ಕನಕಪುರ: ದೇಶದ ರಾಜಕೀಯ ಇತಿಹಾಸದಲ್ಲಿ ಸುದೀರ್ಘ ಕಾಲ ಕೇಂದ್ರ ಸಚಿವರಾಗಿ ನಿಸ್ವಾರ್ಥ ಸೇವೆ ಸಲ್ಲಿಸಿದ ಹೆಗ್ಗಳಿಕೆ ಬಾಬು ಜಗಜೀವನ್ ರಾಮ್ ಅವರದ್ದಾಗಿದೆ ಎಂದು ಕೆಪಿಸಿಸಿ ಸಂಯೋಜಕ ನೀಲಿ ರಮೇಶ್ ತಿಳಿಸಿದರು. ತಾಲೂಕು ಕಚೇರಿಯಲ್ಲಿ ಆಯೋಜಿಸಿದ್ದ ಬಾಬು ಜಗಜೀವನ್ ರಾಮ್ ಅವರ 40ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಭಾರತದ ಮಾಜಿ ಉಪ ಪ್ರಧಾನಿ ಮತ್ತು ಸಾಮಾಜಿಕ ನ್ಯಾಯದ ಹರಿಕಾರ ಡಾ ಬಾಬು ಜಗಜೀವನ್ ರಾಮ್ ಶೋಷಿತರ, ದಲಿತರ ಹಾಗೂ ದಮನಿತರ ಹಕ್ಕುಗಳಿಗಾಗಿ ತಮ್ಮ ಜೀವನ ಮುಡಿಪಾಗಿಟ್ಟವರು ಎಂದರು.
ದೇಶದ ಕಾರ್ಮಿಕ ಸಚಿವರಾಗಿ, ಕಾರ್ಮಿಕರ ಕಲ್ಯಾಣಕ್ಕಾಗಿ ಕಾನೂನುಗಳನ್ನು ರೂಪಿಸಿದ ಹೆಗ್ಗಳಿಕೆ, ಉಪ ಪ್ರಧಾನಿಯಾಗಿ ದೇಶ ಮುನ್ನಡೆಸಿದ ಅವರ ಆದರ್ಶಗಳು ನಮಗೆ ಸದಾ ಪ್ರೇರಣೆ. ದೇಶದಲ್ಲಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯುವ ಸಲುವಾಗಿ ಈ ದಿನವನ್ನು ಸರ್ಕಾರ ಸಮತಾ ದಿನವನ್ನಾಗಿ ಆಚರಿಸುತ್ತಿರುವುದು ಹೆಮ್ಮೆಯ ವಿಷಯ ಎಂದರು.
ಕಾರ್ಯಕ್ರಮದಲ್ಲಿ ಗ್ರೇಡ್-2 ತಹಸೀಲ್ದಾರ್ ಮನೋಹರ್, ತಾಪಂ ಇಒ ಅವಿನಾಶ್, ಸಮಾಜ ಕಲ್ಯಾಣ ಅಧಿಕಾರಿ ಜಯಪ್ರಕಾಶ್, ಎ.ಒ.ಬಾಬು ಹೊಸದುರ್ಗ, ಚೆಲುವರಾಜು ಶಿವನಹಳ್ಳಿ, ಶಿವಲಿಂಗಯ್ಯ, ಕನಕಪುರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಮೋಹನ್, ಪ್ರಧಾನ ಕಾರ್ಯದರ್ಶಿ ವೆಂಕಟಪ್ಪ, ಸಮುದಾಯದ ಮುಖಂಡರಾದ ಮಾಲಕೊಂಡಯ್ಯಕೋಟೆ ಮಂಜುನಾಥ್, ಕುರುಪೇಟೆ ಶಿವಕುಮಾರ್, ಮೆಳೆಕೋಟೆ ಕುಮಾರ್, ನರಸಿಂಹ ಹಲಸೂರು, ವಿಕ್ರಂ ಜೀವನ್ ಹಾಗೂ ಸಿಬ್ಬಂದಿ ವರ್ಗ ಮತ್ತು ಸಮುದಾಯದ ಮುಖಂಡರು ಹಾಜರಿದ್ದರು.ಕೆ ಕೆ ಪಿ ಸುದ್ದಿ 01: ಬಾಬು ಜಗಜೀವನರಾಂ ಜಯಂತಿ.