ಕನ್ನಡಪ್ರಭ ವಾರ್ತೆ ಬಳ್ಳಾರಿ
ಇದೇ ವೇಳೆ ಮಾತನಾಡಿದ ದೊಡ್ಡ ಕೇಶವ ರೆಡ್ಡಿ ಅವರು, ಕಾಂಗ್ರೆಸ್ ಪಕ್ಷದಿಂದ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳಾಗಿಲ್ಲ. ಶ್ರೀರಾಮುಲು ಅವರು ತಮ್ಮ ಅಧಿಕಾರ ಅವಧಿಯಲ್ಲಿ ಜಿಲ್ಲೆಯ ಪ್ರಗತಿಗಾಗಿ ಸಾಕಷ್ಟು ಕಾರ್ಯಗಳನ್ನು ಕೈಗೊಂಡಿದ್ದಾರೆ ಎಂದರು.
ಮಾಜಿ ಶಾಸಕ ಜಿ. ಸೋಮಶೇಖರ ರೆಡ್ಡಿ ಮಾತನಾಡಿ, ನರೇಂದ್ರ ಮೋದಿ ದೇಶದ ರಕ್ಷಣೆಗಾಗಿ ತಮ್ಮ ಜೀವನ ಸವೆಸುತ್ತಿದ್ದಾರೆ. ದೇಶದಲ್ಲಿ ಅಷ್ಟೆ ಅಲ್ಲ; ಇಡೀ ಪ್ರಪಂಚದಲ್ಲಿ ಮೋದಿ ಅವರ ಹೆಸರನ್ನು ಕೊಂಡಾಡುತ್ತಿದ್ದಾರೆ. ಭಾರತದ ಸಮಗ್ರ ಅಭಿವೃದ್ಧಿ ಹಾಗೂ ರಕ್ಷಣೆಗೆ ನರೇಂದ್ರ ಮೋದಿ ಶ್ರಮಿಸುತ್ತಿದ್ದಾರೆ ಎಂದರು.ಬಿ. ಶ್ರೀರಾಮುಲು ಮಾತನಾಡಿ, ಕಾಂಗ್ರೆಸ್ ಅಭಿವೃದ್ಧಿ ಪರವಾಗಿಲ್ಲ. ಕಾಂಗ್ರೆಸ್‌ನಿಂದ ದೇಶದ ಪ್ರಗತಿ ಸಾಧ್ಯವೇ ಇಲ್ಲ. ಜಾಗತಿಕವಾಗಿ ಭಾರತಕ್ಕೆ ದೊಡ್ಡ ಸ್ಥಾನ ತಂದುಕೊಟ್ಟಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮತ್ತಷ್ಟು ಶಕ್ತಿ ತುಂಬುವ ಕೆಲಸವಾಗಬೇಕು. ಈ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಬೇಕು ಎಂದು ಕೋರಿದರು.
ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ದೊಡ್ಡ ಕೇಶವ ರೆಡ್ಡಿ ಹಾಗೂ ಭೀಮರೆಡ್ಡಿ ಅವರ ಮನೆಗೆ ಭೇಟಿ ನೀಡಿದ ಶ್ರೀರಾಮುಲು ಅವರು ಚುನಾವಣೆಯಲ್ಲಿ ಬೆಂಬಲಿಸುವಂತೆ ಮನವಿ ಮಾಡಿದರು.