ಕನ್ನಡಪ್ರಭ ವಾರ್ತೆ ಉಡುಪಿ
ಗುರುವಾರ ಉಡುಪಿ ಕೃಷ್ಣಮಠದ ರಾಜಾಂಗಣದಲ್ಲಿ ಬೆಂಗಳೂರಿನ ಭಾರತೀಯ ವಿದ್ವತ್ ಪರಿಷತ್, ನವದೆಹಲಿಯ ಕೇಂದ್ರಿಯ ಸಂಸ್ಕೃತ ವಿಶ್ವವಿದ್ಯಾನಿಲಯ ಮತ್ತು ಪರ್ಯಾಯ ಪುತ್ತಿಗೆ ಮಠದ ಆಶ್ರಯದಲ್ಲಿ ನಡೆಯುತ್ತಿರುವ 3 ದಿನಗಳ 51ನೇ ಅಖಿಲ ಭಾರತ ಪ್ರಾಚ್ಯವಿದ್ಯಾ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.
ಸಂಸ್ಕೃತದಲ್ಲಿ ಅಧ್ಯಯನ ಮಾಡಿದವರಿಗೆ ಎಲ್ಲ ಆಧುನಿಕ ಜ್ಞಾನ ಲಭ್ಯವಾಗುತ್ತವೆ. ಸಂಸ್ಕೃತದಲ್ಲಿ ಅಧ್ಯಯನ ಮಾಡಿದವರು ವಿಶ್ವಮಾನ್ಯರಾಗುವುದಕ್ಕೆ ಸಾಧ್ಯವಿದೆ ಎಂದ ಅವರು, ಹರಿದ್ವಾರದ ಪತಂಜಲಿ ವಿ.ವಿ.ಯಲ್ಲಿ ಸಂಸ್ಕೃತ ಅಧ್ಯಯನ ಮಾಡಬಯಸುವ ಉಡುಪಿಯ ವಿದ್ಯಾರ್ಥಿಗಳ ಖರ್ಚು ವೆಚ್ಚವನ್ನು ತಾವೇ ನೋಡಿಕೊಳ್ಳುವುದಾಗಿ ರಾಮ್‌ದೇವ್ ಘೋಷಿಸಿದರು.ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಅತಿಥೇಯ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು, ಪ್ರಾಚೀನ ವಿದ್ಯೆ ಮತ್ತು ವಿದ್ಯಾದೃಷ್ಟಿಕೋನಗಳು ಕಾಲ ಪರೀಕ್ಷೆಗೊಳಗಾಗಿ ಅತ್ಯಂತ ಶ್ರೇಷ್ಠ ಎಂದು ಸಾಬೀತಾಗಿವೆ. ಮತ್ತೆ ಈ ವಿದ್ಯೆ ಅನುಷ್ಠಾನಕ್ಕೆ ಬರಬೇಕಾದುದು ಅತ್ಯಗತ್ಯವಾಗಿದೆ ಎಂದಭಿಪ್ರಾಯಪಟ್ಟರು.
ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರು, ಭಂಡಾರಕೇರಿ ಮಠದ ಶ್ರೀ ವಿದ್ಯೇಶ ತೀರ್ಥರು, ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥರು ಮತ್ತು ಪುತ್ತಿಗೆ ಮಠದ ಕಿರಿಯ ಶ್ರೀ ಸುಶ್ರೀಂದ್ರ ತೀರ್ಥರು ಆಶೀರ್ವಚನ ನೀಡಿದರು.
ಮುಖ್ಯ ಅತಿಥಿಗಳಾಗಿ ಭಾರತ ಭಾಷಾ ಸಮಿತಿಯ ಅಧ್ಯಕ್ಷ ಪದ್ಮಶ್ರೀ ಚಮು ಕೃಷ್ಣ ಶಾಸ್ತ್ರೀ, ದೆಹಲಿಯ ಕೇಂದ್ರೀಯ ಸಂಸ್ಕೃತ ವಿ.ವಿ.ಯ ಕುಲಪತಿ ಪ್ರೊ. ಶ್ರೀನಿವಾಸ ವರಖೇಡಿ ಆಗಮಿಸಿದ್ದರು.
ಗುರುವಾರ ರಾಜಾಂಗಣದಲ್ಲಿ ನಡೆದ ಅಖಿಲ ಬಾರತೀಯ ಪ್ರಾಚ್ಯವಿದ್ಯಾ ಸಮ್ಮೇಳದ ಉದ್ಘಾಟನಾ ಸಮಾರಂಭದಲ್ಲಿ ಶಿಖರೋಪನ್ಯಾಸ ನೀಡಿದರು.
ಆಂಗ್ಲರು ಸಂಸ್ಕೃತ ಭಾಷೆಯ ವಿರುದ್ಧವೂ ಷಡ್ಯಂತ್ರ ಹೂಡಿದ್ದರು. ನಮ್ಮ ದೇಶದ ಸಂಸ್ಕೃತಿಯ ಬೇರು ಇರುವುದೇ ಸಂಸ್ಕೃತ ಭಾಷೆಯಲ್ಲಿ. ಸಂಸ್ಕೃತಿ ಉಳಿಯಬೇಕಾದರೆ ಸಂಸ್ಕೃತ ಉಳಿಸಬೇಕು. ಅದಕ್ಕಾಗಿ ಮೊದಲು ನಮ್ಮ ದೇಶದ ಇತಿಹಾಸದ ಸಮಗ್ರ ಅಧ್ಯಯನ ನಡೆಯಬೇಕಾಗಿದೆ ಎಂದವರು ಒತ್ತಿ ಹೇಳಿದರು.