ಸಂತೆಬಾಚಹಳ್ಳಿ ಕೃಷಿ ಪತ್ತಿನ ಸಂಘಕ್ಕೆ ಬಿ.ಮೋಹನ್ ಅವಿರೋಧ ಆಯ್ಕೆ

KannadaprabhaNewsNetwork |  
Published : Dec 12, 2024, 12:31 AM IST
11ಕೆಎಂಎನ್ ಡಿ16 | Kannada Prabha

ಸಾರಾಂಶ

ಹಿಂದಿನ ಅಧ್ಯಕ್ಷ ಹರೀಶ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆದು ಅಧ್ಯಕ್ಷ ಸ್ಥಾನಕ್ಕೆ ಸಂತೆಬಾಚಹಳ್ಳಿ ಬಿ. ಮೋಹನ್ ಹೊರತು ಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಚುನಾವಣೆ ಅಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿದ ತಾಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ಭರತ್‌ಕುಮಾರ್ ಮೋಹನ್ ಅವರ ಅವಿರೋಧ ಆಯ್ಕೆಯನ್ನು ಘೋಷಣೆ ಮಾಡಿದರು.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ತಾಲೂಕಿನ ಸಂತೆಬಾಚಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಬಿ.ಮೋಹನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಹಿಂದಿನ ಅಧ್ಯಕ್ಷ ಹರೀಶ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆದು ಅಧ್ಯಕ್ಷ ಸ್ಥಾನಕ್ಕೆ ಸಂತೆಬಾಚಹಳ್ಳಿ ಬಿ. ಮೋಹನ್ ಹೊರತು ಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಚುನಾವಣೆ ಅಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿದ ತಾಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ಭರತ್‌ಕುಮಾರ್ ಮೋಹನ್ ಅವರ ಅವಿರೋಧ ಆಯ್ಕೆಯನ್ನು ಘೋಷಣೆ ಮಾಡಿದರು.

ನೂತನ ಅಧ್ಯಕ್ಷ ಬಿ.ಮೋಹನ್ ಮಾತನಾಡಿ, ಸಂಘದ ಅಧ್ಯಕ್ಷ ಸ್ಥಾನಕ್ಕೆ ನನ್ನನ್ನು ಅವಿರೋಧವಾಗಿ ಆಯ್ಕೆಯಾಗಲು ಅವಕಾಶ ಮಾಡಿಕೊಟ್ಟ ಸಂಘದ ಎಲ್ಲಾ ನಿರ್ದೇಶಕರಿಗೆ ಹಾಗೂ ಸಂಘದ ವ್ಯಾಪ್ತಿಯ ಎಲ್ಲಾ ಮುಖಂಡರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದರು.

ನನಗೆ ಸಿಕ್ಕಿರುವ ಅಧಿಕಾರದ ಅವಧಿಯಲ್ಲಿ ಸಂಘದ ಎಲ್ಲಾ ನಿರ್ದೇಶಕರು ಹಾಗೂ ಸಂಘದ ನೌಕರ ವರ್ಗದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುವ ಮೂಲಕ ಋಣ ತೀರಿಸುತ್ತೇನೆ ಎಂದರು.

ಸಂಘದಿಂದ ಸಾಲ ಪಡೆದ ಶೇರುದಾರರು ಸಕಾಲಕ್ಕೆ ಮರುಪಾವತಿ ಮಾಡುವ ಮೂಲಕ ಸಂಘದ ಅಭಿವೃದ್ಧಿಗೆ ಕೈಜೋಡಿಸಬೇಕು. ಸಂಘದಲ್ಲಿ ಯಾವುದೇ ರಾಜಕೀಯ ಬೆರೆಸದೇ ಸಂಘದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು. ಸಂಘದ ಬ್ಯಾಂಕಿಂಗ್ ಶಾಖೆಯಲ್ಲಿ ಮಹಿಳಾ ಸಂಘಗಳು, ಎಲ್ಲಾ ಶೇರುದಾರರು ಹಾಗೂ ಜನಸಾಮಾನ್ಯರು ಸಹ ಉಳಿತಾಯ ಖಾತೆ ತೆರೆದು ವ್ಯವಹರಿಸುವ ಮೂಲಕ ಬ್ಯಾಂಕಿಂಗ್ ಶಾಖೆಯ ಅಭಿವೃದ್ದಿಗೆ ಸಹಕಾರ ನೀಡಬೇಕು ಮನವಿ ಮಾಡಿದರು.

ಬಿ.ಮೋಹನ್ ಅವರು ಅವಿರೋಧ ಆಯ್ಕೆ ಘೋಷಣೆ ಆಗುತ್ತಿದ್ದಂತೆ ಅವರ ಆಪ್ತರು ಕಾರ್ಯಕರ್ತರು ಪಟಾಕಿ ಸಿಡಿಸಿ ಪರಸ್ಪರ ಸಿಹಿ ಹಂಚಿಕೊಂಡು ಸಂಭ್ರಮಿಸಿದರು.

ಈ ವೇಳೆ ಮುಖಂಡರಾದ ಡಿ.ಪಿ.ಪರಮೇಶ್, ಸಂಘದ ಉಪಾಧ್ಯಕ್ಷ ಎಚ್.ಎಸ್.ಸುರೇಶ್, ನಿರ್ದೇಶಕರಾದ ಸಣ್ಣಪ್ಪ, ಎಚ್.ಎಸ್ ಉದಯ ಕುಮಾರ್, ಎಸ್.ಎಚ್.ಕೃಷ್ಣ, ಎಚ್.ಎನ್.ಮಹದೇವ್, ಎಸ್.ಬಿ.ಚಂದ್ರಶೇಖರ್, ಸೋಮಯ್ಯ, ಸಂಘದ ಕಾರ್ಯದರ್ಶಿ ಎಸ್.ಎನ್.ನರಸೀಹೆಗೌಡ, ಗುಮಾಸ್ತೆ ರಶ್ಮಿಶ್ರೀ, ಅರವಿಂದ, ಮಹೇಶ್, ಗೆಳಯರ ಬಳಗದ ಅಧ್ಯಕ್ಷ ಗೌಡ ಜಯ್ ಕುಮಾರ್, ಉಪಾಧ್ಯಕ್ಷ ನಾಗೇಶ್, ರುಕೇಶ್, ಗೊರವಿ ಗಣೇಶ, ಸವಿತಾ ಸಮಾಜ ತಾಲೂಕು ಅಧ್ಯಕ್ಷ ಮಂಜುನಾಥ್, ಪರಮೇಶ್ ಪಚ್ಚಿ, ಕ್ರಾಸ್ ಮೊಗಣ್ಣ, ಜಗದೀಶ್, ಸುರೇಶ್, ಗ್ರಾಪಂ ಸದಸ್ಯ ದಿನೇಶ್, ಲೋಕನಹಳ್ಳಿ ಪಚ್ಚಿ,ಸಂತೆಬಾಚಹಳ್ಳಿ ಎಸ್.ಎಚ್. ಸುರೇಶ್, ನಾಯ್ಕನಹಳ್ಳಿ ಮಂಜುನಾಥ್, ಎಸ್.ಆರ್ ಮಂಜು, ಸೇರಿದಂತೆ ಸಂಘದ ವ್ಯಾಪ್ತಿಯ ಹಲವು ಮುಖಂಡರಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ