ದೇಶ, ಆಹಾರ ಭದ್ರತೆಗಾಗಿ ಹೋರಾಡಿದ ಬಾಬೂಜಿ: ದಿನೇಶ್‌ ಗುಂಡೂರಾವ್‌

KannadaprabhaNewsNetwork |  
Published : Apr 08, 2025, 12:34 AM IST
ಕಾರ್ಯಕ್ರಮದಲ್ಲಿ ಮಾತನಾಡುತ್ತಿರುವ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌. | Kannada Prabha

ಸಾರಾಂಶ

ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಂ ಅವರ 118ನೇ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಮಂಗಳೂರು

ದೇಶದ ಆಂತರಿಕ- ಬಾಹ್ಯ ಭದ್ರತೆ ಹಾಗೂ ನಾಗರಿಕರಿಗೆ ಆಹಾರ ಭದ್ರತೆಗಾಗಿ ಅಹರ್ನಿಶಿ ದುಡಿದ ಮಹಾನ್ ವ್ಯಕ್ತಿ ಡಾ. ಬಾಬು ಜಗಜೀವನ್ ರಾಂ ಎಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶನಿವಾರ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಂ ಅವರ 118ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶದ ಕೃಷಿ ಸಚಿವರಾಗಿ ಬಾಬೂಜಿ ಅವರು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರ ಹಸಿರು ಕ್ರಾಂತಿಯ ಯೋಜನೆಗೆ ಬೆನ್ನೆಲುಬಾಗಿ ನಿಂತು ದೇಶದ ಕೃಷಿ ಕ್ಷೇತ್ರದಲ್ಲಿ ಅದ್ಭುತ ಪ್ರಗತಿಗೆ ಕಾರಣರಾಗಿದ್ದಾರೆ. ಆಹಾರಕ್ಕಾಗಿ ನಾಗರಿಕರು ಸಂಕಟಪಡುತ್ತಿದ್ದ ಕಾಲವನ್ನು ಆಹಾರ ಧಾನ್ಯಗಳ ಹೆಚ್ಚುವರಿ ಸಂಗ್ರಹವಾಗಿ ಪರಿವರ್ತಿಸಲು ಬಾಬೂಜಿ ಸೇವೆ ಸಲ್ಲಿಸಿದ್ದಾರೆ ಎಂದು ಉಸ್ತುವಾರಿ ಸಚಿವರು ಸ್ಮರಿಸಿದರು.

ಮೀನುಗಾರಿಕೆ ಕಾಲೇಜಿನ ಪ್ರಾಧ್ಯಾಪಕ ಡಾ.ಶಿವಕುಮಾರ್ ಮಗದ ವಿಶೇಷ ಉಪನ್ಯಾಸ ನೀಡಿದರು. ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಮತ್ತಿತರರು ಇದ್ದರು.

ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಡಾ.ಬಿ.ಎಸ್. ಹೇಮಲತಾ ಸ್ವಾಗತಿಸಿದರು. ಸಹಾಯಕ ನಿರ್ದೇಶಕ ಸುರೇಶ್ ಅಡಿಗ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಗವಂತನ ಶಕ್ತಿ ಪಡೆದವರಿಂದ ಡಿಕೆಶಿ ಸಿಎಂ ಆಗುವ ದಿನಾಂಕ ನಿಗದಿ : ಇಕ್ಬಾಲ್
ಜನ ನಂಗೆ ಇನ್ನೊಂದು ಅವಕಾಶ ಕೊಡಲಿ : ಎಚ್ಡಿಕೆ