ಹಸಿರುಕ್ರಾಂತಿಯ ಹರಿಕಾರ ಬಾಬು ಜಗಜೀವನ್‌ರಾಂ

KannadaprabhaNewsNetwork |  
Published : Apr 06, 2026, 01:45 AM IST
5ಎಚ್ಎಸ್ಎನ್5 :  | Kannada Prabha

ಸಾರಾಂಶ

ಡಾ. ಬಾಬು ಜಗಜೀವನರಾಮ್‌ರವರ ಹಸಿರು ಕ್ರಾಂತಿಯಿಂದ ದೇಶದಲ್ಲಿ ಬಡವರಿಗೆ ಆಹಾರದ ಕೊರತೆ ದೂರವಾಯಿತು. ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಜೀವನಕ್ಕೂ ಆದ್ಯತೆ ಕೊಟ್ಟಿದ್ದರಿಂದ ಇಂದು ಸಮಾಜದಲ್ಲಿ ಆಹಾರ ಪದಾರ್ಥಗಳ ಕೊರತೆ ಇಲ್ಲ. ಜತೆಗೆ ನಾವೆಲ್ಲರೂ ಸಮಾನರು ಎಂಬ ಮನೋಭಾವನೆ ಪ್ರತಿಯೊಬ್ಬರು ಬೆಳೆಸಿಕೊಳ್ಳಬೇಕು. ಡಾ.ಬಾಬು ಜಗಜೀವನ ರಾಂ ರವರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ಮುನ್ನಡೆಯಬೇಕು. ಮಹಾಪುರುಷರ, ಮಹಾನಾಯಕರ, ಯೋಗಿಗಳ ಜಯಂತಿ ಮಾಡುವ ಉದ್ದೇಶವನ್ನು ಸಫಲಗೊಳಿಸಬೇಕು ಎಂದರು.

ಕನ್ನಡಪ್ರಭ ವಾರ್ತೆ ಬೇಲೂರು ಸಮಾಜ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಅಚರಣಾ ಸಮಿತಿಯಿಂದ ವಿವಿಧ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಭಾನುವಾರ ಡಾ. ಬಾಬು ಜಗಜೀವನ ರಾಂರವರ 119ನೇ ಜಯಂತಿಯನ್ನು ಆಚರಿಸಲಾಯಿತು.ತಹಸೀಲ್ದಾರ್ ಶ್ರೀಧರ್‌ ಕಂಕನವಾಡಿ ಮಾತನಾಡಿ, ಡಾ. ಬಾಬು ಜಗಜೀವನರಾಮ್‌ರವರ ಹಸಿರು ಕ್ರಾಂತಿಯಿಂದ ದೇಶದಲ್ಲಿ ಬಡವರಿಗೆ ಆಹಾರದ ಕೊರತೆ ದೂರವಾಯಿತು. ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಜೀವನಕ್ಕೂ ಆದ್ಯತೆ ಕೊಟ್ಟಿದ್ದರಿಂದ ಇಂದು ಸಮಾಜದಲ್ಲಿ ಆಹಾರ ಪದಾರ್ಥಗಳ ಕೊರತೆ ಇಲ್ಲ. ಜತೆಗೆ ನಾವೆಲ್ಲರೂ ಸಮಾನರು ಎಂಬ ಮನೋಭಾವನೆ ಪ್ರತಿಯೊಬ್ಬರು ಬೆಳೆಸಿಕೊಳ್ಳಬೇಕು. ಡಾ.ಬಾಬು ಜಗಜೀವನ ರಾಂ ರವರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ಮುನ್ನಡೆಯಬೇಕು. ಮಹಾಪುರುಷರ, ಮಹಾನಾಯಕರ, ಯೋಗಿಗಳ ಜಯಂತಿ ಮಾಡುವ ಉದ್ದೇಶವನ್ನು ಸಫಲಗೊಳಿಸಬೇಕು ಎಂದರು.ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗ್ರೇಡ್-೧ ಎಚ್. ಪಿ. ಲಿಂಗರಾಜು ಮಾತನಾಡಿ, ಬಾಬೂಜಿ ಎಂದೇ ಹೆಸರಾಗಿದ್ದ ಡಾ. ಬಾಬು ಜಗಜೀವನ ರಾಂ ರವಡಿu?ನಿಸ್ವಾರ್ಥ ಸೇವೆಯಿಂದ ಸಮಾಜಕ್ಕೆ ಆದರ್ಶ ಪ್ರಾಯರಾಗಿದ್ದಾರೆ. ಕೇಂದ್ರ ಮಂತ್ರಿ ಮಂಡಲದ ಸದಸ್ಯರಾಗಿ ಅಪಾರ ಆಡಳಿತ ಅನುಭವ ಗಳಿಸಿದ ಅವರು ಸಾರಿಗೆ, ಆಹಾರ, ರೈಲ್ವೆ, ಕೃಷಿ ಮತ್ತು ಸಮುದಾಯ ಅಭಿವೃದ್ಧಿ, ಕಾರ್ಮಿಕ ಮತ್ತು ಉದ್ಯೋಗ ಪುನರ್ವಸತಿ ಕೆಲಸವನ್ನು ಮಾಡಿದ ಹಿರಿಮೆ ಅವರದು ಎಂದರು.ಪೊಲೀಸ್ ಇನ್ಸ್‌ಪೆಕ್ಟರ್‌ ರೇವಣ್ಣ, ಶಿಕ್ಷಣ ಇಲಾಖೆಯ ಇಸಿಒ ಶಿವಪ್ಪ, ಹಿಂದುಳಿದ ವರ್ಗಗಳ ಇಲಾಖೆಯ ವಿಸ್ತರಣಾಧಿಕಾರಿ ಮುದುಕಪ್ಪ, ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕ ಭೈರೇಶ್, ವಾರ್ಡನ್‌ಗಳಾದ ನಾಗೇಶ್, ಮೀನಾಕ್ಷಿ, ಗೊಲ್ಲಾಳಪ್ಪ, ಶಿವಪುತ್ರಪ್ಪ ಸೇರಿದಂತೆ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಟ್ಟಸೋಗೆಯಲ್ಲಿ ಶಾಸಕ ಮಂಜು ಕ್ರಿಕೆಟ್‌ ಕಪ್‌
ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹ ಪ್ರತಿಷ್ಠಾಪನೆ