ಎಫ್‌ಎಸ್‌ಟಿ ತಂಡ ಕಾರ್ಯಪ್ರವೃತ್ತವಾಗಿರುವಂತೆ ಬಿ.ಮುರಳಿಕುಮಾರ್ ಸೂಚನೆ

KannadaprabhaNewsNetwork |  
Published : Apr 23, 2024, 12:45 AM IST
೨೨ಕೆಎಂಎನ್‌ಡಿ-೪ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಜ್ಯದ ವಿಶೇಷ ವೆಚ್ಚ ವೀಕ್ಷಕ ಬಿ.ಮುರಳಿಕುಮಾರ್ ಅವರು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. | Kannada Prabha

ಸಾರಾಂಶ

ಚೆಕ್‌ಪೋಸ್ಟ್‌ಗಳಲ್ಲಿ ಹೊರ ಜಿಲ್ಲೆಯಿಂದ ಅಕ್ರಮವಾಗಿ ಸಾಗಾಣೆಯಾಗುವ ಹಣ ಮತ್ತು ವಸ್ತುಗಳ ಮೇಲೆ ನಿಗಾ ವಹಿಸಬಹುದು. ಜಿಲ್ಲೆಯ ಒಳಭಾಗದಲ್ಲಿ ಸಾಗಾಣಿಕೆಯಾಗುವ ಹಣ ಮತ್ತು ವಸ್ತುಗಳ ಮೇಲೆ ಸ್ಥಳೀಯ ಪೊಲೀಸ್, ಎಫ್‌ಎಸ್‌ಟಿ ತಂಡಗಳು ನಿಗಾ ವಹಿಸಬೇಕು. ವಿಧಾನಸಭಾ ಕ್ಷೇತ್ರವಾರು ರಚನೆಯಾಗಿರುವ ಅಭ್ಯರ್ಥಿಗಳ ಚುನಾವಣಾ ವೆಚ್ಚ ಮೇಲ್ವಿಚರಣಾ ತಂಡಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು.

ಕನ್ನಡಪ್ರಭ ವಾರ್ತೆ ಮಂಡ್ಯ

ಲೋಕಸಭಾ ಸರ್ವತ್ರಿಕ ಚುನಾವಣೆಯ ಮತದಾನಕ್ಕೆ ಕೆಲವೇ ದಿನಗಳಿದ್ದು, ಈ ಸಂದರ್ಭದಲ್ಲಿ ಮತದಾರರಿಗೆ ಆಮಿಷ ಒಡ್ಡುವ ಸಾಧ್ಯತೆ ಹೆಚ್ಚಿರುತ್ತದೆ. ಇದನ್ನು ತಡೆಯಲು ಎಫ್.ಎಸ್.ಟಿ ತಂಡ ಸದಾ ಕಾರ್ಯಪ್ರವೃತ್ತರಾಗಿರಬೇಕು ಎಂದು ರಾಜ್ಯದ ವಿಶೇಷ ವೆಚ್ಚ ವೀಕ್ಷಕ ಬಿ.ಮುರಳಿಕುಮಾರ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿ, ಎಫ್‌ಎಸ್‌ಟಿ ತಂಡಗಳ ವಾಹನಕ್ಕೆ ಜಿಪಿಎಸ್ ಅಳವಡಿಸಿ ಅವರ ವಾಹನ ಚಲನೆಯ ಸ್ಥಳಗಳ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿ ಕಚೇರಿಯಿಂದ ನಿಗಾ ವಹಿಸಲಾಗುತ್ತಿದೆ. ಈ ವಾಹನಗಳು ಅರ್ಧ ಗಂಟೆಯಿಂದ ಹೆಚ್ಚು ಕಾಲ ಒಂದೇ ಸ್ಥಳದಲ್ಲಿ ನಿಂತರೆ ತಕ್ಷಣ ಕರೆ ಮಾಡಿ ಕಾರಣ ಕೇಳಿ ಮಾಹಿತಿ ಪಡೆದುಕೊಳ್ಳಿ ಎಂದರು.

ಚೆಕ್‌ಪೋಸ್ಟ್‌ಗಳಲ್ಲಿ ಹೊರ ಜಿಲ್ಲೆಯಿಂದ ಅಕ್ರಮವಾಗಿ ಸಾಗಾಣೆಯಾಗುವ ಹಣ ಮತ್ತು ವಸ್ತುಗಳ ಮೇಲೆ ನಿಗಾ ವಹಿಸಬಹುದು. ಜಿಲ್ಲೆಯ ಒಳಭಾಗದಲ್ಲಿ ಸಾಗಾಣಿಕೆಯಾಗುವ ಹಣ ಮತ್ತು ವಸ್ತುಗಳ ಮೇಲೆ ಸ್ಥಳೀಯ ಪೊಲೀಸ್, ಎಫ್‌ಎಸ್‌ಟಿ ತಂಡಗಳು ನಿಗಾ ವಹಿಸಬೇಕು. ವಿಧಾನಸಭಾ ಕ್ಷೇತ್ರವಾರು ರಚನೆಯಾಗಿರುವ ಅಭ್ಯರ್ಥಿಗಳ ಚುನಾವಣಾ ವೆಚ್ಚ ಮೇಲ್ವಿಚರಣಾ ತಂಡಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಪ್ರತಿಯೊಂದು ವೆಚ್ಚವನ್ನು ಲೆಕ್ಕಕ್ಕೆ ಸೇರಿಸಿ ವರದಿ ನೀಡಬೇಕು ಎಂದು ಸೂಚಿಸಿದರು.

ಮತದಾನ ಪ್ರಾರಂಭವಾಗುವ ೭೨ ಗಂಟೆಗಳ ಅವಧಿಯಲ್ಲಿ ಚುನಾವಣಾ ಆಯೋಗ ನೀಡಿರುವ ನಿರ್ದೇಶನದಂತೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡು, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರವಹಿಸುವಂತೆ ತಿಳಿಸಿದರು.

ಚುನಾವಣಾ ವೆಚ್ಚ ವೀಕ್ಷಕ ರೋಹಿತ್ ಅಸುದಾನಿ ಹಾಗೂ ಕುಮಾರ್ ಪ್ರಿಯತಮ್, ಅಶೋಕ್ ಮಾತನಾಡಿ ಈಗಾಗಲೇ ಅಭ್ಯರ್ಥಿಗಳೊಂದಿಗೆ ಸಭೆ ನಡೆಸಿ ಎರಡು ಬಾರಿ ಚುನಾವಣಾ ವೆಚ್ಚವನ್ನು ಪರಿಶೀಲಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಡಾ. ಕುಮಾರ ಮಾತನಾಡಿ, ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ರಚಿಸಲಾಗಿರುವ ವಿವಿಧ ತಂಡಗಳು, ಚೆಕ್ ಪೋಸ್ಟ್, ವಶಪಡಿಸಿಕೊಂಡಿರುವ ನಗದು, ಮದ್ಯ ಹಾಗೂ ಇನ್ನಿತರೆ ವಸ್ತುಗಳ ಬಗ್ಗೆ ಮಾಹಿತಿ ನೀಡಿದರು.

ಸಭೆಯ ನಂತರ ವಿಶೇಷ ಚುನಾವಣಾ ವೆಚ್ಚ ವೀಕ್ಷಕರು ಕಂಟ್ರೋಲ್ ರೂಂ, ಮೀಡಿಯಾ ಮಾನಿಟರಿಂಗ್ ಸೆಲ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಚಂದ್ರಶೇಖರ್ ಸೇರಿದಂತೆ ಇತರೆ ಅಧೀಕಾರಿಗಳಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು