ಮೃತ ಬಾಲಕಿ ಹೃತೀಕ್ಷಾ ಕುಟುಂಬಸ್ಥರಿಗೆ ಬಿ.ವೈ.ವಿಜಯೇಂದ್ರ ಸಾಂತ್ವನ

KannadaprabhaNewsNetwork |  
Published : Jun 01, 2025, 03:22 AM IST
31ಕೆಎಂಎನ್ ಡಿ18 | Kannada Prabha

ಸಾರಾಂಶ

ಮದ್ದೂರುಪಟ್ಟಣದ ಮಳವಳ್ಳಿ ರಸ್ತೆಯ ಬಿಜೆಪಿ ಕಚೇರಿಯಲ್ಲಿ ಮೃತ ಬಾಲಕಿಯ ಕುಟುಂಬದವರನ್ನು ಭೇಟಿ ಮಾಡಿದ ಬಿ.ವಿಜಯೇಂದ್ರ ಘಟನೆ ಕುರಿತಂತೆ ಮಾಹಿತಿ ಪಡೆದುಕೊಂಡರು. ನಂತರ ಬಿಜೆಪಿ ವತಿಯಿಂದ ಕುಟುಂಬಕ್ಕೆ ಆರ್ಥಿಕ ಸಹಾಯ ನೀಡಿದರು. ಈ ವೇಳೆ ಹೃತೀಕ್ಷಾ ಕುಟುಂಬದವರು ನಮಗೆ ಹಣ ಬೇಡ ಮಗಳ ಸಾವಿಗೆ ನ್ಯಾಯ ದೊರಕಿಸಿಕೊಡಿ ಎಂದು ಅಂಗಲಾಚಿದರು.

ಕನ್ನಡಪ್ರಭ ವಾರ್ತೆ ಮದ್ದೂರು

ಮಂಡ್ಯದಲ್ಲಿ ಸಂಚಾರಿ ಪೊಲೀಸರ ವಾಹನ ತಪಾಸಣೆ ವೇಳೆ ಆಯತಪ್ಪಿ ಬಿದ್ದು ಮೃತಪಟ್ಟ ತಾಲೂಕಿನ ಗೊರವನಹಳ್ಳಿ ಹೃತೀಕ್ಷಾ ಪೋಷಕರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವಿಜಯೇಂದ್ರ ಸಾಂತ್ವನ ಹೇಳಿದರು.

ಪಟ್ಟಣದ ಮಳವಳ್ಳಿ ರಸ್ತೆಯ ಬಿಜೆಪಿ ಕಚೇರಿಯಲ್ಲಿ ಮೃತ ಬಾಲಕಿಯ ಕುಟುಂಬದವರನ್ನು ಭೇಟಿ ಮಾಡಿದ ಬಿ.ವಿಜಯೇಂದ್ರ ಘಟನೆ ಕುರಿತಂತೆ ಮಾಹಿತಿ ಪಡೆದುಕೊಂಡರು. ನಂತರ ಬಿಜೆಪಿ ವತಿಯಿಂದ ಕುಟುಂಬಕ್ಕೆ ಆರ್ಥಿಕ ಸಹಾಯ ನೀಡಿದರು.

ಈ ವೇಳೆ ಹೃತೀಕ್ಷಾ ಕುಟುಂಬದವರು ನಮಗೆ ಹಣ ಬೇಡ ಮಗಳ ಸಾವಿಗೆ ನ್ಯಾಯ ದೊರಕಿಸಿಕೊಡಿ ಎಂದು ಅಂಗಲಾಚಿದರು. ಬಳಿಕ ಕುಟುಂಬದವರನ್ನು ಸಮಾಧಾನಪಡಿಸಿದ ಬಿ.ವಿಜಯೇಂದ್ರ, ಮನ್ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ಹಾಗೂ ಮುಖಂಡರು ನಿಮ್ಮ ದುಃಖದಲ್ಲಿ ನಾವು ಭಾಗಿಗಳಾಗಿದ್ದೇವೆ ಪರಿಸ್ಥಿತಿಯನ್ನು ಧೈರ್ಯದಿಂದ ಎದುರಿಸಿ ಎಂದು ಸಲಹೆ ನೀಡಿದರು.

ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯ ಸಿದ್ದರಾಮಯ್ಯ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅಶೋಕ್ ಜೈರಾಮ್, ಇಂಡವಾಳು ಸಚ್ಚಿದಾನಂದ, ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಸಿ. ಕೆ.ಸತೀಶ್, ಪ್ರಧಾನ ಕಾರ್ಯದರ್ಶಿ ಎಂ.ಸಿ.ಸಿದ್ದು, ಕೆಂಪಬೋರಯ್ಯ, ಎಂ.ಸತೀಶ್, ಮಹಿಳಾ ಘಟಕದ ಶ್ವೇತ, ರಂಜಿತಾ, ಕಾಂತಮಣಿ, ಜಿಪಂ ಮಾಜಿ ಸದಸ್ಯ ಸಾದೊಳಲು ಕೃಷ್ಣೇಗೌಡ, ಮನು, ಡಾಬಾ ಕಿಟ್ಟಿ ಸೇರಿದಂತೆ ಹಲವು ಮುಖಂಡರುಗಳು ಇದ್ದರು.ಇಂದು ಶಾಸಕ ಕೆ.ಎಂ.ಉದಯ್ 51ನೇ ಜನ್ಮದಿನೋತ್ಸವ ಆಚರಣೆ

ಮದ್ದೂರು: ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಂ.ಉದಯ್ ಅವರ 51ನೇ ಹುಟ್ಟುಹಬ್ಬವನ್ನು ಶಾಸಕರು ಅನುಪಸ್ಥಿತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು, ಬೆಂಬಲಿಗರು ಮಾನವೀಯ ಮೌಲ್ಯಗಳನ್ನು ಪ್ರತಿಬಿಂಬಿಸುವ ರೀತಿಯಲ್ಲಿ ಸಮುದಾಯ ಸೇವೆ ಮೂಲಕ ಆಚರಿಸಲು ನಿರ್ಧರಿಸಿದ್ದಾರೆ. ಬೆಳಗ್ಗೆ 8 ಗಂಟೆಗೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು-ಹಂಪಲು ಹಾಗೂ ಬಾದಾಮಿ ಹಾಲು ವಿತರಣೆ ಮಾಡಲಾಗುವುದು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಅಭಿಮಾನಿಗಳ ಬಳಗ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ತಿಳಿಸಿದ್ದಾರೆ.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ