ಕೊಪ್ಪಳ:
ಶನಿವಾರ ನಗರದ ಸಾಹಿತ್ಯ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಆಶ್ರಯದಲ್ಲಿ ಆಯೋಜಿಸಿದ್ದ ಹಸಿರು ಕ್ರಾಂತಿ ಹರಿಕಾರ ಹಾಗೂ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಮ್ ಅವರ 118ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ ಹಸಿರು ಕ್ರಾಂತಿ ಮಾಡಿದ ಡಾ. ಬಾಬು ಜಗಜೀವನರಾಮ್ ಅವರು, ಕೃಷಿ ಸಚಿವರಾಗಿ ಹೊಸ-ಹೊಸ ಕಲ್ಪನೆ, ಯೋಜನೆ ತರುವ ಮೂಲಕ ಕೃಷಿಯಲ್ಲಿ ಅಧುನಿಕರಣ ತಂದರು ಎಂದು ಬಣ್ಣಿಸಿದರು.
ಅಸ್ಪೃಶ್ಯತೆ ಹೋಗಲಾಡಿಸಬೇಕು, ಸಮಾಜಕ್ಕೆ ಕೊಡುಗೆ ನೀಡಬೇಕೆಂಬ ಉದ್ದೇಶದಿಂದ ಜಗಜೀವನರಾಮ್ ಅವರು ಹಲವಾರು ಹೋರಾಟ ಮಾಡಿದ್ದಾರೆ. ಇಂತಹ ಮಹಾನ ವ್ಯಕ್ತಿಗಳು ಕೇವಲ ಒಂದೇ ಸಮುದಾಯಕ್ಕೆ ಸೀಮಿತವಲ್ಲ. ಈ ಹಿನ್ನೆಲೆಯಲ್ಲಿ ಮಹನೀಯರ ಆದರ್ಶವನ್ನು ಯುವ ಜನಾಂಗಕ್ಕೆ ಪರಿಚಯಿಸಲು ಜಯಂತಿಗಳನ್ನು ಸರ್ಕಾರ ಆಚರಿಸುತ್ತಿದೆ. ಡಾ. ಬಿ.ಆರ್. ಅಂಬೇಡ್ಕರ್, ಡಾ. ಬಾಬು ಜಗಜೀವನರಾಮ್, ಕನಕದಾಸರು, ವಾಲ್ಮೀಕಿ ಮಹರ್ಷಿಗಳು, ಬಸವಣ್ಣ, ಪುರಂದರದಾಸರು, ಮಹಾತ್ಮ ಗಾಂಧೀಜಿ ಸೇರಿದಂತೆ ಹಲವಾರು ಮಹನೀಯರ ಆದರ್ಶ ಯುವಪೀಳಿಗೆಗೆ ತಿಳಿಸುವ ಕೆಲಸವಾಗಬೇಕು ಎಂದು ಹೇಳಿದರು.ಸಂಸದ ಕೆ. ರಾಜಶೇಖರ ಹಿಟ್ನಾಳ ಮಾತನಾಡಿ, ಬಾಬು ಜಗಜೀವನರಾಮ್ ಅವರು ದೇಶದಲ್ಲಿ ಆಹಾರದ ಕೊರತೆಯಿದ್ದ ವೇಳೆ ಹಲವು ವಸ್ತುಗಳನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳುವ ಸ್ಥಿತಿಯಿತ್ತು. ಆಗ ಕೃಷಿ ಸಚಿವರಾಗಿದ್ದ ಇವರು ಕೃಷಿ ಕ್ಷೇತ್ರದಲ್ಲಿ ಅಭಿವೃದ್ಧಿ ಕೈಗೊಂಡು ಹಸಿರು ಕ್ರಾಂತಿಯನ್ನುಂಟು ಮಾಡಿ, ಭಾರತವನ್ನು ಸ್ವಾಭಿಮಾನ ದೇಶವನ್ನಾಗಿ ಮಾಡಿದ್ದಾರೆ ಎಂದರು.
ಮೆರವಣಿಗೆ:
ಕಾರ್ಯಕ್ರಮದ ನಿಮಿತ್ತ ಬಾಬು ಜಗಜೀವನರಾಮ್ ಅವರ ಭಾವಚಿತ್ರದ ಮೆರವಣಿಗೆ ತಹಸೀಲ್ದಾರ್ ಕಚೇರಿಯಿಂದ ಆರಂಭಗೊಂಡು ಸಾಲಾರಜಂಗ್ ರಸ್ತೆ, ಅಶೋಕ ವೃತ್ತದ ಮೂಲಕ ಸಾಹಿತ್ಯ ಭವನದ ವರೆಗೆ ಅದ್ಧೂರಿಯಾಗಿ ನಡೆಯಿತು.