗೊಬ್ಬರ ಮಾರಾಟ ವಿಭಾಗ ಶಾಖೆ ಇದೆ. ಸಂಘದ ಆರ್ಥಿಕ ಪ್ರಗತಿಗೆ ಮತ್ತಷ್ಟು ಯೋಜನೆ ಹಮ್ಮಿಕೊಳ್ಳಲಾಗುವುದು. ರೈತರಿಗೆ ಸಕಾಲದಲ್ಲಿ ಸಾಲವನ್ನು ಸಂಘ ನೀಡಲು ಮೊದಲ ಆದ್ಯತೆ ನೀಡಲಾಗುವುದು ಎಂದರು.

ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಪುಷ್ಪಮಾಲೆ ಅರ್ಪಿಸಿ ಅಭಿಮಾನಿಗಳು, ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಈ ವೇಳೆ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿರ್ದೇಶಕ ಪುಟ್ಟಸ್ವಾಮಿಗೌಡ, ಹೇಮಾವತಿ ಸಕ್ಕರೆ ಕಾರ್ಖಾನೆ ಮಾಜಿ ನಿರ್ದೇಶಕ ಬಿ.ಎಸ್.ಮಂಜುನಾಥ್, ಜೆಡಿಎಸ್‌ ಯುವ ಘಟಕ ಅಧ್ಯಕ್ಷ ಕೋಳಿ ವೆಂಕಟೇಶ್, ಮುಖಂಡರಾದ ಕಡಹೆಮ್ಮಿಗೆ ರಮೇಶ್, ಶಂಕರ್, ಸರ್ವೇ ಮಂಜುನಾಥ್, ನಿರ್ದೇಶಕರಾದ ಲಿಂಗರಾಜು, ಮಂಜುನಾಥ್, ಲೋಕೇಶ್, ಐ.ಎಂ. ಮಂಜೇಗೌಡ, ಐ.ಡಿ.ಉದಯಶಂಕರ್, ಮಂಜುಳಮ್ಮ, ಜಿ.ಇ. ಸವಿತಾ, ದೇವಮ್ಮ, ಸಿಇಓ ಪ್ರಶಾಂತ್‌ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪೋಲಿಯೋ ಲಸಿಕೆಯಿಂದ ಅಂಗವಿಕಲತೆ ತಡೆಗಟ್ಟಲು ಸಾಧ್ಯ
ವೀರವೈಶ ಲಿಂಗಾಯತ ಸಮಾಜವನ್ನು ಒಡೆದು ಆಳಲು ನಿರಂತರ ಪ್ರಯತ್ನ: ಬಿ.ವೈ.ವಿಜಯೇಂದ್ರ ಕಿಡಿ