ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ನಗರದ ತರಾಸು ರಂಗಮಂದಿರದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ವತಿಯಿಂದ ಹಮ್ಮಿಕೊಂಡಿದ್ದ ಭಾರತದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್‍ರಾಮ್‍ರವರ 118ನೇ ಜನ್ಮ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಬಾಬೂಜಿ ಅವರು ಕೇವಲ ರಾಜಕಾರಣಿ ಅಲ್ಲ, ಒಂದು ಚಳುವಳಿಯೇ ಆಗಿದ್ದರು. ತಮ್ಮ ಜೀವನದ ಎಲ್ಲಾ ಹಂತಗಳಲ್ಲಿ ದಲಿತ, ಹಿಂದುಳಿದ ವರ್ಗ, ಶೋಷಿತ ಸಮುದಾಯಗಳಿಗೆ ಧ್ವನಿ ನೀಡಿದ ಧೀಮಂತ ನಾಯಕ ಎಂದು ಬಣ್ಣಿಸಿದರು.
ಬಾಬೂಜಿ ಅವರು 1908ರ ಏ.5 ರಂದು ಬಿಹಾರದ ಸಣ್ಣ ಗ್ರಾಮವಾದ ಚಾಂದ್ವದ, ಭೋಜಪುರ ಜಿಲ್ಲೆಯ ಒಂದು ಹಿಂದುಳಿದ ಕುಟುಂಬದಲ್ಲಿ ಜನಿಸಿದರು. ಬಾಲ್ಯದಿಂದಲೇ ಜಾತಿ ಮೂಲದ ಭೇದಭಾವದ ನೋವು ಅನುಭವಿಸಿದ ಅವರು, ಅದರ ವಿರುದ್ಧ ಧೈರ್ಯವಾಗಿ ಪ್ರತಿರೋಧ ವ್ಯಕ್ತಪಡಿಸುತ್ತಾ ಶಿಕ್ಷಣ, ಸಾಮಾಜಿಕ ಚಟುವಟಿಕೆ ಹಾಗೂ ರಾಜಕೀಯದ ಮೂಲಕ ತಮ್ಮನ್ನು ತಾವೇ ರೂಪಿಸಿಕೊಂಡರು. ಬಡತನ, ಹಿಂಸೆಯ ನಡುವೆಯೂ ಅವರು ಸಾಧನೆಯ ಶಿಖರ ತಲುಪಿದರು ಎಂದು ಹೇಳಿದರು.ಜಗಜೀವನ್ ರಾಮ್ ಅವರು ಗಾಂಧೀಜಿಯಯವರ ತತ್ವ, ಆದರ್ಶಗಳಿಂದ ಪ್ರಭಾವಿತರಾಗಿ, ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದರು. ನಿಷ್ಟುರ ನಾಯಕತ್ವದಿಂದ ಹಲವು ಬಾರಿ ಸಂಸತ್ತಿಗೆ ಆಯ್ಕೆಯಾದರು ಮತ್ತು ಸಚಿವರಾಗಿ ವಿವಿಧ ಖಾತೆಗಳನ್ನು ನಿಭಾಯಿಸಿದರು. ಡಾ.ಬಾಬು ಜಗಜೀವನರಾಂ ಅವರು ದಲಿತರ ಸಾಮಾಜಿಕ ಸಮಾನತೆ ಮತ್ತು ಸಮಾನ ಹಕ್ಕುಗಳಿಗಾಗಿ ಹೋರಾಡಿದರು. ಅಲ್ಲದೇ 1979ರಲ್ಲಿ ಭಾರತದ ಪ್ರಥಮ ದಲಿತ ಉಪಪ್ರಧಾನ ಮಂತ್ರಿಗಳಾಗಿ ಕಾರ್ಯ ನಿರ್ವಹಿಸುವ ಮೂಲಕ ಸಮಾಜದಲ್ಲಿ ಸಮಾನತೆ, ಸಹಬಾಳ್ವೆ ಮತ್ತು ಮಾನವೀಯ ಮೌಲ್ಯಗಳ ಪ್ರತಿನಿಧಿಯಾಗಿದ್ದರು. ಅಲ್ಲದೇ ಅತ್ಯಂತ ನೀತಿವಂತ, ಶ್ರಮಜೀವಿ, ಹಾಗೂ ಪ್ರಜಾಪ್ರಭುತ್ವದ ಸತ್ಯವಾದ ಆರಾಧಕರಾಗಿದ್ದರು ಎಂದು ಹೇಳಿದರು.
2024 ಆ.1 ರಂದು ಸರ್ವೋಚ್ಛ ನ್ಯಾಯಾಲಯ ಈಗ ನೀಡಿರುವ ಮೀಸಲಾತಿಯಲ್ಲಿಯೇ ಒಳಮೀಸಲಾತಿ ಹಂಚಿಕೆ ಮಾಡಬಹುದು ಎಂದು ತೀರ್ಪು ನೀಡಿದೆ. ಕೇಂದ್ರ ಸರ್ಕಾರ ಸಹ ಒಳ ಮೀಸಲಾತಿ ನೀಡಲು ಯಾವುದೇ ಅಡ್ಡಿಯಿಲ್ಲ ಎಂದು ತಿಳಿಸಿದೆ. ರಾಜ್ಯ ಸರ್ಕಾರದ ಮೇಲೆ ಒತ್ತಡ ತಂದು ಕೂಡಲೇ ಒಳ ಮೀಸಲಾತಿ ಜಾರಿಗೆ ಪ್ರಯತ್ನಿಸಬೇಕಿದೆ. ಈ ಮೂಲಕ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭಿವೃದ್ಧಿ ಬಗ್ಗೆ ಡಾ.ಬಾಬು ಜಗಜೀವನ್ ರಾಮ್ ಕಂಡಿದ್ದ ಕನಸನ್ನು ಸಾಕಾರ ಮಾಡಬೇಕಿದೆ ಎಂದು ಹೇಳಿದರು.
ನಿವೃತ್ತ ಉಪನ್ಯಾಸಕ ಡಾ.ವಿ.ಬಸವರಾಜ್ ಉಪನ್ಯಾಸ ನೀಡಿದರು. ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ, ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನ್ ಖುರೇಷಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಪೌರಾಯುಕ್ತೆ ರೇಣುಕಾ, ದಲಿತ ಮುಖಂಡರಾದ ಎಸ್.ಜಯಣ್ಣ, ಬಿ.ರಾಜಪ್ಪ, ನಿರಂಜನಮೂರ್ತಿ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಇದ್ದರು.
ಅದ್ಧೂರಿ ಮೆರವಣಿಗೆ: